ದುಬೈನಲ್ಲಿ ಪ್ರದರ್ಶನ ಕಾಣಲಿದೆ ‘ವಿದ್ಯಾರ್ಥಿ-ವಿಧ್ಯಾರ್ಥಿನಿಯರೇ’
ಚಂದನ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರೇ ಸಿನಿಮಾ ದುಬೈನಲ್ಲಿ ಜುಲೈ 14ರಂದು ಪ್ರೀಮಿಯರ್ ಶೋ ಪ್ರದರ್ಶನಗೊಳ್ಳಲಿದೆ. ಈ ಸಿನಿಮಾ ಜುಲೈ 19ರಂದು ರಾಜ್ಯದಲ್ಲಿ ಬಿಡುಗಡೆ ಆಗಲಿದೆ.
ಅರುಣ್ ಅಮುಕ್ತ ನಿರ್ದೇಶನದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಜುಲೈ ತಿಂಗಳ 19ರಂದು ಬಿಡುಗಡೆ ಆಗಲಿದೆ. ಅದೇ ದಿನ ನೆರೆಯ ಕೇರಳದಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಿನಿಮಾ ಬಿಡುಗಡೆ ಆಗಲಿದೆ. ಕಾಲೇಜು ಕತೆಯುಳ್ಳ ಈ ಸಿನಿಮಾದ ವಿಶೇಷ ಪ್ರದರ್ಶನ ಜುಲೈ 14 ರಂದು ದುಬೈನಲ್ಲಿ ನಡೆಯುತ್ತಿರುವುದು ವಿಶೇಷ.
ಚಿತ್ರತಂಡ ಹೇಳಿರುವಂತೆ, ಜುಲೈ 14ರಂದು ದುಬೈನಲ್ಲಿ ಈ ಸಿನಿಮಾದ ಪ್ರೀಮಿಯರ್ ಶೋ ನಡೆಯಲಿದೆ. ಪ್ರತಿಷ್ಠಿತ ಒಎಂಜಿ ಕಂಪೆನಿ ದುಬೈನಲ್ಲಿ ಈ ಚಿತ್ರದ ವಿತರಣಾ ಹಕ್ಕು ಪಡೆದುಕೊಂಡಿದೆ. ಸಿನಿಮಾದ ಪ್ರೀಮಿಯರ್ ಶೋಗೆ ಬೇಕಾದ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ.
ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದೆ. ಈಗಿನ ಯುವ ಸಮೂಹವನ್ನು ಸೆಳೆಯುವ ಕಥೆಯನ್ನು ಸಿನಿಮಾ ಒಳಗೊಂಡಿದೆ. ಅರುಣ್ ಅಮುಕ್ತ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ಸಿನಿಮಾ ಪ್ರೇಮಿಗಳು ಕುತೂಹಲ ಇರಿಸಿಕೊಂಡಿದ್ದಾರೆ. ಆದರೆ ಚಿತ್ರತಂಡವು ತಮ್ಮದೇ ರಂಗದದವರ ಬೆಂಬಲಕ್ಕೆ ಹಂಬಲಿಸುತ್ತಿದ್ದಾರೆ.
ತಮ್ಮ ಸಿನಿಮಾದ ಬೆಂಬಲಕ್ಕೆ ಕನ್ನಡದ ತಾರೆಯರು, ತಂತ್ರಜ್ಞರು, ಕಲಾವಿದರೆಲ್ಲ ನಿಲ್ಲುವ ಅವಶ್ಯಕತೆ ಇದೆ. ಸ್ಟಾರ್ ಹೀರೋಗಳು ಇಂಥಾ ಸಿನಿಮಾಗಳಿಗೆ ಪ್ರೋತ್ಸಾಹ ನೀಡೋದು ಈವತ್ತಿನ ಸನ್ನಿವೇಷದ ತುರ್ತು. ಯಾಕೆಂದರೆ, ಈಗೊಂದಷ್ಟು ತಿಂಗಳಿಂದ ಹೇಳಿಕೊಳ್ಳುವಂಥಾ ಗೆಲುವು ದಕ್ಕದೆ ಕನ್ನಡ ಚಿತ್ರರಂಗ ಬಸವಳಿದಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಥರದ ಸಿನಿಮಾಗಳು ಗೆದ್ದರೆ, ದೊಡ್ಡ ದೊಡ್ಡ ಸಿನಿಮಾಗಳ ಹಾದಿಯೂ ಸುಗಮವಾಗುತ್ತೆ. ಚಿತ್ರರಂಗದ ಉಳಿವಿನ ದೃಷ್ಟಿಯಿಂದ ಇಂಥಾ ಚಿತ್ರಗಳ ಗೆಲುವು ಅನಿವಾರ್ಯ ಎಂಬುದು ಚಿತ್ರತಂಡದ ಅಭಿಪ್ರಾಯ.
ಇದನ್ನೂ ಓದಿ:ಚಂದನ್ ಶೆಟ್ಟಿ, ವಿಚ್ಛೇದಿತ ಪತ್ನಿ ನಿವೇದಿತಾಗೆ ಜೀವನಾಂಶ ನೀಡಿದರಾ?
‘ವಿಧ್ಯಾರ್ಥಿ-ವಿಧ್ಯಾರ್ಥಿನಿಯರೇ’ ಸಿನಿಮಾವನ್ನು ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ ಮಾಡಿದ್ದಾರೆ. ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ