Huliya: ‘ಹುಲಿಯ’ನಿಗೆ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳ ಬೆಂಬಲ

Huliya: ದೇವರಾಜ್ ನಟಿಸಿದ್ದ ಹುಲಿಯಾ ಹೆಸರಿನ ಸಿನಿಮಾ 1996 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೆಸರಿಟ್ಟುಕೊಂಡ ಹೊಸ ಸಿನಿಮಾ ರೆಡಿಯಾಗುತ್ತಿದೆ.

Huliya: 'ಹುಲಿಯ'ನಿಗೆ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳ ಬೆಂಬಲ
ಹುಲಿಯಾ
Follow us
ಮಂಜುನಾಥ ಸಿ.
|

Updated on: Apr 29, 2023 | 10:01 PM

ಹುಲಿಯಾ (Huliya) ಹೆಸರಿನ ಕನ್ನಡ ಸಿನಿಮಾ ಈಗಾಗಲೇ ಬಂದಿದೆ. ದೇವರಾಜ್ (Devaraj) ನಟಿಸಿದ್ದ ಆಕ್ಷನ್ ಸಿನಿಮಾ ಹುಲಿಯಾ 1996 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಇನ್ನು ಹೌದು ಹುಲಿಯಾ ಗೊತ್ತೆ ಇದೆಯಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಡೈಲಾಗ್ ಬಹಳ ಜನಪ್ರಿಯವಾಗಿತ್ತು. ಆದರೆ ಇದೀಗ ದೇವರಾಜ್ ನಟಿಸಿದ್ದ ಹುಲಿಯಾ ಸಿನಿಮಾದ ಶೀರ್ಷಿಕೆಯನ್ನೇ ಇರಿಸಿಕೊಂಡು ಹೊಸ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ (Sandalwood) ಸೂಪರ್ ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗುವುದು ಹೊಸತೆನಲ್ಲ. ಈಗ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆಯ ‘ಹುಲಿಯಾ’ ಶೀರ್ಷಿಕೆ ಮರುಬಳಕೆ ಮಾಡಿಕೊಂಡು ಹೊಸ ಚಿತ್ರವೊಂದು ತಯಾರಾಗುತ್ತಿದೆ. ತೂತುಮಡಿಕೆ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಯುವ ನಿರ್ದೇಶಕ ಮತ್ತು ನಟ ಚಂದ್ರಕೀರ್ತಿ ಎರಡನೇ ಸಿನಿಮಾಕ್ಕೆ ‘ಹುಲಿಯಾ’ ಎಂಬ ಟೈಟಲ್ ಇಡಲಾಗಿದೆ. ದೇವರಾಜ್ ಅವರ ಆಶೀರ್ವಾದೊಂದಿಗೆ ಶುರುವಾಗುತ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಸಿಲಿಕಾನ್ ಸಿಟಿ, ಕಿಸ್, ಮೂಕವಿಸ್ಮಿತ, ಬೆಂಕಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಚಂದ್ರಕೀರ್ತಿ ತೂತುಮಡಿಕೆ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಮೊದಲ ಚಿತ್ರದಲ್ಲಿಯೇ ಗಮನಸೆಳೆದಿದ್ದ ಅವರಿಗೆ ಹುಲಿಯಾ ಮೂಲಕ ಲವ್ ಹಾಗೂ ಆಕ್ಷನ್ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರನ್ನು ರಂಜಿಸಲು ಅಣಿಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಚಂದ್ರಕೀರ್ತಿ ನಾಯಕನಾಗಿಯೂ ನಟಿಸುತ್ತಿದ್ದಾರೆ. ಹುಲಿಯಾ ಪೋಸ್ಟರ್ ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ತೂತುಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್, ಮಧು ರಾವ್ ಹಾಗೂ ವಸಂತ್ ವಲ್ಲಭ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಸ್ವಾಮಿನಾಥನ್ ಆರ್ ಕೆ ಸಂಗೀತ, ಭಜರಂಗಿ, ವೇದ ಹಾಗೂ ಬೆಲ್ ಬಾಟಂ ಸಂಭಾಷಣೆಗಾರ ರಘು ನಿಡುವಳ್ಳಿ ಮಾತು ಚಿತ್ರಕ್ಕಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರುವ ಹುಲಿಯಾ ಚಿತ್ರತಂಡ ಶೀಘ್ರದಲ್ಲಿ ಉಳಿದ ತಾಂತ್ರಿಕ ಹಾಗೂ ತಾರಾಬಳಗ ಬಗ್ಗೆ ಮಾಹಿತಿ ನೀಡಲಿದೆ.

ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದ್ದು, ”ದಟ್ಟ ಕಾನನದ ಅಸ್ಥಿತ್ವವೇ ಕ್ರೌರ್ಯ, ಇಲ್ಲಿ ಉಳಿಯಲು ಹೋರಾಟ ಅನಿವಾರ್ಯ, ಹಿಡಿಯದೇ ಹೋದರೆ ಕಠಾರಿ, ಕ್ರೂರ ವಿಧಿಗೆ ನೀನೆ ಶಿಕಾರಿ” ಎಂಬ ಪವರ್​ಫುಲ್ ಡೈಲಾಗ್ ಜೊತೆಗೆ ಅರಣ್ಯದ ದೃಶ್ಯಗಳು, ಕ್ರೂರ ಮೃಗಗಳ ಚಿತ್ರಗಳಿವೆ ಜೊತೆಗೆ ಕಟ್ಟುಮಸ್ತು ದೇಹದ ನಾಯಕ ರೋಷದಲ್ಲಿ ಚೀರುತ್ತಿರುವ ದೃಶ್ಯವೂ ಇದೆ. ಒಟ್ಟಾರೆಯಾಗಿ ಟೈಟಲ್ ಟೀಸರ್ ಗಮನ ಸೆಳೆಯುತ್ತಿದ್ದು, ಅರಣ್ಯದಲ್ಲಿ ನಡೆವ ಆಕ್ಷನ್ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ ಎಂದು ಊಹಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ