ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ

ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಜೋಡಿಯಾಗಿ ನಟಿಸಲಿರುವ ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸೈಕಲಾಜಿಕಲ್​-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಕ್ಕೆ ಪುನೀತ್ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಎಲ್. ಮೋಹನ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ
ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Dec 11, 2023 | 5:56 PM

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ (Niveditha Gowda) ಫೇಮಸ್​ ಆಗಿದ್ದರೆ, ಚಂದನ್​ ಶೆಟ್ಟಿ ಅವರು ಸಂಗೀತ ನಿರ್ದೇಶಕನಾಗಿ ಸ್ಯಾಂಡಲ್​ವುಡ್​ನಲ್ಲಿ ಫೇಮಸ್​ ಆಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ’ ಶೋನಲ್ಲಿ ಪರಸ್ಪರ ಪರಿಚಯ ಆದ ಇವರಿಬ್ಬರು ನಂತರ ಪತಿ-ಪತ್ನಿ ಆದರು. ಈಗ ಸಿನಿಮಾದಲ್ಲೂ ಅವರಿಗೆ ಜೋಡಿಯಾಗಿ ನಟಿಸುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಸುದ್ದಿ ಬಹಿರಂಗ ಆಗಿದೆ. ಇದೇ ಮೊದಲ ಬಾರಿಗೆ ಸಿನಿಮಾದಲ್ಲಿ ಚಂದನ್​ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ಅವರು ಜೋಡಿಯಾಗಿ ನಟಿಸುತ್ತಿರುವುದರಿಂದ ಈ ಚಿತ್ರ ವಿಶೇಷ ಎನಿಸಿಕೊಳ್ಳಲಿದೆ.

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಚಂದನ್​ ಶೆಟ್ಟಿ ಅವರ ಖ್ಯಾತಿ ಹೆಚ್ಚಾಯಿತು. ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ನಟನಾಗಿಯೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅದೇ ರೀತಿ, ನಿವೇದಿತಾ ಗೌಡ ಅವರು ಬಿಗ್​ ಬಾಸ್​ ಮಾತ್ರವಲ್ಲದೇ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಂಡು ಜನಮನ ಗೆದ್ದರು. ರೀಲ್ಸ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಈಗ ಇದೇ ಮೊದಲ ಬಾರಿಗೆ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ರೀಲ್ಸ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆಯುವ ಸುರ ಸುಂದರಿ ನಿವೇದಿತಾ ಗೌಡ

ಈ ಸೆಲೆಬ್ರಿಟಿ ಜೋಡಿ ನಟಿಸಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸೈಕಲಾಜಿಕಲ್​-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಕ್ಕೆ ಪುನೀತ್ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಮತ್ತು ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಈಗ ಸ್ವತಂತ್ರ ನಿರ್ದೇಶನದಲ್ಲಿ ಮೊದಲ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ಸೆನ್ಸೇಷನ್​ ಸೃಷ್ಟಿಸುವ ಸುಂದರಿ ನಿವೇದಿತಾ ಗೌಡ ಫೋಟೋಗಳು ಇಲ್ಲಿವೆ ನೋಡಿ..

ಎಂ.ಎಸ್. ತ್ಯಾಗರಾಜ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಛಾಯಾಗ್ರಹಣದ ಜವಾಬ್ದಾರಿ ಕರುಣಾಕರ್ ಅವರದ್ದು. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಲಿದೆ. 2024ರ ಜನವರಿಯಲ್ಲಿ ಶೂಟಿಂಗ್​ ಆರಂಭ ಆಗಲಿದೆ. ನಿರ್ದೇಶಕ ಪುನೀತ್ ಶ್ರೀನಿವಾಸ್ ಅವರು ಚೊಚ್ಚಲ ಸಿನಿಮಾದಲ್ಲೇ ವಿಭಿನ್ನ ಕಾನ್ಸೆಪ್ಟ್ ಇರುವ ಕಥೆಯನ್ನು ಹೇಳಲಿದ್ದಾರೆ. ‘ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್’ ಮೂಲಕ ಈ ಸಿನಿಮಾವನ್ನು ಎಲ್. ಮೋಹನ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್