96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ.

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?
ಚಕ್ರವರ್ತಿ ಚಂದ್ರಚೂಡ
Follow us
ರಾಜೇಶ್ ದುಗ್ಗುಮನೆ
| Updated By: ಆಯೇಷಾ ಬಾನು

Updated on: Apr 02, 2021 | 7:03 AM

ಬಿಗ್​ ಬಾಸ್​ ಐದನೇ ವಾರದಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪ್ರಶಾಂತ್​ ಸಂಬರಗಿ ಆಪ್ತ ಚಕ್ರವರ್ತಿ ಚಂದ್ರಚೂಡ ಅನ್ನೋದು ವಿಶೇಷ. ಬಂದ ದಿನವೇ ಮನೆಯಲ್ಲಿ ತುಂಬಾನೇ ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತುಂಬಾನೇ ಚರ್ಚೆಗೂ ಕಾರಣವಾಗಿದ್ದಾರೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಕ್ರವರ್ತಿ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಕವಿತೆ ಬರೆಯುವುದರ ಜತೆಗೆ ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಮಾತು ಕೇಳಿ ಎಲ್ಲರಿಗೂ ಶಾಕಾಗಿದೆ. ಅವರು ನಡೆದುಕೊಳ್ಳುವ ರೀತಿ ಸಾಕಷ್ಟು ಜನರಿಗೆ ಇಷ್ಟವಾಗುತ್ತಿಲ್ಲ. ಮಾತಿನಲ್ಲಿ ಚಕ್ರವರ್ತಿ ಚಂದ್ರಚೂಡ​ ಕೂಡ ನಿಪುಣರು. ಅಲ್ಲದೆ, ಪ್ರಶಾಂತ್​-ಚಂದ್ರಚೂಡ ಇಬ್ಬರೂ ಆಪ್ತರು. ಹೀಗಾಗಿ, ಇಬ್ಬರಿಗೂ ಪರಸ್ಪರ ಧ್ವನಿ ಸಿಕ್ಕಂತೆ ಆಗಿದೆ.

ಚಂದ್ರಚೂಡ ಮನೆಗೆ ಬರುತ್ತಿದ್ದಂತೆ ಎಲ್ಲರನ್ನೂ ತಮ್ಮಡೊನೆ ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಬಿಗ್​ ಬಾಸ್​ ಪ್ರವೇಶಿಸಿದ ಅವರು ದೊಡ್ಡ ಧ್ವನಿಯಲ್ಲಿ ಮಾತನಾಡಿದ್ದಾರೆ. ನಾನು ಅನೇಕ ಚಳುವಳಿಗೆ ಭಾಗವಹಿಸಿದ್ದೆ. ಮೊದಲು ಆಂಧ್ರಪ್ರದೇಶದ ಪವಾಡ ಪುರಷರ ಬಗ್ಗೆ ನಾನು ಒಂದು ಪುಸ್ತಕ ಬರೆದೆ. ಅವರು ನಕಲಿ ಎಂದು ಹೇಳಿದ್ದೆ. ಅದು ನಿಜವೂ ಆಗಿತ್ತು. ಆದರೆ, ನನ್ನನ್ನು ತೆಗೆದುಕೊಂಡು ಹೋಗಿ 96 ದಿನ ಜೈಲಿನಲ್ಲಿಟ್ಟರು ಎಂದು ತಮ್ಮ ಇತಿಹಾಸ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ