ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ವಿಚ್ಛೇದನದ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಕಳೆದ ಒಂದು ವರ್ಷಗಳಿಂದ ಇವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದರು. ಆದರೆ ಎಲ್ಲಿಯೂ ಸುದ್ದಿ ಲೀಕ್ ಆಗೋಕೆ ಬಿಟ್ಟಿರಲಿಲ್ಲ. ಈಗ ಏಕಾಏಕಿ ಇವರು ಬೇರೆ ಆಗುವ ನಿರ್ಧಾರ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದಾರೆ. ಈಗ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ.
ಚಂದನ್ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯಕ್ಕೆ ಈಗ ನಾಲ್ಕು ವರ್ಷ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದರೆ, ಈಗ ಇವರು ಬೇರೆ ಆಗುತ್ತಿದ್ದಾರೆ. ಇದಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಇವರು ಬೇರೆ ಆಗುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿ ಬಂದವು. ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ನೀಡಲಿದ್ದಾರೆ.
ವಿಚ್ಛೇದನದ ಬಳಿಕ ಸಾಮಾನ್ಯವಾಗಿ ಒಬ್ಬರ ಮುಖ ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡಲ್ಲ. ಅನೇಕ ಸೆಲೆಬ್ರಿಟಿಗಳು ಈ ರೀತಿ ನಡೆದುಕೊಂಡಿದ್ದಾರೆ. ಆದರೆ, ಚಂದನ್ ಹಾಗೂ ನಿವೇದಿತಾ ಈ ವಿಚಾರದಲ್ಲಿ ಭಿನ್ನ ಎನಿಸಿಕೊಳ್ಳುತ್ತಾರೆ. ವಿಚ್ಛೇದನ ಪಡೆದು ಕೋರ್ಟ್ನಿಂದ ಹೊರ ಬರುವಾಗ ಇವರು ಕೈ ಕೈ ಹಿಡಿದುಕೊಂಡು ಬದಿದ್ದರು. ಈ ಮೂಲಕ ಇವರ ಮಧ್ಯೆ ಒಳ್ಳೆಯ ಫ್ರೆಂಡ್ಶಿಪ್ ಇರುವುದನ್ನು ತೋರಿಸಿಕೊಂಡಿದ್ದರು.
ಇದನ್ನೂ ಓದಿ: ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಸುದ್ದಿಗೋಷ್ಠಿ ನೇರಪ್ರಸಾರ
ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಬಿ ಲೆಗಸಿಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿದೆ. ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭ ಆಗಲಿದೆ. ಈ ವೇಳೆ ಯಾವೆಲ್ಲ ವಿಚಾರ ಮಾತನಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:26 am, Mon, 10 June 24