ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ

ಕೊಲೆ ಕೇಸ್​​ನಲ್ಲಿ ಸ್ಯಾಂಡಲ್​​ವುಡ್​​​​ ನಟ ದರ್ಶನ್​ ಅರೆಸ್ಟ್ ಆಗಿದ್ದು ಬೆಂಗಳೂರಿನ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.

ಕೊಲೆ ಕೇಸ್​​ನಲ್ಲಿ ನಟ ದರ್ಶನ್​ ಅರೆಸ್ಟ್; ಬೆಂಗಳೂರಿನ ಮನೆ ಬಳಿ ಪೊಲೀಸ್ ಭದ್ರತೆ
ರೇಣುಕಾ ಸ್ವಾಮಿ, ನಟ ದರ್ಶನ್
Follow us
| Updated By: ಆಯೇಷಾ ಬಾನು

Updated on:Jun 11, 2024 | 11:15 AM

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ (Murder) ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ (Darshan Thoogudeepa) ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

ಇದನ್ನೂ ಓದಿ: ದರ್ಶನ್ ವಿವಾದಗಳು ಒಂದೆರಡಲ್ಲ, ಇಲ್ಲಿವೆ ಹಳೆ ಪ್ರಕರಣಗಳ ವಿವರ

ಬೆಂಗಳೂರಿಗೆ ರೇಣುಕಾಸ್ವಾಮಿ ಕರೆದುಕೊಂಡು ಬಂದು ವಿನಯ್ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಇರಿಸಿದ್ದರು. ರೇಣುಕಾಸ್ವಾಮಿಗೆ ದರ್ಶನ್ ಸೇರಿ 4 ಜನರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಲ್ಲೆ ಬಳಿಕ ರೇಣುಕಾಸ್ವಾಮಿಗೆ ಬಲವಾದ ಆಯುಧದಿಂದ ಶೆಡ್​ನಲ್ಲೇ ಹಲ್ಲೆ ಮಾಡಿ ಜೂನ್​ 8ರ ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ನಂತರ ಕಾಮಾಕ್ಷಿ ಪಾಳ್ಯದ ಮೋರಿಯಲ್ಲಿ ಮೃತದೇಹ ಎಸೆಯಲಾಗಿದೆ. ಭಾನುವಾರ ಬೆಳಗಿನ ಜಾವ ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗಿತ್ತು.

ರೇಣುಕಾಸ್ವಾಮಿ ಶವವನ್ನ ನಾಯಿಗಳು ಎಳೆಯುತ್ತಿದ್ದಾಗ ಮೃತದೇಹ ಪತ್ತೆಯಾಗಿತ್ತು. ಸದ್ಯ ಕಾಮಾಕ್ಷಿ ಪಾಳ್ಯ ಸ್ಟೇಷನ್​ಗೆ ರೇಣುಕಾಸ್ವಾಮಿ ಪೋಷಕರು ಆಗಮಿಸಿದ್ದು ಕಣ್ಣೀರಿಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Tue, 11 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ