ಚಂದನ್​ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಟ್ರೇಲರ್​ ಹೇಗಿದೆ ನೋಡಿ..

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಈ ಟ್ರೇಲರ್​ ರಿಲೀಸ್ ಆಗಿದೆ. ಚಂದನ್​ ಶೆಟ್ಟಿ ಅವರಿಗೆ ಈ ಸಿನಿಮಾದಲ್ಲಿ ಡಿಫರೆಂಟ್​ ಪಾತ್ರ ಇದೆ. ಸಿನಿಮಾದ ಹೆಸರೇ ಸೂಚಿಸುತ್ತಿರುವಂತೆ ಇದು ಟೀನೇಜ್​ ಹುಡುಗ-ಹುಡುಗಿಯರ ಕಥೆ ಇರುವ ಚಿತ್ರ. ಇದಕ್ಕೆ ಅರುಣ್ ಅಮುಕ್ತ ಅವರ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಟ್ರೇಲರ್​ ಮೂಲಕ ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಲಾಗಿದೆ.

ಚಂದನ್​ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಟ್ರೇಲರ್​ ಹೇಗಿದೆ ನೋಡಿ..
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಪೋಸ್ಟರ್​

Updated on: May 14, 2024 | 9:14 PM

ಬಿಗ್​ ಬಾಸ್​ ವಿನ್ನರ್​, ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಅವರು ಪ್ರಮುಖ ಪಾತ್ರ ಮಾಡಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಟೈಟಲ್​ಗೆ ತಕ್ಕಂತೆ ಈ ಸಿನಿಮಾದಲ್ಲಿ ಹದಿಹರೆಯದ ಮನಸ್ಸುಗಳ ಕಹಾನಿ ಇರಲಿದೆ. ಈಗಾಗಲೇ ಪ್ರೇಕ್ಷಕರಲ್ಲಿ ಕೌತುಕ ಮೂಡಿಸಿರುವ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದ ಝಲಕ್​ ತೋರಿಸುವಂತೆ ಈ ಟ್ರೇಲರ್​ (Vidyarthi Vidyarthiniyare Trailer) ಮೂಡಿಬಂದಿದೆ. ಹದಿಹರೆಯದ ಯುವಕರ ಕಥೆಯನ್ನು ಪರಿಚಯಿಸುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಈ ಟ್ರೇಲರ್​ಗೆ ‘ಸೈಡ್​ ಎ’ ಎಂದು ಹೆಸರು ಇಡಲಾಗಿದೆ. ಸೈಡ್​ ಬಿ ನೋಡಲು ಕಾತರ ಹೆಚ್ಚಾಗಿದೆ.

ಈ ಸಿನಿಮಾದಲ್ಲಿ ಶಾಲಾ-ಕಾಲೇಜು ಕಹಾನಿ ಇದೆ ಎಂದಮಾತ್ರಕ್ಕೆ ಇದು ಸಿದ್ಧಸೂತ್ರಗಳ ಸಿನಿಮಾ ಅಲ್ಲ ಎನ್ನುತ್ತಿದೆ ಚಿತ್ರತಂಡ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಹೊಡೆದಾಟ, ರ‍್ಯಾಗಿಂಗ್​, ಬಿಸಿ ರಕ್ತದ ಯುವಕರ ಪುಂಡಾಟ ಸೇರಿದಂತೆ ಹಲವು ಅಂಶಗಳು ಇವೆ. ಅಷ್ಟೇ ಅಲ್ಲ, ಶೈಕ್ಷಣಿಕ ಪರಿಸರದಲ್ಲಿ ಇರುವ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನ ಕೂಡ ಇದರಲ್ಲಿ ಆಗಿದೆ. ಮೋಜು-ಮಸ್ತಿ ಮಾಡುತ್ತ ಮೈಮರೆತವರ ಕಥೆ ಕೂಡ ಈ ಸಿನಿಮಾದಲ್ಲಿ ಇರಲಿದೆ. ದಾರಿ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಪ್ರಯತ್ನವೂ ಈ ಚಿತ್ರದಿಂದ ಆಗಲಿದೆ ಎಂಬುದಕ್ಕೆ ಟ್ರೇಲರ್​ ಸುಳಿವು ನೀಡಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಚಂದನ್ ಶೆಟ್ಟಿ , ಭಾವನಾ, ಅಮರ್, ಮಾನಸಿ, ಭವ್ಯ, ವಿವಾನ್, ಸುನೀಲ್ ಪುರಾಣಿಕ್, ಸಿಂಚನಾ, ಅರವಿಂದ್​ ರಾವ್, ರಘು ರಾಮನಕೊಪ್ಪ, ಕಾಕ್ರೋಚ್ ಸುಧಿ, ಪ್ರಶಾಂತ್ ಸಂಬರ್ಗಿ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಚಂದನ್ ಶೆಟ್ಟಿ ಅವರ ಪಾತ್ರ ಈ ಸಿನಿಮಾದಲ್ಲಿ ಡಿಫರೆಂಟ್​ ಆಗಿದೆ. ಅರುಣ್ ಅಮುಕ್ತ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಅವರು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಸುಬ್ರಮಣ್ಯ ಕುಕ್ಕೆ ಹಾಗೂ ಎ.ಸಿ. ಶಿವಲಿಂಗೇಗೌಡ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಕುಮಾರ್ ಗೌಡ ಅವರ ಛಾಯಾಗ್ರಹಣ, ಪವನ್ ಗೌಡ ಅವರ ಸಂಕಲನ, ಟೈಗರ್ ಶಿವು ಹಾಗೂ ನರಸಿಂಹ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ಭರ್ಜರಿ ಚೇತನ್ ಕುಮಾರ್​ ಮತ್ತು ವಾಸುಕಿ ವೈಭವ್ ಅವರು ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us