ಚೈತ್ರಾ ಕುಂದಾಪುರ ಮಾಡಿಕೊಂಡ ಕೇಸ್ ಏನು ? ಇಲ್ಲಿದೆ ಹಳೆಯ ಕಥೆ

2022ರಲ್ಲಿ ವಂಚನೆ ನಡೆದಿದ್ದು 2023ರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಚೈತ್ರಾ ಬಂಧನಕ್ಕೆ ಒಳಗಾಗಿದ್ದರು.

ಚೈತ್ರಾ ಕುಂದಾಪುರ ಮಾಡಿಕೊಂಡ ಕೇಸ್ ಏನು ? ಇಲ್ಲಿದೆ ಹಳೆಯ ಕಥೆ
ಚೈತ್ರಾ
Follow us
ರಾಜೇಶ್ ದುಗ್ಗುಮನೆ
|

Updated on:Sep 29, 2024 | 9:12 PM

ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಿಕೆಟ್ ಸಿಕ್ಕಿದೆ. ಹಾಗಾದರೆ ಚೈತ್ರಾ ಕುಂದಾಪುರ ಅವರು ಮಾಡಿಕೊಂಡ ವಿವಾದ ಏನು? ಅವರು ಯಾವ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು ಎನ್ನುವ ವಿಚಾರ ಗೊತ್ತೇ? ಆ ಬಗ್ಗೆ ಇಲ್ಲಿದೆ ಮಾಹಿತಿ.

2022ರಲ್ಲಿ ವಂಚನೆ ನಡೆದಿದ್ದು 2023ರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಚೈತ್ರಾ ಬಂಧನಕ್ಕೆ ಒಳಗಾಗಿದ್ದರು. ಆರಂಭದಲ್ಲಿ ತಲೆಮರಿಸಿಕೊಂಡಿದ್ದ ಅವರನ್ನು ನಂತರ ಪತ್ತೆ ಹಚ್ಚಲಾಯಿತು.

ಬಾಗಲಕೋಟೆಯಲ್ಲಿ ಕಾರು ಸಿಕ್ಕಿತ್ತು

ಬಾಗಲಕೋಟೆ ಜಿಲ್ಲೆ ಮುಧೋಳದ ಹಿಂದೂ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾ ಕುಂದಾಪುರಗೆ ಸೇರಿದ ಕಿಯಾ ಕಾರು ಸಿಕ್ಕಿತ್ತು. ಪೊಲೀಸರು ಈ ಕಾರನ್ನು ವಶಕ್ಕೆ ಪಡೆದಿದ್ದರು. ಗೋವಿಂದಬಾಬು ಪೂಜಾರಿ ಬಳಿ ಹಣ ಇದೆ ಎಂದು ತಿಳಿದ ಚೈತ್ರಾ ಕುಂದಾಪುರ ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಜಾಮೀನು

2023ರ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಚೈತ್ರಾ ಹಾಗೂ ಇತರ ಆರೋಪಿಗಳ ವಿರುದ್ಧ 800 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಡಿಸೆಂಬರ್​ನಲ್ಲಿ ಇವರಿಗೆ ಜಾಮೀನು ಸಿಕ್ಕಿತ್ತು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮತ್ತೊಂದು ಕೇಸ್

ಇದೊಂದೇ ಪ್ರಕರಣ ಅಲ್ಲ, ಹಿಂದೂ ಜಾಗರಣೆ ವೇದಿಕೆ ಮುಖಂಡ ಗುರು ಪ್ರಸಾದ್ ಪಂಜ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಚೈತ್ರಾ ಜೈಲು ಸೇರಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಹಾಗೂ ಸಂಪುಟ ನರಸಿಂಹ ಮಠದ ನಡುವಿನ ವಿವಾದ ಬೀದಿ ಜಗಳವಾಗಿ ಬದಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಇವರ ಮಧ್ಯೆ ವೈರತ್ವ ಇತ್ತು. ನಂತರ ಬೀದಿ ಕಾಳಗವೇ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:09 pm, Sun, 29 September 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!