AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​

Darshan Thoogudeep 55th Movie: ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
ವಂಚನೆ ಯತ್ನ ಪ್ರಕರಣದ ಸುದ್ದಿಯಿಂದ ಬೇಸತ್ತಿದ್ದ ಅಭಿಮಾನಿಗಳಿಗೆ ದರ್ಶನ್​ ಕಡೆಯಿಂದ ಗುಡ್​ನ್ಯೂಸ್​
TV9 Web
| Edited By: |

Updated on:Jul 14, 2021 | 5:39 PM

Share

‘ರಾಬರ್ಟ್’​ ಸಿನಿಮಾ ಯಶಸ್ಸು ಕಂಡ ನಂತರದಲ್ಲಿ ದರ್ಶನ್​ (Darshan) ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಅವರ 55ನೇ ಸಿನಿಮಾಗೆ (Darshan Thoogudeep 55th Movie) ಯಾರು ಬಂಡವಾಳ ಹೂಡಲಿದ್ದಾರೆ, ಈ ಸಿನಿಮಾಗೆ ಡೈರೆಕ್ಷನ್​ ಮಾಡೋದು ಯಾರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಜೋರಾಗಿತ್ತು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಖ್ಯಾತ ನಿರ್ಮಾಪಕಿ ಶೈಲಜಾ ನಾಗ್  (Shylaja Nag) ಅವರು ದರ್ಶನ್​ ನಟನೆಯ 55ನೇ ಸಿನಿಮಾದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಈ ಬಗ್ಗೆ ಇಂದು ಅಧಿಕೃತ ಘೋಷಣೆ ಆಗಿದೆ.

ಶಿವರಾತ್ರಿ ಪ್ರಯುಕ್ತ ಮಾರ್ಚ್​ 11ರಂದು ‘ರಾಬರ್ಟ್​’ ತೆರೆಗೆ ಬಂದಿತ್ತು. ಸಿನಿ ಪ್ರಿಯರಿಂದ ಚಿತ್ರ ಅದ್ಭುತ ಪ್ರತಿಕ್ರಿಯೆ ಗಳಿಸಿದ್ದಲ್ಲದೆ, ಬಾಕ್ಸ್​ ಆಫೀಸ್​ನಲ್ಲಿ 100 ಕೋಟಿ ಕ್ಲಬ್​ ಸೇರಿತ್ತು. ಹೀಗಾಗಿ, ದರ್ಶನ್​ ಮುಂದಿನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದೆ. ದರ್ಶನ್​ 55ನೇ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈಗ ಈ ವಿಚಾರ ಅಧಿಕೃತವಾಗಿದೆ.

ನಿರ್ಮಾಪಕಿ ಶೈಲಜಾ ನಾಗ್​ ಅವರು ಈ ಬಗ್ಗೆ ಟ್ವಿಟರ್​ನಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ದರ್ಶನ್​ ಜತೆಗೆ ಇರುವ ಫೋಟೋ ಹಂಚಿಕೊಂಡಿರುವ ಶೈಲಜಾ ನಾಗ್​, ‘ದರ್ಶನ್​ ಜತೆಗಿನ 55ನೇ ಸಿನಿಮಾಗೆ ನಾನು ಹಾಗೂ ಬಿ. ಸುರೇಶ್​ ಬಂಡವಾಳ ಹೂಡುತ್ತಿದ್ದೇವೆ. ಹರಿಕೃಷ್ಣ ಸಿನಿಮಾದ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ’ ಎಂದಿದ್ದಾರೆ. ಈ ಮೂಲಕ ಹಲವು ತಿಂಗಳ ಕಾಯುವಿಕೆಗೆ ಕೊನೆ ಬಿದ್ದಿದೆ.

2019ರಲ್ಲಿ ತೆರೆಗೆ ಬಂದ ದರ್ಶನ್​ ನಟನೆಯ ‘ಯಜಮಾನ’ ಸಿನಿಮಾಗೆ ಶೈಲಜಾ ನಾಗ್​ ಬಂಡವಾಳ ಹೂಡಿದ್ದರು. ವಿ. ಹರಿಕೃಷ್ಣ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈಗ ಇದೇ ಕಾಂಬಿನೇಷನ್​ ಮತ್ತೆ ಒಂದಾಗಿದ್ದು, ಅಭಿಮಾನಿಗಳು ಹೆಚ್ಚಿನದ್ದನ್ನು ನಿರೀಕ್ಷೆ ಮಾಡುತ್ತಿದ್ದಾರೆ.

25 ಕೋಟಿ ರೂಪಾಯಿ ವಂಚನೆ ಯತ್ನ ಪ್ರಕರಣದಲ್ಲಿ ದರ್ಶನ್​ ಅವರ ಹೆಸರು ಸಿಲುಕಿಕೊಂಡಿತ್ತು. ಕಳೆದ ಎರಡು-ಮೂರು ದಿನಗಳಿಂದ ಈ ಬಗ್ಗೆ ಚರ್ಚೆ ಆಗುತ್ತಲೇ ಇದೆ. ಅರುಣಾ ಕುಮಾರಿ ಎಂಬುವವರು ಈ ವಂಚನೆ ಪ್ರಯತ್ನದ ಪ್ರಮುಖ ರುವಾರಿ. ರಾಬರ್ಟ್​ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಅರುಣಾ ಕುಮಾರಿಗೆ ಕುಮ್ಮಕ್ಕು ಕೊಟ್ಟಿದ್ದಾರೆ ಎನ್ನಲಾಗಿತ್ತು.

‘ನಾನು ಮತ್ತು ದರ್ಶನ್ ಅವರು ಮೊದಲಿನಿಂದಲೂ ಚೆನ್ನಾಗಿಯೇ ಇದ್ದೇವೆ. ಸ್ನೇಹಿತರ ವಿಷಯದಲ್ಲಿ ಇದ್ದ ಗೊಂದಲಗಳು ಪರಿಹಾರವಾಗಿವೆ. ಆ ವಿಷಯದಲ್ಲಿ ರಾಜಿಯಾಗಿದ್ದೇನೆ ಎಂದು ಉಮಾಪತಿ ಶ್ರೀನಿವಾಸ ಗೌಡ ಬುಧವಾರ (ಜುಲೈ 14) ತಿಳಿಸಿದ್ದಾರೆ. ‘ಸ್ನೇಹದ ವಿಚಾರದಲ್ಲಿ ರಾಜಿಯಾಗಿದ್ದೇವೆ, ನಿಜ. ಆದರೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾನೂನು ಹೋರಾಟ ಮುಂದುವರೆಯಲಿದೆ. ಆ ಪ್ರಕರಣದ ಸತ್ಯಾಸತ್ಯತೆ ತನಿಖೆಯ ನಂತರ ಹೊರಬರಲಿದೆ’ ಎಂದು ಶ್ರೀನಿವಾಸ ಗೌಡ ಅವರು ಹೇಳಿದ್ದರು. ಇವುಗಳ ಮಧ್ಯೆಯೇ ದರ್ಶನ್​ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್ ಹೆಸರಿನಲ್ಲಿ ವಂಚನೆಗೆ ಯತ್ನ ಪ್ರಕರಣ: ಆರೋಪಿ ಅರುಣಾ ಕುಮಾರಿಯಿಂದ ಇಂದು ಮಹತ್ವದ ಸುದ್ದಿಗೋಷ್ಠಿ

Published On - 5:31 pm, Wed, 14 July 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್