‘ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್ ಜೋಶಿ; ಕೇಂದ್ರ ಸಚಿವರ ವಿಮರ್ಶೆ ಏನು?
ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ದರ್ಶನ್ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್ ಫ್ಯಾನ್ಸ್ ಖುಷಿ ಆಗಿದ್ದಾರೆ.
ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ’ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್ (Darshan) ಅವರ ಅಭಿನಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಅವರು ಈ ಸಿನಿಮಾದಲ್ಲಿ ಸಾಮಾಜಿಕ ಸಂದೇಶ ನೀಡಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಜಕಾರಣಿಗಳು ಕೂಡ ‘ಕಾಟೇರ’ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕೂಡ ಇಂದು (ಡಿ.31) ‘ಕಾಟೇರ’ ಸಿನಿಮಾ ವೀಕ್ಷಿಸಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರ ಅವರಿಗೆ ತುಂಬ ಇಷ್ಟವಾಗಿದೆ.
ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್ ಟೆಂಗಿನಕಾಯಿ ಕೂಡ ಸಾಥ್ ನೀಡಿದ್ದಾರೆ. ದರ್ಶನ್ ಅವರ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್ ಜೋಶಿ ಅವರು ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್ ಫ್ಯಾನ್ಸ್ ಖುಷಿ ಆಗಿದ್ದಾರೆ.
ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ #ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು.
ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ… pic.twitter.com/ivxhbQvo6J
— Pralhad Joshi (@JoshiPralhad) December 31, 2023
‘ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ರಾಕ್‌ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು. ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ’ ಎಂದು ಪ್ರಲ್ಹಾದ್ ಜೋಶಿ ವಿಮರ್ಶೆ ತಿಳಿಸಿದ್ದಾರೆ.
ಇದನ್ನೂ ಓದಿ: 2 ದಿನಕ್ಕೆ 37 ಕೋಟಿ ರೂಪಾಯಿ ಗಳಿಸಿದ ‘ಕಾಟೇರ’; ಜೋರಾಗಿದೆ ದರ್ಶನ್ ಅಬ್ಬರ
‘ದರ್ಶನ್ ಅವರು ಅದ್ಭುತ ನಟನೆ ಮೂಲಕ ಅಭಿಮಾನಿಗಳನ್ನು, ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ತಂಡಕ್ಕೆ ಶುಭ ಹಾರೈಸುತ್ತೇನೆ’ ಎಂದು ಪ್ರಲ್ಹಾದ್ ಜೋಶಿ ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆರಾಧನಾ ರಾಮ್, ಶ್ರುತಿ, ಜಗಪತಿ ಬಾಬು, ಅವಿನಾಶ್, ವಿನೋದ್ ಆಳ್ವಾ, ವೈಜನಾಥ ಬೀರಾದರ ಮುಂತಾದ ಕಲಾವಿದರು ನಟಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.