AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್
ದರ್ಶನ್​-ಚಿರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 8:52 PM

Share

ಚಿರಂಜೀವಿ ಸರ್ಜಾ ಅವರು ಮೃತಪಟ್ಟು ಇಂದಿಗೆ (ಜೂನ್​ 7) ಒಂದು ವರ್ಷವಾಗಿದೆ. ಈ ದಿನದಂದು ಅನೇಕರು ಚಿರಂಜೀವಿ ಸರ್ಜಾ ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ಚಿರು ಅವರನ್ನು ನೆನಪಿಸಿಕೊಂಡಿದ್ದಾರೆ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಇನ್ನು, ಸಾಕಷ್ಟು ಜನರು ಚಿರು ಜತೆಗಿನ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ದರ್ಶನ್​, ನೀನು ಯಾವಾಗಲೂ ನೆನಪಿನಲ್ಲಿರುತ್ತೀಯಾ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಚಿರು ಜತೆಗಿನ ಫೋಟೋ ಕೂಡ ಹಂಚಿಕೊಂಡಿದ್ದಾರೆ.

 ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More