AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್ ಶೆಟ್ಟಿ ಜತೆ ರಚಿತಾ ರಾಮ್​ ‘ಲಕ ಲಕ ಲ್ಯಾಂಬೋರ್ಗಿನಿ’; ಪೋಸ್ಟರ್​ ಮೂಲಕ ಹೆಚ್ಚಿತು ಕ್ರೇಜ್​

Laka Laka Lamborghini: ಚಂದನ್​ ಶೆಟ್ಟಿ ಮತ್ತು ರಚಿತಾ ರಾಮ್​ ಜತೆಯಾಗಿ ಕಾಣಿಸಿಕೊಂಡಿರುವ ‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್​ ಬಿಡುಗಡೆ ಆಗಿದೆ. ಆ ಮೂಲಕ ಅಭಿಮಾನಿಗಳಲ್ಲಿ ಕಾತರ ಹೆಚ್ಚಿಸಿದೆ.

ಚಂದನ್ ಶೆಟ್ಟಿ ಜತೆ ರಚಿತಾ ರಾಮ್​ ‘ಲಕ ಲಕ ಲ್ಯಾಂಬೋರ್ಗಿನಿ’; ಪೋಸ್ಟರ್​ ಮೂಲಕ ಹೆಚ್ಚಿತು ಕ್ರೇಜ್​
ಚಂದನ್​ ಶೆಟ್ಟಿ, ರಚಿತಾ ರಾಮ್​
TV9 Web
| Edited By: |

Updated on:Dec 13, 2021 | 11:15 AM

Share

ಸಂಗೀತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ (Chandan Shetty) ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್​ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್​ ಆಗಿದ್ದಾರೆ. ‘3 ಪೆಗ್​’, ‘ಚಾಕೊಲೇಟ್​ ಗರ್ಲ್​’, ‘ಪಾರ್ಟಿ ಫ್ರೀಕ್​’ ಮುಂತಾದ ಗೀತೆಗಳು ಜನಮನ ಗೆದ್ದಿವೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್​ (Rachita Ram) ಅವರು ಹೆಜ್ಜೆ ಹಾಕಿರುವುದು ವಿಶೇಷ. ಈ ಹಾಡಿಗೆ ‘ಲಕ ಲಕ ಲ್ಯಾಂಬೋರ್ಗಿನಿ’ (Laka Laka Lamborghini) ಎಂದು ಶೀರ್ಷಿಕೆ ಇಡಲಾಗಿದೆ. ಅನೇಕ ಸಿನಿಮಾಗಳಲ್ಲಿ ರಚಿತಾ ರಾಮ್​ ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಈ ಮ್ಯೂಸಿಕ್​ ವಿಡಿಯೋಗಾಗಿ ಸಮಯ ಹೊಂದಿಸಿಕೊಂಡು ಡ್ಯಾನ್ಸ್​ ಮಾಡಿದ್ದಾರೆ.

ಚಂದನ್​ ಶೆಟ್ಟಿ ಹಾಡುಗಳು ಎಂದರೆ ಪಕ್ಕಾ ಡ್ಯಾನ್ಸ್​ ನಂಬರ್​ ಆಗಿರುತ್ತವೆ. ಈಗ ನ್ಯೂ ಇಯರ್​ ಸಮೀಪಿಸುತ್ತಿದೆ. ಎಲ್ಲರೂ ಪಾರ್ಟಿ ಮಾಡುವ ಮೂಡ್​ನಲ್ಲಿದ್ದಾರೆ. ಈ ಸಂದರ್ಭದಲ್ಲಿಯೇ ಚಂದನ್​ ಶೆಟ್ಟಿ ‘ಲಕ ಲಕ ಲ್ಯಾಂಬೋರ್ಗಿನಿ’ ಬಗ್ಗೆ ಸುದ್ದಿ ನೀಡಿ ಕೌತುಕ ಮೂಡಿಸಿದ್ದಾರೆ. ಈ ಹಾಡಿನ ಬಗ್ಗೆ ತಿಳಿಸಲು ಅವರೊಂದು ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ರಚಿತಾ ರಾಮ್​ ಮತ್ತು ಚಂದನ್​ ಶೆಟ್ಟಿ ಸ್ಟೈಲಿಶ್​ ಆಗಿ ಪೋಸ್​ ನೀಡಿದ್ದಾರೆ. ಆರ್​. ಕೇಶವ್​ ಮತ್ತು ಬಿಂದ್ಯಾ ಕೆ. ಗೌಡ ಅವರು ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ, ಸಾಹಿತ್ಯ, ಗಾಯನ ಮತ್ತು ಕಾನ್ಸೆಪ್ಟ್​ ಚಂದನ್​ ಶೆಟ್ಟಿ ಅವರದ್ದು.

ಸದ್ಯ ಪೋಸ್ಟರ್​ ನೋಡಿ ಅಭಿಮಾನಿಗಳ ಕ್ರೇಜ್​ ಹೆಚ್ಚಾಗಿದೆ. ಈ ಹಾಡಿಗಾಗಿ ತಾವು ಕಾತರದಿಂದ ಕಾಯುತ್ತಿರುವುದಾಗಿ ಫ್ಯಾನ್ಸ್​ ಕಮೆಂಟ್​ ಮಾಡಿದ್ದಾರೆ. ‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿಗೆ ಖ್ಯಾತ ನಿರ್ದೇಶಕ ನಂದ ಕಿಶೋರ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಪೊಗರು’ ಸಿನಿಮಾದಲ್ಲಿ ನಂದಕಿಶೋರ್​ ಮತ್ತು ಚಂದನ್​ ಶೆಟ್ಟಿ ಜೊತೆಯಾಗಿ ಕೆಲಸ ಮಾಡಿದ್ದರು. ಈಗ ‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿಗಾಗಿ ಮತ್ತೆ ಒಂದಾಗಿದ್ದಾರೆ. ಮುರಳಿ ಮಾಸ್ಟರ್​ ನೃತ್ಯ ನಿರ್ದೇಶನ ಮಾಡಿದ್ದಾರೆ. ಶೇಖರ್​ ಚಂದ್ರ ಅವರು ಛಾಯಾಗ್ರಹಣ ಮಾಡಿದ್ದಾರೆ. ನುರಿತ ತಂತ್ರಜ್ಞರು ಈ ಹಾಡಿಗಾಗಿ ಕೆಲಸ ಮಾಡಿರುವುದರಿಂದ ನಿರೀಕ್ಷೆ ಹೆಚ್ಚಿದೆ.

ಇದೇ ಪೋಸ್ಟರ್​ ಅನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಚಂದನ್​ ಶೆಟ್ಟಿ ಪತ್ನಿ ನಿವೇದಿತಾ ಗೌಡ ಅವರು ವಿಶ್​ ಮಾಡಿದ್ದಾರೆ.

ಇದನ್ನೂ ಓದಿ:

Rachita Ram: ವೇದಿಕೆ ಮೇಲೆ ಪುನೀತ್​ಗೆ ಅವಮಾನ: ಕ್ಷಮೆ ಕೇಳಿದ ರಚಿತಾ ರಾಮ್​ ಈಗ ನೀಡಿದ ಸಮಜಾಯಿಷಿ ಏನು?

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

Published On - 8:53 am, Mon, 13 December 21

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ