ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!

ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!
ಚೈತ್ರಾ ಕೋಟೂರ್​

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮದುವೆ ಆದ ದಿನವೇ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು. ಅವರ ವೈವಾಹಿಕ ಬದುಕಿನಲ್ಲಿ ಸುನಾಮಿಯೇ ಎದ್ದಿತ್ತು. ಇದರಿಂದ ಮನನೊಂದು ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಅವರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಈಗ ಚೈತ್ರಾ ಈ ನೋವನ್ನು ಮರೆತು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ. ಅವರು ಹಾಕಿಕೊಂಡ ಹೊಸ ಸ್ಟೇಟಸ್​ ಇದಕ್ಕೆ ಸಾಕ್ಷಿ. ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್​ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್​ ಮನೆಯವರು ತಕರಾರು ತೆಗೆದಿದ್ದರು. ನಂತರ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು.

ಈ ಘಟನೆಯಿಂದ ತುಂಬಾನೇ ನೊಂದಿದ್ದ ಚೈತ್ರಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ನಂತರ ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಚೈತ್ರಾ ನಗುತ್ತಿರುವ ಹೊಸ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ, ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ ಕ್ರಿಮಿಯು, ಬದುಕಿನ ಮಹತ್ವವನ್ನೂ ತಿಳಿಸುವಲ್ಲಿ ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಆಭಾರಿ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ.

ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​

Click on your DTH Provider to Add TV9 Kannada