ಲಂಚ: ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ

CBFC: ‘ಅಡವಿ’ ಹೆಸರಿನ ಕನ್ನಡ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಸೆನ್ಸಾರ್ ಮಂಡಳಿ ಅಧಿಕಾರಿಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟು ಲಂಚ ಪಡೆಯುವಾಗ ನೇರವಾಗಿ ಸಿಕ್ಕಿಬಿದ್ದಿದ್ದಾರೆ.

ಲಂಚ: ಸಿಬಿಐ ಅಧಿಕಾರಿಗಳ ಬಲೆಗೆ ಬಿದ್ದ ಪ್ರಾದೇಶಿಕ ಸೆನ್ಸಾರ್ ಅಧಿಕಾರಿ
ಅಡವಿ
Follow us
ಮಂಜುನಾಥ ಸಿ.
|

Updated on: Nov 28, 2023 | 10:51 PM

ಕನ್ನಡ ಚಲನಚಿತ್ರವೊಂದಕ್ಕೆ ಸೆನ್ಸಾರ್ ಸರ್ಟಿಫಿಕೇಟ್ (Censor) ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚ ಪಡೆಯುವಾಗ ಸಿಬಿಐ ಅಧಿಕಾರಿಗಳ ಕೈಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ ಸೆನ್ಸಾರ್ ಮಂಡಳಿಯ ಅಧಿಕಾರಿ ಪ್ರಶಾಂತ್ ಕುಮಾರ್. ‘ಅಡವಿ’ ಹೆಸರಿನ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರ್ಮಾಪಕರಿಗೆ ಪ್ರಶಾಂತ್ ಕುಮಾರ್ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹಾಗಾಗಿ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ಟೈಗರ್ ನಾಗ್, ನಟ ಆಸ್ಕರ್ ಕೃಷ್ಣ ಸಿಬಿಐ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದರು. ಇದೀಗ ಲಂಚ ಪಡೆಯುವಾಗಲೇ ಅಧಿಕಾರಿ ಪ್ರಶಾಂತ್ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಎಸ್.ಆರ್.ವಿ ಸ್ಟುಡಿಯೋದಲ್ಲಿ ರೀಜನಲ್ ಆಫೀಸರ್ ಅನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹೊಸ ನಿರ್ಮಾಪಕರನ್ನು ಟಾರ್ಗೆಟ್ ಮಾಡಿ ಸತಾಯಿಸಿ ಸೆನ್ಸಾರ್ ಅಧಿಕಾರಿ ಪ್ರಶಾಂತ್ ಕುಮಾರ್ ಹಣ ಪೀಕುತಿದ್ದ ಎನ್ನಲಾಗಿದೆ. ‘ಅಡವಿ’ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಒಂದು ವಾರದಿಂದ ಸತಾಯಿಸುತ್ತಿದ್ದ, ಸೆನ್ಸಾರ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಸಿಬಿಐ ಅಧಿಕಾರಿಗಳಿಗೆ ದೂರು ನೀಡಿದ್ದ ಸಾಮಾಜಿಕ ಹೋರಾಟಗಾರ ನಿರ್ದೇಶಕ ನಿರ್ಮಾಪಕ ಟೈಗರ್ ನಾಗ್ ಸಿಬಿಐ ಕಚೇರಿಗೆ ತೆರಳಿ ದೂರು ನೀಡಿದ್ದರು. ಲಂಚದ ವಿರುದ್ಧ ಟೈಗರ್​ ನಾಗ್​ರ ಹೋರಾಟಕ್ಕೆ ಕಳೆದ ಎರಡು ದಿನಗಳಿಂದ ಜೊತೆಗಿದ್ದು ಹೋರಾಟಕ್ಕೆ ನಟ, ನಿರ್ದೇಶಕ ಕರ್ನಾ ಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಕಾರ್ಯಕಾರಿ ಸಮಿತಿ ಆಸ್ಕರ್ ಕೃಷ್ಣ ಸಹ ಜೊತೆಗೂಡಿದ್ದರು.

ಇದನ್ನೂ ಓದಿ:ರಿಯಲ್ ಮಿ GT 5 ಪ್ರೊ ಬಗ್ಗೆ ಹೊರಬಿತ್ತು ಅಚ್ಚರಿ ಸುದ್ದಿ: ಕ್ಯಾಮೆರಾ ಸೆನ್ಸಾರ್ ಯಾವುದು ನೋಡಿ

ಇಂದು (ನವೆಂಬರ್ 28) ಸಂಜೆ 6 ರ ಸುಮಾರಿನಲ್ಲಿ ಅಧಿಕಾರಿ ಪ್ರಶಾಂತ್ ಕುಮಾರ್, ಟೈಗರ್ ನಾಗ್​ರಿಂದ ಲಂಚ ಪಡೆಯುವ ಸಮಯದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂನ ಎಸ್ ಆರ್ ವಿ ಥಿಯೇಟರ್ ನಲ್ಲಿ ವ್ಯವಸ್ಥಿತವಾಗಿ ದಾಳಿ ನಡೆದಿದೆ. ಹತ್ತಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಸಿವಿಲ್ ಡ್ರಸ್ ನಲ್ಲಿ ಬಂದು ಲಂಚ ಪಡೆಯುವಾಗಲೇ ಪ್ರಶಾಂತ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗಷ್ಟೆ ತಮಿಳಿನ ನಟ ವಿಶಾಲ್ ಸಹ ಮುಂಬೈನ ಸೆನ್ಸಾರ್ ಅಧಿಕಾರಿ ವಿರುದ್ಧ ಲಂಚದ ಆರೋಪ ಮಾಡಿದ್ದರು. ವಿಶಾಲ್ ನಟನೆಯ ‘ಮಾರ್ಕ್ ಆಂಟೊನಿ’ ಸಿನಿಮಾದ ಹಿಂದಿ ಆವೃತ್ತಿಯ ಬಿಡುಗಡೆಗೆ ಸೆನ್ಸಾರ್ ಪ್ರಮಾಣ ಪತ್ರ ನೀಡಲು ಅಧಿಕಾರಿಯೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಹಾಗೂ ತಮ್ಮ ತಂಡದವರು ಲಂಚದ ಹಣ ನೀಡಿರುವ ಬಗ್ಗೆ ವಿಶಾಲ್ ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಕೆಲವು ವಾಟ್ಸ್ ಆಫ್ ಚಾಟ್ ಹಾಗೂ ಆಡಿಯೋ ಅನ್ನು ಸಹ ಬಿಡುಗಡೆ ಮಾಡಿದ್ದರು. ಈಗ ಕರ್ನಾಟಕದಲ್ಲಿಯೂ ಇಂಥಹದ್ದೇ ಪ್ರಕರಣ ನಡೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್