AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾರೆಸ್ಟ್’ ಸಿನಿಮಾದಲ್ಲಿ ಚಂದನ್ ಶೆಟ್ಟಿಯ ರ್ಯಾಪ್ ಹಾಡು

Chandan Shetty: ಅಡ್ವೇಂಚರ್ ಕತೆ ಹೊಂದಿರುವ ‘ಪಾರೆಸ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾಕ್ಕೆ ಚಂದನ್ ಶೆಟ್ಟಿ ಮಾಡಿರುವ Rap ಹಾಡು ಇದೀಗ ಬಿಡುಗಡೆ ಆಗಿದೆ. ‘ಪೈಸಾ ಪೈಸಾ ಪೈಸಾ’ ಎಂಬ ಈ ಹಾಡು ಒಳ್ಳೆಯ ಬೀಟ್​ನ ಜೊತೆಗೆ ಸಿನಿಮಾದ ಕತೆಯ ಗುಟ್ಟನ್ನು ಸಹ ಬಿಟ್ಟುಕೊಡುತ್ತಿದೆ.

‘ಫಾರೆಸ್ಟ್’ ಸಿನಿಮಾದಲ್ಲಿ ಚಂದನ್ ಶೆಟ್ಟಿಯ ರ್ಯಾಪ್ ಹಾಡು
Chikkanna
ಮಂಜುನಾಥ ಸಿ.
|

Updated on:Dec 21, 2024 | 12:09 PM

Share

ಚಿಕ್ಕಣ್ಣ, ರಂಗಾಯಣ ರಘು ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟರು ನಟಿಸಿರುವ ಹಾಸ್ಯಮಯ ಅಡ್ವೇಂಚರ್ ಕತೆ ಹೊಂದಿರುವ ‘ಪಾರೆಸ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾಕ್ಕೆ ಚಂದನ್ ಶೆಟ್ಟಿ ಮಾಡಿರುವ Rap ಹಾಡು ಇದೀಗ ಬಿಡುಗಡೆ ಆಗಿದೆ. ‘ಪೈಸಾ ಪೈಸಾ ಪೈಸಾ’ ಎಂಬ ಈ ಹಾಡು ಒಳ್ಳೆಯ ಬೀಟ್​ನ ಜೊತೆಗೆ ಸಿನಿಮಾದ ಕತೆಯ ಗುಟ್ಟನ್ನು ಸಹ ಬಿಟ್ಟುಕೊಡುತ್ತಿದೆ.

ಈಗ ಬಿಡುಗಡೆ ಆಗಿರುವ ‘ಪೈಸಾ ಪೈಸಾ ಪೈಸಾ’ ಹಾಡನ್ನು ‘ಬಹದ್ದೂರ್’ ಚೇತನ್ ಕುಮಾರ್ ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಡು ಹಾಡಿದ್ದು, ಹಾಡಿಗೆ ಸಂಗೀತ ನೀಡಿರುವುದು ಧರ್ಮವಿಶ್. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. ‘ಮನಿ ಮನಿ ಮನಿ’ ಹಾಡು Rap ಶೈಲಿಯಲ್ಲಿದ್ದು, ಯೂಟ್ಯೂಬ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಹಾಡು ಮೆಚ್ಚಿಕೊಳ್ಳುತ್ತಿದ್ದಾರೆ.

‘ಫಾರೆಸ್ಟ್’ ಚಿತ್ರದ 2025 ರ ಜನವರಿ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಎನ್ ಎಂ ಕಾಂತರಾಜ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಂಡಿದೆ. ಕಾಡಿನಲ್ಲಿ ಕೆಲವು ಭಿನ್ನ ವ್ಯಕ್ತಿಗಳ ನಡುವೆ ನಡೆಯುವ ಅಡ್ವೆಂಚರಸ್ ಕಾಮಿಡಿ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಈ ಸಿನಿಮಾವನ್ನು ಚಂದ್ರಮೋಹನ್ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:ಚಿಕ್ಕಣ್ಣನ ಹೇಳಿಕೆಯಿಂದ ಪೊಲೀಸರಿಗೆ ತಿಳಿದಿದ್ದು ಏನು? ವಾದ ಮಂಡಿಸಿದ ಎಸ್​ಪಿಪಿ

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಮಲ್ಟಿಸ್ಟಾರರ್ ಸಿನಿಮಾದ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದವರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sat, 21 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್