AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದು ರಾಕ್ಷಸಿ ನಿವೇದಿತಾ ಗೌಡ ಎದುರು ಮತ್ತೆ ಗುಲಾಬಿ ಹಿಡಿದ ಚಂದನ್​ ಶೆಟ್ಟಿ

ಮುದ್ದು ರಾಕ್ಷಸಿ ಎಂದ ಕೂಡಲೇ ಎಲ್ಲರಿಗೂ ಕೌತುಕ ಮೂಡುತ್ತದೆ. ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಜೊತೆಯಾಗಿರುವ ವಿಷಯ ತಿಳಿದು ಇನ್ನಷ್ಟು ಅಚ್ಚರಿ ಆಗುವುದು ಗ್ಯಾರಂಟಿ. ರಿಯಲ್​ ಲೈಫ್​ನಲ್ಲಿ ಇಬ್ಬರೂ ಬೇರೆ ಬೇರೆ ಆದ ನಂತರವೂ ಇಂಥದ್ದೊಂದು ಫೋಟೋ ಕಾಣಿಸಿಕೊಂಡಿದ್ದು ಹೇಗೆ ಎಂಬ ಪ್ರಶ್ನೆ ಕೂಡ ಮೂಡುತ್ತದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ..

ಮುದ್ದು ರಾಕ್ಷಸಿ ನಿವೇದಿತಾ ಗೌಡ ಎದುರು ಮತ್ತೆ ಗುಲಾಬಿ ಹಿಡಿದ ಚಂದನ್​ ಶೆಟ್ಟಿ
ಚಂದನ್​ ಶೆಟ್ಟಿ, ನಿವೇದಿತಾ ಗೌಡ
ಮದನ್​ ಕುಮಾರ್​
|

Updated on: Aug 30, 2024 | 7:08 PM

Share

ಸಂಗೀತ ನಿರ್ದೇಶಕ/ಗಾಯಕ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಆದರೆ ಕಾರಣಾಂತರಗಳಿಂದ ಅವರ ವಿಚ್ಛೇದನ ಆಯ್ತು. ಈಗ ಒಂದು ಫೋಟೋ ವೈರಲ್​ ಆಗುತ್ತಿದೆ. ನಿವೇದಿತಾ ಗೌಡ ಎದುರು ಚಂದನ್​ ಶೆಟ್ಟಿ ಅವರು ಗುಲಾಬಿ ಹೂವು ಹಿಡಿದು ಪ್ರಪೋಸ್​ ಮಾಡುತ್ತಿರುವ ಫೋಟೋ ಇದು. ಇದನ್ನು ನೋಡಿದರೆ ಜನರಿಗೆ ಅಚ್ಚರಿ ಆಗೋದು ಗ್ಯಾರಂಟಿ. ಅಂದಹಾಗೆ, ಇದು ‘ಮುದ್ದು ರಾಕ್ಷಸಿ’ ಸಿನಿಮಾದ ಫೋಟೋ. ಈ ಸಿನಿಮಾದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಚಂದನ್​ ಶೆಟ್ಟಿ ಅವರು ನಿಜವಾಗಿಯೂ ಈಗ ನಿವೇದಿತಾ ಗೌಡ ಅವರಿಗೆ ಪ್ರಪೋಸ್​ ಮಾಡಿಲ್ಲ. ಅವರು ಹೀಗೆಲ್ಲ ಮಾಡಿರುವುದು ‘ಮುದ್ದು ರಾಕ್ಷಸಿ’ ಸಿನಿಮಾಗಾಗಿ. ಇದು ಯಾವ ಸಿನಿಮಾ ಎಂಬ ಗೊಂದಲ ಮೂಡುವುದು ಸಹಜ. ಅದಕ್ಕೆ ಉತ್ತರ, ‘ಕ್ಯಾಂಡಿ ಕ್ರಶ್’. ಹೌದು, ಈ ಮೊದಲು ‘ಕ್ಯಾಂಡಿ ಕ್ರಶ್’ ಎಂದಿದ್ದ ಸಿನಿಮಾ ಶೀರ್ಷಿಕೆಯನ್ನು ಈಗ ‘ಮುದ್ದು ರಾಕ್ಷಸಿ’ ಎಂದು ಬದಲಾಯಿಸಲಾಗಿದೆ.

ಬಿಗ್​ ಬಾಸ್​ ಮೂಲಕ ಖ್ಯಾತಿ ಪಡೆದು ಜೋಡಿಯಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ ಸಿನಿಮಾ ಇದು. ಪುನೀತ್ ಶ್ರೀನಿವಾಸ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ತಾತ್ಕಾಲಿಕವಾಗಿ ‘ಕ್ಯಾಂಡಿ ಕ್ರಷ್’ ಎಂಬ ಟೈಟಲ್ ಇಟ್ಟುಕೊಳ್ಳಲಾಗಿತ್ತು. ಇನ್ಮುಂದೆ ಈ ಸಿನಿಮಾವನ್ನು ‘ಮುದ್ದು ರಾಕ್ಷಸಿ’ ಅಂತ ಕರೆಯಲಾಗುತ್ತದೆ.

‘ಮುದ್ದು ರಾಕ್ಷಸಿ ’ ಟೈಟಲ್​ ಭಿನ್ನವಾಗಿದ್ದು, ಜನರಲ್ಲಿ ಕೌತುಕ ಮೂಡಿಸಿದೆ. ಇದರಲ್ಲಿ ಒಂದು ಡಿಫರೆಂಟ್​ ಆದ ರೊಮ್ಯಾಂಟಿಕ್ ಪ್ರೇಮ್​ ಕಹಾನಿ ಇರಲಿದೆ. ಸೈಕೋಥ್ರಿಲ್ಲರ್ ಕಥಾಹಂದರ ಪ್ರಮುಖವಾಗಿ ಇರಲಿದೆ. ಸಿನಿಮಾದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಎ. ಕರುಣಾಕರ್ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಹಬ್ಬದ ಸೀಸನ್: ಸಾಂಪ್ರದಾಯಿಕ ಲುಕ್​ನಲ್ಲಿ ಕಂಗೊಳಿಸುತ್ತಿರುವ ನಿವೇದಿತಾ ಗೌಡ

ಮೋಹನ್ ಕುಮಾರ್ ಅವರು ‘ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್’ ಮೂಲಕ ‘ಮುದ್ದು ರಾಕ್ಷಸಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಬಹುತೇಕ ದೃಶ್ಯಗಳ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ