ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!

ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಸಾವಿನ ದವಡೆಗೆ ನೂಕುವ ಕ್ರಿಮಿ ಬದುಕಿನ ಮಹತ್ವ ತಿಳಿಸುತ್ತದೆ; ಚೈತ್ರಾ ಕೋಟೂರ್​ ಕಂಬ್ಯಾಕ್​!
ಚೈತ್ರಾ ಕೋಟೂರ್​
Edited By:

Updated on: Apr 18, 2021 | 3:48 PM

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮದುವೆ ಆದ ದಿನವೇ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು. ಅವರ ವೈವಾಹಿಕ ಬದುಕಿನಲ್ಲಿ ಸುನಾಮಿಯೇ ಎದ್ದಿತ್ತು. ಇದರಿಂದ ಮನನೊಂದು ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಅವರು ಆತ್ಮಹತ್ಯೆಗೆ ಕೂಡ ಯತ್ನಿಸಿದ್ದರು. ಈಗ ಚೈತ್ರಾ ಈ ನೋವನ್ನು ಮರೆತು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ. ಅವರು ಹಾಕಿಕೊಂಡ ಹೊಸ ಸ್ಟೇಟಸ್​ ಇದಕ್ಕೆ ಸಾಕ್ಷಿ.

ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್​ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್​ ಮನೆಯವರು ತಕರಾರು ತೆಗೆದಿದ್ದರು. ನಂತರ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು.

ಈ ಘಟನೆಯಿಂದ ತುಂಬಾನೇ ನೊಂದಿದ್ದ ಚೈತ್ರಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ನಂತರ ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ ಎಂದು ನಾಗಾರ್ಜುನ್​ ಅವರ ಬಗ್ಗೆ ಅಸಮಾಧಾನ ಹೊರ ಹಾಕಿ, ಅಳುತ್ತಿರುವ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು. ಈಗ ಈ ಎಲ್ಲ ನೋವುಗಳಿಂದ ಅವರು ಹೊರ ಬಂದಂತೆ ಕಾಣುತ್ತಿದೆ.

ಚೈತ್ರಾ ನಗುತ್ತಿರುವ ಹೊಸ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಈ ಫೋಟೋಗೆ, ಬದುಕು ಮತ್ತೆ ಕೈಬೀಸಿ ಕರೆದಾಗ, ಎರಡೆರಡು ಸ್ಯಾನಿಟೈಸರ್ ಬಾಟಲಿಗಳನ್ನು ಹೆಚ್ಚಾಗಿ ಇರಿಸಿಕೊಂಡು ಮುಂದೆ ಸಾಗಿ. ದೇಹ ಸೇರಿ ಸಾವಿನ ದವಡೆಗೆ ನೂಕುವ ಕ್ರಿಮಿಯು, ಬದುಕಿನ ಮಹತ್ವವನ್ನೂ ತಿಳಿಸುವಲ್ಲಿ ಯಶಸ್ವಿಯಾಗುತ್ತದೆ. ನಿಮ್ಮೆಲ್ಲರ ಪ್ರೀತಿ ಕಾಳಜಿಗೆ ಆಭಾರಿ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಕಂಬ್ಯಾಕ್​ ಮಾಡಿದಂತೆ ಕಾಣುತ್ತಿದೆ.

ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್

Chaithra Kotoor: ನಿನ್ನನ್ನು ನಂಬಿ ದೊಡ್ಡ ತಪ್ಪು ಮಾಡಿದೆ; ಚೈತ್ರಾ ಕೋಟೂರ್ ಕಣ್ಣೀರಿಟ್ಟ ವಿಡಿಯೋ ವೈರಲ್​

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us