ವಿಚ್ಛೇದನದ ಬಳಿಕವೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ; ಇಲ್ಲಿದೆ ವಿವರ

ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿ ಬಂದವು. ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ನೀಡಲಿದ್ದಾರೆ.

ವಿಚ್ಛೇದನದ ಬಳಿಕವೂ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ; ಇಲ್ಲಿದೆ ವಿವರ
ನಿವೇದಿತಾ-ಚಂದನ್
Follow us
Malatesh Jaggin
| Updated By: Digi Tech Desk

Updated on:Jun 10, 2024 | 4:00 PM

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ವಿಚ್ಛೇದನದ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿ ಲೀಕ್ ಆಗೋಕೆ ಬಿಟ್ಟಿರಲಿಲ್ಲ. ಈಗ ಏಕಾಏಕಿ ಇವರು ಬೇರೆ ಆಗುವ ನಿರ್ಧಾರ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯಕ್ಕೆ ಈಗ ನಾಲ್ಕು ವರ್ಷ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದರೆ, ಈಗ ಇವರು ಬೇರೆ ಆಗುತ್ತಿದ್ದಾರೆ. ಇದಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಇವರು ಬೇರೆ ಆಗುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿ ಬಂದವು. ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ನೀಡಲಿದ್ದಾರೆ.

ವಿಚ್ಛೇದನದ ಬಳಿಕ ಸಾಮಾನ್ಯವಾಗಿ ಒಬ್ಬರ ಮುಖ ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡಲ್ಲ. ಅನೇಕ ಸೆಲೆಬ್ರಿಟಿಗಳು ಈ ರೀತಿ ನಡೆದುಕೊಂಡಿದ್ದಾರೆ. ಆದರೆ, ಚಂದನ್ ಹಾಗೂ ನಿವೇದಿತಾ ಈ ವಿಚಾರದಲ್ಲಿ ಭಿನ್ನ ಎನಿಸಿಕೊಳ್ಳುತ್ತಾರೆ. ವಿಚ್ಛೇದನ ಪಡೆದು ಕೋರ್ಟ್​ನಿಂದ ಹೊರ ಬರುವಾಗ ಇವರು ಕೈ ಕೈ ಹಿಡಿದುಕೊಂಡು ಬದಿದ್ದರು. ಈ ಮೂಲಕ ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇರುವುದನ್ನು ತೋರಿಸಿಕೊಂಡಿದ್ದರು.

ಇದನ್ನೂ ಓದಿ: ಡಿವೋರ್ಸ್​ ಬಗ್ಗೆ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರಿನ ಜಿಟಿ ಮಾಲ್​ನಲ್ಲಿರುವ ಎಂಬಿ ಲೆಗಸಿಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿದೆ. ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭ ಆಗಲಿದೆ. ಈ ವೇಳೆ ಯಾವೆಲ್ಲ ವಿಚಾರ ಮಾತನಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:26 am, Mon, 10 June 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್