AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ

ಚಂದನ್​ ಶೆಟ್ಟಿ ನಿವೇದಿತಾ ಗೌಡ ವಿವಾಹ ವಿಚ್ಛೇದನ: ಕನ್ನಡ ಚಿತ್ರರಂಗದಲ್ಲಿ ಕ್ಯೂಟ್​ ಜೋಡಿ ಎನಿಸಿಕೊಂಡಿರುವ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ವಿಚ್ಛೇದನ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ವೃತ್ತಿಜೀವನದ ಒಳಿತಿನ ದೃಷ್ಟಿಯಿಂದ ಅವರು ಡಿವೋರ್ಸ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ..

ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ
ಚಂದನ್ ಶೆಟ್ಟಿ, ನಟಿ ನಿವೇದಿತಾ ಗೌಡ
ಮದನ್​ ಕುಮಾರ್​
|

Updated on:Jun 07, 2024 | 4:35 PM

Share

ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ನಟಿ ನಿವೇದಿತಾ ಗೌಡ (Nivedita Gowda) ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. ಹಾಗಾಗಿ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇಂದೇ (ಜೂನ್​ 7) ಅವರು ಡಿವೋರ್ಸ್​ (Divorce) ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ. 2017ರಲ್ಲಿ ಪ್ರಸಾರವಾದ ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ಶೋನಲ್ಲಿ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಪರಸ್ಪರ ಪರಿಚಯ ಆಗಿದ್ದರು. ಅವರಿಬ್ಬರ ಸ್ನೇಹ ನಂತರ ಪ್ರೀತಿಯಾಗಿ ಬದಲಾಯಿತು. ಮೈಸೂರಿನ ಯುವ ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್​ ಶೆಟ್ಟಿ ಅವರು ಪ್ರಪೋಸ್​ ಮಾಡಿದ್ದರು. ಬಳಿಕ ಅವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಚಂದನ್​ ಶೆಟ್ಟಿ ಅವರು ವಿನ್ನರ್​ ಆದರೆ, ನಿವೇದಿತಾ ಗೌಡ ಅವರು ಮೂರನೇ ರನ್ನರ್​ ಅಪ್​ ಆಗಿದ್ದರು. ಆ ಶೋನಿಂದ ಇಬ್ಬರ ಖ್ಯಾತಿಯೂ ಹೆಚ್ಚಿತು. ಬಿಗ್​ ಬಾಸ್​ ಮುಗಿದ ಬಳಿಕ ನಿವೇದಿತಾ ಗೌಡ ಅವರು ಇನ್ನೂ ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡರು. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಖತ್ ಫೇಮಸ್​ ಆಗಿದ್ದಾರೆ. ಚಿತ್ರರಂಗದಲ್ಲಿ ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಹಾಗೂ ನಟನಾಗಿ ಚಂದನ್​ ಶೆಟ್ಟಿ ಬ್ಯುಸಿ ಆಗಿದ್ದಾರೆ. ವೃತ್ತಿಜೀವನಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ಥಾಪ ಉಂಟಾಗಿರುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೊಳದಲ್ಲಿ ನಿವೇದಿತಾ ಗೌಡ ಮಸ್ತ್​ ಫೋಟೋಶೂಟ್​; ಆದ್ರೂ ಕೆಟ್ಟ ಕಮೆಂಟ್​

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ ತುಂಬ ಆ್ಯಕ್ಟೀವ್​ ಆಗಿದ್ದಾರೆ. ಆಗಾಗ ಅವರು ಹೊಸ ಹೊಸ ರೀಲ್ಸ್​ ಹಂಚಿಕೊಳ್ಳುತ್ತಾರೆ. ಅವರ ಪೋಸ್ಟ್​ಗಳು ಇನ್​ಸ್ಟಾಗ್ರಾಮ್​ನಲ್ಲಿ ವೈರಲ್​ ಆಗುತ್ತವೆ. ಅದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಾರೆ. ನಿವೇದಿತಾ ಗೌಡ ಅವರ ಪೋಸ್ಟ್​ಗೆ ಒಂದಷ್ಟು ಜನರು ನೆಗೆಟಿವ್​ ಕಮೆಂಟ್​ ಮಾಡುತ್ತಾರೆ. ಆ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಂತಿಲ್ಲ. ಕಮೆಂಟ್​ಗಳಲ್ಲಿ ಅನೇಕರು ಚಂದನ್​ ಶೆಟ್ಟಿಯ ಹೆಸರನ್ನೂ ಆಗಾಗ ಎಳೆದು ತರುತ್ತಾರೆ. ಈ ಕಾರಣದಿಂದಲೂ ಸಂಸಾರದಲ್ಲಿ ಏನಾದರೂ ಕಿರಿಕ್​ ಆಗಿರಬಹುದೇ ಎಂದು ಕೂಡ ಕೆಲವರು ಊಹಿಸುತ್ತಿದ್ದಾರೆ.

ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ. ಈವರೆಗೂ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಸಾರ್ವಜನಿಕವಾಗಿ ಮನಸ್ತಾಪ ಹೊರಹಾಕಿರಲಿಲ್ಲ. ಏಕಾಏಕಿ ಅವರ ವಿಚ್ಛೇದನದ ಬಗ್ಗೆ ಸುದ್ದಿ ಕೇಳಿಬಂದಿರುವುದರಿಂದ ಅಭಿಮಾನಿಗಳಿಗೆ ಮತ್ತು ನೆಟ್ಟಿಗರಿಗೆ ಅಚ್ಚರಿ ಆಗಿದೆ. ಈ ಬಗ್ಗೆ ಚಂದನ್​ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕುಟುಂಬದವರು ಹೇಳಿಕೆ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:09 pm, Fri, 7 June 24

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್