Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan Shetty: ಚಂದನ್ ಶೆಟ್ಟಿ ಈಗ ‘ಸೂತ್ರಧಾರಿ’; 2ನೇ ಚಿತ್ರದಲ್ಲಿ ಸಿಕ್ತು ಪೊಲೀಸ್​ ಅಧಿಕಾರಿ ಪಾತ್ರ

Apoorva | Suthradaari: ಚಂದನ್​ ಶೆಟ್ಟಿ ನಟನೆಯ 2ನೇ ಚಿತ್ರಕ್ಕೆ ‘ಸೂತ್ರಧಾರಿ’ ಎಂದು ಹೆಸರು ಇಡಲಾಗಿದೆ. ನಾಯಕಿಯಾಗಿ ಅಪೂರ್ವಾ ನಟಿಸುತ್ತಿದ್ದಾರೆ.

Chandan Shetty: ಚಂದನ್ ಶೆಟ್ಟಿ ಈಗ ‘ಸೂತ್ರಧಾರಿ’; 2ನೇ ಚಿತ್ರದಲ್ಲಿ ಸಿಕ್ತು ಪೊಲೀಸ್​ ಅಧಿಕಾರಿ ಪಾತ್ರ
‘ಸೂತ್ರಧಾರಿ’ ಸಿನಿಮಾ ತಂಡ
Follow us
TV9 Web
| Updated By: ಮದನ್​ ಕುಮಾರ್​

Updated on: Oct 10, 2022 | 9:00 AM

ಇಷ್ಟು ದಿನ ಗಾಯಕನಾಗಿ, ಗೀತರಚನಕಾರನಾಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ (Chandan Shetty) ಅವರು ಈಗ ನಟನಾಗಿಯೂ ಸಕ್ರಿಯರಾಗಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ರಿಲೀಸ್ ಆಗುವುದಕ್ಕೂ ಮುನ್ನವೇ ಎರಡನೇ ಸಿನಿಮಾ ಸೆಟ್ಟೇರಿದೆ. ಅವರ 2ನೇ ಚಿತ್ರಕ್ಕೆ ‘ಸೂತ್ರಧಾರಿ’ (Suthradaari) ಎಂದು ಶೀರ್ಷಿಕೆ ಇಡಲಾಗಿದೆ. ಇಂದಿನಿಂದ (ಅ.10) ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ. ನವರಸನ್ (Navarasan) ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಜೊತೆಗೆ ಕ್ರಿಯೇಟಿವ್ ಹೆಡ್ ಆಗಿಯೂ ಕೆಲಸ ಮಾಡುತ್ತಿದ್ದಾರೆ. ಹೊಸ ನಿರ್ದೇಶಕ ಕಿರಣ್ ಕುಮಾರ್ ಅವರಿಗೆ ಈ ಚಿತ್ರದ ಮೂಲಕ ನವರಸನ್​ ಅವಕಾಶ ನೀಡಿದ್ದಾರೆ.

ಬಹಳ ಅದ್ದೂರಿಯಾಗಿ ಈ ಚಿತ್ರದ ಟೈಟಲ್​ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ಸಮಾರಂಭದಲ್ಲಿ ಪಿ.ಆರ್.ಓ. ಸುಧೀಂದ್ರ ವೆಂಕಟೇಶ್ ಅವರು ಶೀರ್ಷಿಕೆ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಅಧ್ಯಕ್ಷರಾದ ಭಾ.ಮ. ಹರೀಶ್, ನಿರ್ಮಾಪಕರಾದ ಕೆ.ಸಿ.ಎನ್. ಕುಮಾರ್, ಗೋವಿಂದರಾಜು, ಸಂಜಯ್ ಗೌಡ, ಗಿರೀಶ್, ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮುಂತಾದವರು ಈ ಸಮಾರಂಭಕ್ಕೆ ಸಾಕ್ಷಿಯಾದರು.

ನವರಸನ್​ ನಿರ್ಮಿಸುತ್ತಿರುವ 5ನೇ ಸಿನಿಮಾ ಇದು. ನಿರ್ದೇಶನ, ನಿರ್ಮಾಣ, ಸಿನಿಮಾ ವಿತರಣೆ ಮುಂತಾದ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಚಂದನ್​ ಶೆಟ್ಟಿ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾಗೆ ನಾಯಕಿಯಾಗಿ ಅಪೂರ್ವಾ ಅಭಿನಯಿಸುತ್ತಿದ್ದಾರೆ. ಒಳ್ಳೆಯ ತಂಡದ ಜೊತೆ ಸಿನಿಮಾ ಮಾಡುವ ಅವಕಾಶ ಸಿಕ್ಕಿರುವುದಕ್ಕೆ ಅವರಿಗೆ ಖುಷಿ ಇದೆ.

ಇದನ್ನೂ ಓದಿ
Image
‘ಗೋಲ್ಡ್​ ಫ್ಯಾಕ್ಟರಿ’ ತೋರಿಸಿದ ಚಂದನ್​ ಶೆಟ್ಟಿ-ಸುಜಯ್​ ಶಾಸ್ತ್ರಿ; ಹೇಗಿದೆ ಹೊಸ ಸಾಂಗ್​?
Image
ಪತಿ ಚಂದನ್​ ಶೆಟ್ಟಿಗಾಗಿ ಕ್ಯಾರೆಟ್​ ಹಲ್ವಾ ಮಾಡಿದ ನಿವೇದಿತಾ ಗೌಡ; ಬಾಯಿ ಚಪ್ಪರಿಸಿದ ಗಾಯಕ
Image
ಚಂದನ್​ ಶೆಟ್ಟಿ ಹೊಸ ಸಾಂಗ್​ ‘ಲಕ ಲಕ ಲ್ಯಾಂಬೋರ್ಗಿನಿ’ ಹೇಗಿದೆ? ಒಂದೇ ದಿನಕ್ಕೆ ಮಿಲಿಯನ್​ ವೀಕ್ಷಣೆ
Image
ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾ ‘ಎಲ್ರ ಕಾಲೆಳೆಯುತ್ತೆ ಕಾಲ’. ಆ ಚಿತ್ರದಲ್ಲಿ ಅವರಿಗೆ ರೆಟ್ರೋ ಲುಕ್​ ಇರಲಿದೆ. ಎರಡನೇ ಸಿನಿಮಾ ‘ಸೂತ್ರಧಾರಿ’ಯಲ್ಲಿ ಪೊಲೀಸ್​ ಪಾತ್ರವನ್ನು ಚಂದನ್​ ಶೆಟ್ಟಿ ಮಾಡಲಿರುವುದು ವಿಶೇಷ. ‘ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ‌. ಈ ಚಿತ್ರಕ್ಕಾಗಿ ನಾನು 12 ಕೆಜಿ ತೂಕ ಇಳಿಸಿಕೊಂಡಿದ್ದೀನಿ’ ಎಂದು ಚಂದನ್​ ಶೆಟ್ಟಿ ಹೇಳಿದ್ದಾರೆ.

ನಟನೆ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನೂ ಚಂದನ್​ ಶೆಟ್ಟಿ ಅವರೇ ವಹಿಸಿಕೊಂಡಿದ್ದಾರೆ. ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣ, ಕಿನ್ನಲ್ ರಾಜ್ ಸಾಹಿತ್ಯ, ಸಂಭಾಷಣೆ, ಸತೀಶ್ ಚಂದ್ರಯ್ಯ ಸಂಕಲನ ಈ ಚಿತ್ರಕ್ಕೆ ಇರಲಿದೆ. ತಬಲ ನಾಣಿ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಚಿತ್ರದ ಫಸ್ಟ್​ ಲುಕ್​ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !