ಹೊಸ ವರ್ಷಕ್ಕೆ ಹೊಸ ಹಾಡಿನೊಂದಿಗೆ ಬಂದ ಚಂದನ್ ಶೆಟ್ಟಿ

Chandan Shetty: ಚಂದನ್ ಶೆಟ್ಟಿ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ರ್ಯಾಪ್ ಹಾಡೊಂದನ್ನು ಬಿಡುಗಡೆ ಮಾಡುವುದು ವಾಡಿಕೆ. ಅದರಂತೆ ಇದೀಗ ಹೊಸ ಹಾಡೊಂದನ್ನು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಹೊಸ ವರ್ಷಕ್ಕೆ ಹೊಸ ಹಾಡಿನೊಂದಿಗೆ ಬಂದ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Dec 23, 2023 | 7:54 PM

ಚಂದನ್ ಶೆಟ್ಟಿ (Chandan Shetty) ಕನ್ನಡದ ಜನಪ್ರಿಯ ರ್ಯಾಪರ್​ಗಳಲ್ಲಿ ಪ್ರಮುಖರು. ಕಾಲ-ಕಾಲಕ್ಕೆ ಹೊಸ ಹಾಡುಗಳೊಟ್ಟಿಗೆ ಜನರ ಮುಂದೆ ಬರುತ್ತಲೇ ಇರುತ್ತಾರೆ. ಸಿನಿಮಾಗಳಿಗೂ ಸಂಗೀತ ನೀಡಿರುವ ಚಂದನ್ ಶೆಟ್ಟಿ, ಇದೀಗ ನಟನಾಗಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದೆಲ್ಲದರ ನಡುವೆ ಹೊಸ ವರ್ಷಕ್ಕೆ ಹೊಸದೊಂದು ರ್ಯಾಪ್ ಹಾಡಿನೊಂದಿಗೆ ಚಂದನ್ ಶೆಟ್ಟಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಟಪಾಂಗುಚಿ ಮಾದರಿಯ ಹಾಡೊಂದನ್ನು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದು, ಹಾಡಿನಲ್ಲಿ ರಂಗಾಯಣ ರಘ ಸಹ ಇದ್ದಾರೆ. ಜೊತೆಗೆ ಗಿಚ್ಚಿ ಗಿಲಿಗಿಲಿ ಕಲಾವಿದರೂ ಸಹ ಇದ್ದಾರೆ.

ಪ್ರತಿವರ್ಷ ಡಿಸೆಂಬರ್ ತಿಂಗಳ ಕೊನೆಯಲ್ಲಿ ಚಂದನ್ ಶೆಟ್ಟಿ ರ್ಯಾಪ್ ಮಾದರಿಯ ಹಾಡೊಂದನ್ನು ಬಿಡುಗಡೆ ಮಾಡುತ್ತಾ ಬಂದಿದ್ದಾರೆ. ಚಂದನ್ ಶೆಟ್ಟಿಯವರ ಹಾಡುಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ. ಪ್ರತಿ ಬಾರಿಯಂತೆ ಈ ಬಾರಿ ಸಹ ಡಿಸೆಂಬರ್ ತಿಂಗಳಲ್ಲಿ ಚಂದನ್ ಶೆಟ್ಟಿ ಹೊಸದೊಂದು ಹಾಡೊಂದನ್ನು ಬಿಡುಗಡೆ ಮಾಡಿದ್ದಾರೆ. ‘ವಾಟ್ ಡೂ ಮಾಮ’ ಎಂದು ಪ್ರಾರಂಭವಾಗುವ ಅಪ್ಪಟ್ಟ ದೇಸಿ ಶೈಲಿಯ ಟಪಾಂಗುಚಿ ಹಾಡನ್ನು ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಯುವಕರ “ಪ್ರಾಬ್ಲಮ್”ಗಳನ್ನು ಬಿಂಬಿಸುವ ಹಾಡು ಇದಾಗಿದ್ದು, ‘ಪ್ರಾಬ್ಲಮ್ ಪ್ರಾಬ್ಲಮ್ ಪ್ರಾಬ್ಲಮ್ ವಾಟ್ ಟು ಡು ಮಾಮ?’ ಎಂದೇ ಹಾಡು ಆರಂಭವಾಗುತ್ತದೆ. ಇಷ್ಟು ದಿನ ಬಿಡುಗಡೆಯಾಗಿರುವ ಚಂದನ್ ಶೆಟ್ಟಿ ಅವರ ರ್ಯಾಪ್ ಹಾಡುಗಳು ಹೆಚ್ಚಾಗಿ ಆಧುನಿಕ ಜೀವನ ಶೈಲಿಯ ಮೇಲೆ, ಸ್ವಾಗ್ ಮೇಲೆ ಕೇಂದ್ರೀಕೃತವಾಗಿತ್ತು ಆದರೆ ಈ ಹಾಡು ಪಕ್ಕಾ ಲೋಕಲ್ ಶೈಲಿಯಲ್ಲಿ ಮೂಡಿಬಂದಿದೆ. ಕಂಠೀರವ ಸ್ಟುಡಿಯೋದಲ್ಲಿ ಬಾರ್​ನ ಸೆಟ್ ಹಾಕಿ ಈ ಹಾಡನ್ನು ಚಿತ್ರೀಕರಣ ಮಾಡಲಾಗಿದೆ. ಚಂದನ್ ಶೆಟ್ಟಿ ಈ ಹಾಡಿನಲ್ಲಿ ಪಕ್ಕಾ ಲೋಕಲ್ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಟ ರಂಗಾಯಣ ರಘು ಅವರು ಚಂದನ್ ಶೆಟ್ಟಿ ಅವರ ಸೋದರಮಾವನ ಪಾತ್ರದಲ್ಲಿ ನಟಿಸಿದ್ದಾರೆ. ಜನಪ್ರಿಯ ರಿಯಾಲಿಟಿ ಶೋ ‘ಗಿಚ್ಚಿ ಗಿಲಿಗಿಲಿ’ಯ ಕಲಾವಿದರಾದ ರಾಘವೇಂದ್ರ, ಆರ್ ಜೆ ವಿಕ್ಕಿ, ಹುಲಿ ಕಾರ್ತಿಕ್, ನಿತಿನ್ ಅಮಿನ್, ಶಿಡ್ ಶ್ಯಾಡೋ ಶಿವ, ಎನ್ ಸಿ ಅಯ್ಯಪ್ಪ ಮುಂತಾದವರು ಈ ಅದ್ದೂರಿ ರ್ಯಾಪ್ ಸಾಂಗ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:ಮೀಟರ್ ನನ್ನದು, ಮ್ಯಾಟರ್ ಅವರದ್ದು ಬಿಜೆಪಿ ಹಾಡು ಹುಟ್ಟಿದ ಬಗ್ಗೆ ಚಂದನ್ ಶೆಟ್ಟಿ ಮಾತು

ಇಷ್ಟು ದಿನ ಚಂದನ್ ಶೆಟ್ಟಿ ಅವರ ಸುಪ್ರಸಿದ್ದ ರ್ಯಾಪ್ ಸಾಂಗ್ಸ್ ಗಳನ್ನು ಬೇರೆ-ಬೇರೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಚಂದನ್ ಶೆಟ್ಟಿ ಅವರೆ ತಮ್ಮ ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ವಿಜಯ್ ಈಶ್ವರ್ ಅವರ ಜೊತೆಗೂಡಿ ಹಾಡನ್ನು ಬರೆದಿದ್ದಾರೆ. ರಿಯಾಲಿಟಿ ಶೋ ನಲ್ಲಿ ಜನಪ್ರಿಯರಾಗಿರುವ ಮುರುಗ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಉದಯಲೀಲ ಛಾಯಾಗ್ರಹಣ, ಸತೀಶ್ ಚಂದ್ರ ಸಂಕಲನ ಹಾಗೂ ದಿವಾಕರ್ ಅವರ ಕಲಾ ನಿರ್ದೇಶನ ಈ ಹಾಡಿಗೆ ಇದೆ. ಚಂದನ್ ಶೆಟ್ಟಿ ಅವರೆ ಸಂಗೀತ ಸಂಯೋಜಿಸಿ, ಹಾಡಿ, ನಿರ್ದೇಶನವನ್ನೂ ಮಾಡಿರುವ ಈ ಹಾಡು ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಮತ್ತು ಹೊಸವರ್ಷದ ಆಗಮನದ ಸಮಯವನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್