Abhinaya: ಜೈಲು ಶಿಕ್ಷೆ ಪ್ರಕಟ ಆದ ಬಳಿಕ ತಲೆ ಮರೆಸಿಕೊಂಡ ನಟಿ ಅಭಿನಯಾ; ಲುಕ್​ಔಟ್​ ನೋಟಿಸ್​ ಜಾರಿ

Actress Abhinaya | Lookout Notice: ಪೊಲೀಸರು ಅಭಿನಯಾ ಅವರನ್ನು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡಿದ್ದು, ಈಗ ಲುಕ್​ಔಟ್​ ನೋಟಿಸ್​ ಜಾರಿ ಮಾಡಲಾಗಿದೆ.

Abhinaya: ಜೈಲು ಶಿಕ್ಷೆ ಪ್ರಕಟ ಆದ ಬಳಿಕ ತಲೆ ಮರೆಸಿಕೊಂಡ ನಟಿ ಅಭಿನಯಾ; ಲುಕ್​ಔಟ್​ ನೋಟಿಸ್​ ಜಾರಿ
ಅಭಿನಯಾ ವಿರುದ್ಧ ಲುಕ್ಔಟ್ ನೋಟಿಸ್
Follow us
ಮದನ್​ ಕುಮಾರ್​
|

Updated on:Feb 09, 2023 | 8:25 PM

ಅತ್ತಿಗೆಗೆ ವರದಕ್ಷಿಣಿ ಕಿರುಕುಳ (Dowry Case) ನೀಡಿದ ಪ್ರಕರಣದಲ್ಲಿ ಖ್ಯಾತ ನಟಿ ಅಭಿನಯಾ (Abhinaya) ಅವರಿಗೆ ಇತ್ತೀಚೆಗೆ ಜೈಲು ಶಿಕ್ಷೆ ಪ್ರಕಟ ಆಗಿತ್ತು. ಆ ಬಳಿಕ ಅವರು ತಲೆ ಮರೆಸಿಕೊಂಡಿದ್ದಾರೆ. ಅಭಿನಯಾ ಅವರ ಪತ್ತೆಗಾಗಿ ಬೆಂಗಳೂರಿನ ಚಂದ್ರಾ ಲೇಔಟ್​ ಪೊಲೀಸರು ಬಲೆ ಬೀಸಿದ್ದಾರೆ. ಅಭಿನಯಾ ಜೊತೆ ಅವರ ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜು ಅವರಿಗಾಗಿಯೂ ಹುಡುಕಾಟ ನಡೆದಿದೆ. ಅಪರಾಧಿಗಳ ಬಗ್ಗೆ ಸುಳಿವು ಸಿಕ್ಕರೆ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದು, ಲುಕ್​ಔಟ್​ ನೋಟಿಸ್​ (lookout notice) ಜಾರಿ ಮಾಡಿದ್ದಾರೆ. ಪೊಲೀಸರು ಈ ಮೂವರನ್ನೂ ಬಂಧಿಸಿ ಕೋರ್ಟ್​ಗೆ ಹಾಜರು ಪಡಿಸಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಅವರು ತಲೆಮರೆಸಿಕೊಂಡಿದ್ದಾರೆ.

ನಟಿ ಅಭಿನಯಾ ಕೇಸ್​ ಹಿನ್ನಲೆ:

ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಈ ಹಿಂದೆ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ತಮಗೆ ವರದಕ್ಷಿಣಿ ಕಿರುಕುಳ ನೀಡಲಾಗಿದೆ ಮತ್ತು ಕೌಟುಂಬಿಕ ದೌರ್ಜನ್ಯ ನಡೆಸಲಾಗಿದೆ ಎಂದು ಲಕ್ಷ್ಮಿದೇವಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಿ, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಅಭಿನಯಾ ಹಾಗೂ ಅವರ ಸಹೋದರ ಚೆಲುವರಾಜ್​ಗೆ 2 ವರ್ಷ ಶಿಕ್ಷೆ ನೀಡಲಾಗಿತ್ತು.

2 ದಶಕಗಳ ಹಳೇ ಪ್ರಕರಣ:

ಅಭಿನಯಾ ಅವರ ಅತ್ತಿಗೆ ಲಕ್ಷ್ಮಿದೇವಿ ಅವರು 2002ರಲ್ಲಿಯೇ ಈ ಕೇಸ್​ ದಾಖಲಿಸಿದ್ದರು. 1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್​ ಜೊತೆ ಲಕ್ಷ್ಮಿದೇವಿ ವಿವಾಹ ನೆರವೇರಿತ್ತು. ಮದುವೆ ಬಳಿಕ ಶ್ರೀನಿವಾಸ್​ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್​ನಲ್ಲಿ ಲಕ್ಷ್ಮಿದೇವಿ ದೂರು ದಾಖಲಿಸಿದ್ದರು.

ಇದನ್ನೂ ಓದಿ
Image
ಅಂತಸ್ತು, ವಿದ್ಯಾಭ್ಯಾಸ, ಆಲೋಚನೆ, ಹೊಂದಾಣಿಕೆಗಳ ಕೊರತೆ: ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು
Image
Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ; ಸಾವಿನ ಸುತ್ತ ಅನುಮಾನದ ಹುತ್ತ

ಇದನ್ನೂ ಓದಿ: Abhinaya: ‘ವೇಶ್ಯಾವಾಟಿಕೆಗೆ ನನ್ನನ್ನು ತಳ್ಳಲು ಪ್ರಯತ್ನಿಸಿದ್ರು’; ನಟಿ ಅಭಿನಯಾ ವಿರುದ್ಧ ಅತ್ತಿಗೆ ಗಂಭೀರ ಆರೋಪ

‘ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು’ ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರ ಡಿಸೆಂಬರ್​ನಲ್ಲಿ ಹೈಕೋರ್ಟ್​ ತೀರ್ಪು ನೀಡಿದ್ದು ಅಭಿನಯಾ, ಅವರ ತಾಯಿ ಮತ್ತು ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಈ ಮೂವರೂ ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು

ಕನ್ನಡ ಚಿತ್ರರಂಗದಲ್ಲಿ ಅಭಿನಯಾ ಅವರು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಚೊಚ್ಚಲ ಸಿನಿಮಾ ‘ಅನುಭವ’ ಮೂಲಕ ಅವರು ಹೆಚ್ಚು ಗುರುತಿಸಿಕೊಂಡರು. ಆದರೆ ನಂತರ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಅವರು ಮನೆಮಾತಾದರು. ಆದರೆ ಈಗ ಅಪರಾಧಿ ಸ್ಥಾನದಲ್ಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:25 pm, Thu, 9 February 23

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ