ಕೊವಿಡ್ ಸೋಂಕಿತರಿಗೆ ನೆರವಾದ ಡಿ-ಬಾಸ್; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್
ದರ್ಶನ್ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ.
ಕೊವಿಡ್ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದರಿಂದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಸೋನು ಸೂದ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಈಗ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಕೂಡ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲು ಕೈ ಜೋಡಿಸಿದ್ದಾರೆ.
ದರ್ಶನ್ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದಲ್ಲದೆ, ಕಷ್ಟ ಎಂದು ಹೇಳಿಕೊಂಡು ಬರುವವರಿಗೆ ಸಹಾಯ ಮಾಡಿದ್ದಾರೆ. ಈಗ ಅವರು ಆಮ್ಲಜನಕ ನೀಡುವ ಕಾಯಕಕ್ಕೆ ದರ್ಶನ್ ಮುಂದಾಗಿದ್ದಾರೆ.
‘ಉಸಿರು’ ಹೆಸರಿನ ಕೊವಿಡ್ ಆಕ್ಸಿಜನ್ ಕೇರ್ಗೆ ದರ್ಶನ್ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಪೋಸ್ಟ್ ಹಾಕಿರುವ ಉಸಿರು ತಂಡ, ಉಸಿರು ತಂಡಕ್ಕೆ ಗಜ ಬಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಮ್ಮ ಜತೆ ಕೈ ಜೋಡಿಸಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.
ಕೊವಿಡ್ ರೋಗಿಗಳಿಗೆ ಉಸಿರಾಟದ ಸಮಸ್ಯೆ ಇದ್ದರೆ ಅಂಥವರಿಗೆ ಆಮ್ಲಜನಕದ ವ್ಯವಸ್ಥೆಯನ್ನು ಮನೆಯಲ್ಲೇ ಮಾಡಿಕೊಡಲಾಗುತ್ತದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ಸಹಯೋಗದೊಂದಿಗೆ ಮೈಸೂರಿನಲ್ಲಿ ಉಸಿರು ತಂಡದ ಮೊದಲ ಸೇವೆ ಒದಗಿಸಿದೆ. ಈ ಬಗ್ಗೆ ಉಸಿರು ತಂಡ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದೆ.
ನಟ ಸೋನು ಸೂದ್ ಅವರಂತೂ ಅನೇಕರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್ ಪ್ಲಾಂಟ್ಗಳನ್ನು ಸ್ಥಾಪಿಸಲು ಸೋನು ಸೂದ್ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್ ಪ್ಲಾಂಟ್ಗಳನ್ನು ಫ್ರಾನ್ಸ್ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಈಗ ದರ್ಶನ್ ಕೂಡ ಸಹಾಯಕ್ಕೆ ನಿಂತಿದ್ದಾರೆ.
ಇದನ್ನೂ ಓದಿ: ದರ್ಶನ್-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್ ಆಯ್ತು ಮದುವೆ ಆಮಂತ್ರಣ ಪತ್ರ