ಮುಂದುವರಿದು, ನಿನ್ನ ಬಳಿ ಅನೇಕ ಬಾರಿ ಮದುವೆ ವಿಚಾರ ತೆಗೆದಿದ್ದೆ. ನಿನಗೆ ಮುದವೆ ಆಗುವ ಇಚ್ಛೆ ಇಲ್ಲದಿದ್ದರೆ ಅಂದೇ ಹೊರಟು ಹೋಗಿಬಿಡಬೇಕಿತ್ತು. ಮತ್ತೇಕೆ ನನ್ನ ಜೀವನದಲ್ಲಿ ಬಂದೆ ಎಂದು ಅರ್ಜುನ್ಗೆ ವಿಡಿಯೋದಲ್ಲಿ ಚೈತ್ರಾ ಪ್ರಶ್ನೆ ಮಾಡಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೋಟೂರ್ ಅವರು ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್ ಎಂಬುವವರ ಜೊತೆ ಮಾ.28ರ ಬೆಳಗ್ಗೆ ಸಿಂಪಲ್ ಆಗಿ ಮದುವೆ ಆಗಿದ್ದರು. ಆದರೆ ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್ ಮನೆಯವರು ತಕರಾರು ತೆಗೆದಿದ್ದರು. ಈ ವಿಚಾರ ಪೊಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿತ್ತು.
ಇಂದು ಆತ್ಮಹತ್ಯೆಗೆ ಯತ್ನ
ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮದುವೆ ವಿಚಾರದ ನಂತರ ಉಂಟಾದ ವಿವಾದದಿಂದ ಮನನೊಂದು ಅವರು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಚೈತ್ರಾ ಕೋಟೂರ್ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ಈ ವಿಚಾರ ವಿವಾದಕ್ಕೀಡಾಗಿ ಪೊಲೀಸ್ ಠಾಣೆ ಮಟ್ಟಿಲೇರಿತ್ತು. ಇದೇ ಕಾರಣಕ್ಕೆ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Chaithra Kotoor: ಮದುವೆಯಾದ ಬೆನ್ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್