Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ.

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್
ನಟ ದರ್ಶನ್
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 06, 2021 | 4:33 PM

ನಟ ದರ್ಶನ್​ ಹೇಳಿದ್ದನ್ನು ಅಭಿಮಾನಿಗಳು ಚಾಚೂತಪ್ಪದೆ ಪಾಲಿಸುತ್ತಾರೆ. ಈ ಮೊದಲು ಕರ್ನಾಟಕದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ‘ನನ್ನ ಬರ್ತ್​ಡೇ ಆಚರಣೆ ಬೇಡ. ಬದಲಿಗೆ ದಿನಸಿ ತಂದುಕೊಡಿ. ಅದನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ತಲುಪಿಸುತ್ತೇವೆ’ ಎಂದು ದರ್ಶನ್​ ಹೇಳಿದ್ದರು. ಇದನ್ನು ಅಭಿಮಾನಿಗಳು ಮಾಡಿದ್ದರು. ಈಗ ಕೊವಿಡ್​ ಸಂದರ್ಭದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್​ ಮನವಿ ಮಾಡಿದ್ದು, ಅವರ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ 9 ಝೂಗಳಿವೆ. ಎಲ್ಲಾ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ನಿಮ್ಮ ಕೈಲಾದ ಪ್ರಾಣಿಗಳನ್ನ ದತ್ತು ಪಡೆಯಿರಿ ಎಂದು ದರ್ಶನ್ ಮನವಿ ಮಾಡಿದ್ದರು. ಇದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಬಂದಿದೆ.

ದರ್ಶನ್​ ಕರೆ ನೀಡಿದ ಒಂದೇ ದಿನದಲ್ಲಿ ಸಾಕಷ್ಟು ಜನರು ಮುಂದೆ ಬಂದು ಝೂನ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಹೆಸರಿನ ಸಿಂಹವನ್ನು ನಿರ್ಮಾಪಕರಾದ ಶೈಲಜಾ ನಾಗ್ ದತ್ತು ಪಡೆದಿದ್ದಾರೆ. ಇದಕ್ಕೆ ದರ್ಶನ್​ ಧನ್ಯವಾದ ಅರ್ಪಿಸಿದ್ದಾರೆ.

ಕೆಲವರು ಲವ್​ ಬರ್ಡ್​ ದತ್ತು ಪಡೆದರೆ, ಇನ್ನೂ ಕೆಲವರು ಕಾಳಿಂಗ ಸರ್ಪ ತೆಗೆದುಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಅರ್ಪಿಸುವ ಕೆಲಸವನ್ನು ದರ್ಶನ್​ ಮಾಡಿದ್ದಾರೆ.

ಇದನ್ನೂ ಓದಿ: Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ

Challenging Star Darshan Fans : ದರ್ಶನ್‌ ಕರೆಯನ್ನ ಚಾಲೆಂಜಿಂಗ್‌ ಆಗಿ ತಗೊಂಡ ಡಿ ಬಾಸ್‌ ಫ್ಯಾನ್ಸ್‌

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ