ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ
Chargesheet Against Darshan: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು 3991 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಯಾವೆಲ್ಲ ಅಂಶಗಳು ಇರಲಿವೆ ಎನ್ನುವ ಕುರಿತು ಕುತೂಹಲ ಮೂಡಿದೆ. ದರ್ಶನ್ ಅವರು ಎ2 ಆರೋಪಿ ಆಗಿ ಮುಂದುವರಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ಗೆ ಕೊಂಚ ರಿಲೀಫ್ ನೀಡಿದೆ.
ಈ ಮೊದಲು ಎಫ್ಐಆರ್ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ಶೀಟ್ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ. ಇದರಿಂದ ಪವಿತ್ರಾ ಅವರು ಎ1 ಆರೋಪಿ ಆಗಿ ಮುಂದುವರಿದಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾದ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್ಎಸ್ಎಲ್ ಮಾತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ವಿಶೇಷ ಕೋರ್ಟ್ಗೆ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.
ಇದನ್ನೂ ಓದಿ: ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಅರ್ಜಿ ವಜಾ
ಕಿಡ್ನಾಪ್ ಮಾಡಿಸಿದ್ದು, ಹಲ್ಲೆ ಮಾಡಿದ್ದು, ಕೊಲೆ ನಂತ್ರ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಅನ್ನೋದು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಆಗಿದೆ. ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ಅವರ ರಕ್ತ ಇರುವುದು ಪತ್ತೆ ಆಗಿದೆ. ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಖಚಿತ ಮಾಹಿತಿ ಸಿಕ್ಕಂತೆ ಆಗಿದೆ.
ಕೊಲೆ ಮಾಡಲು ಮೂಲ ಕಾರಣ ಪವಿತ್ರಾ ಗೌಡ. ಹೀಗಾಗಿ, ಅವರು ಎ1 ಆಗಿದ್ದಾರೆ. ಹಲ್ಲೆ ನಡೆಯುವ ಸ್ಥಳದಲ್ಲಿ ಅವರು ಹಾಜರಿದ್ದರು. ಚಪ್ಪಲಿಯಲ್ಲಿ ಅವರು ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಪವಿತ್ರ ಗೌಡ ಅಲ್ಲೇ ಇರುವುದಕ್ಕೆ ಸಾಕ್ಷಿ ಸಿಕ್ಕಿದೆ. ಪವಿತ್ರ ಗೌಡ ಮೊಬೈಲ್ ಕೃತ್ಯದ ಸ್ಥಳದಲ್ಲಿ ಆಕ್ಟೀವ್ ಆಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:52 am, Wed, 4 September 24