ಸ್ಯಾಂಡಲ್‌ವುಡ್‌ ಡ್ರಗ್ಸ್ ಪ್ರಕರಣ: CCBಯಿಂದ ಅಕುಲ್ ಬಾಲಾಜಿಗೆ ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ. R.V.ದೇವರಾಜ್ ಮಗ ಯುವರಾಜ್, ಸಂತೋಷ್‌ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ನಾಳೆ ಬೆಳಗ್ಗೆ ಹಾಜರಾಗ್ತೀನಿ: ಅಕುಲ್​.. ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್​ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ನನಗೆ […]

ಸ್ಯಾಂಡಲ್‌ವುಡ್‌ ಡ್ರಗ್ಸ್ ಪ್ರಕರಣ: CCBಯಿಂದ ಅಕುಲ್ ಬಾಲಾಜಿಗೆ ಬುಲಾವ್

Updated on: Sep 18, 2020 | 2:40 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಮತ್ತೆ ಮೂವರಿಗೆ ನೋಟಿಸ್ ನೀಡಲಾಗಿದೆ.

R.V.ದೇವರಾಜ್ ಮಗ ಯುವರಾಜ್, ಸಂತೋಷ್‌ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿಗೆ ಸಿಸಿಬಿ ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬೆಳಗ್ಗೆ 10ಕ್ಕೆ ಸಿಸಿಬಿ ಎದುರು ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ನಾಳೆ ಬೆಳಗ್ಗೆ ಹಾಜರಾಗ್ತೀನಿ: ಅಕುಲ್​..
ಸಿಸಿಬಿ ಪೊಲೀಸರಿಂದ ನೋಟಿಸ್ ಬಂದಿರುವ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಸ್ಯಾಂಡಲ್​ವುಡ್ ನಟ, ನಿರೂಪಕ ಅಕುಲ್ ಬಾಲಾಜಿ, ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್ ‌ಬಂದಿದೆ. ನಾನು ಈಗ ಹೈದರಾಬಾದ್​ನಲ್ಲಿದ್ದೀನಿ, ಹೀಗಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗ್ತೀನಿ ಎಂದಿದ್ದಾರೆ.

ಸಂಜನಾ ಬರ್ತ್ ಡೇ ಗೆ ಹೋಗಿದ್ದೆ ಅಷ್ಟೆ: ಸಂತೋಷ
ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನನಗೆ ಸಿಸಿಬಿ ಪೊಲೀಸರಿಂದ ನೋಟಿಸ್​ ಬಂದಿದೆ. ಸದ್ಯಕ್ಕೆ ನಾನೀಗ ಮೈಸೂರಿನಲ್ಲಿದ್ದೇನೆ. ಹೀಗಾಗಿ ನಾಳೆ ಸಿಸಿಬಿ ವಿಚಾರಣೆಗೆ ಹಾಜರಾಗುತ್ತೇನೆ ಎಂದಿದ್ದಾರೆ. ಜೊತೆಗೆ ಈಗಾಗಲೇ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಬರ್ತ್ ಡೇ ಯಲ್ಲಿ ಭಾಗಿಯಾಗಿದ್ದೆ. ಹೀಗಾಗಿ ಸಿಸಿಬಿ ಪೊಲೀಸರಿಂದ ನನಗೆ ನೋಟಿಸ್​ ಬಂದಿರಬಹುದೆಂದು ನಟ ಸಂತೋಷ್ ಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

 

Published On - 1:49 pm, Fri, 18 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us