ಚಯನ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾ ‘ಮ್ಯಾರೇಜ್ ಪಾರ್ಟಿ’ ಡಿಸೆಂಬರ್ 4ರಂದು ತೆರೆಗೆ

‘ಮ್ಯಾರೇಜ್ ಪಾರ್ಟಿ’ ಸಿನಿಮಾದಲ್ಲಿ ಪ್ರಕಾಶ್ ತುಮಿನಾಡು, ನವೀನ್ ಡಿ. ಪಡೀಲ್, ದೀಪಕ್ ರೈ, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ಜ್ಯೋತಿಷ್ ಶೆಟ್ಟಿ, ಪುಷ್ಪರಾಜ್ ಬೋಳಾರ್, ರಾಧಾಕೃಷ್ಣ, ರಘು ಪಾಂಡೇಶ್ವರ, ಭೀಮ್ ರಾವ್, ಪಿಡಿ ಸತೀಶ್ ಮುಂತಾದವರು ನಟಿಸಿದ್ದಾರೆ. ಡಿಸೆಂಬರ್ 4ರಂದು ಸಿನಿಮಾ ರಿಲೀಸ್ ಆಗಲಿದೆ.

ಚಯನ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾ ‘ಮ್ಯಾರೇಜ್ ಪಾರ್ಟಿ’ ಡಿಸೆಂಬರ್ 4ರಂದು ತೆರೆಗೆ
Marriage Party Poster

Updated on: Sep 25, 2026 | 6:34 PM

ನಿರ್ದೇಶಕ ಚಯನ್ ಶೆಟ್ಟಿ ಅವರು ಈ ಹಿಂದೆ ‘ಬಿಗ್‌ ಬಾಸ್ ಕನ್ನಡ’ ರಿಯಾಲಿಟಿ ಶೋ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ‘ಅಧಿಪತ್ರ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದರು. ಆ ಸಿನಿಮಾದ ಮೂಲಕ ಮೊದಲ ಪ್ರಯತ್ನದಲ್ಲಿಯೇ ಅವರು ಗಮನ ಸೆಳೆದಿದ್ದರು. ಚಯನ್ ಶೆಟ್ಟಿ ಅವರ ಮುಂದಿನ ಸಿನಿಮಾ ಬಗ್ಗೆ ಸಿನಿಪ್ರಿಯರಿಗೆ ನಿರೀಕ್ಷೆ ಇದೆ. ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಮೂಲಕ ಭರ್ಜರಿ ಮನರಂಜನಾತ್ಮಕ ಕಥೆಯೊಂದಿಗೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಚಯನ್ ಶೆಟ್ಟಿ ತಯಾರಾಗಿದ್ದಾರೆ. ‘ಶ್ರೀ ವಾರಾಹಿ ಫಿಲ್ಮ್ಸ್’ ಬ್ಯಾನರ್ ಮೂಲಕ ಸಂತೋಷ್ ವಿ. ಅವರು ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಮೂಲಕವೇ ಪ್ರೇಕ್ಷಕರನ್ನು ಸೆಳೆದುಕೊಳ್ಳಲಾಗಿದೆ.

‘ಮ್ಯಾರೇಜ್ ಪಾರ್ಟಿ’ ಸಿನಿಮಾವನ್ನು ಇದೇ ಡಿಸೆಂಬರ್ 4ರಂದು ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ವಿಶೇಷವೆಂದರೆ, ಈ ಸಿನಿಮಾ ಕನ್ನಡ ಮಾತ್ರವಲ್ಲದೇ ಮಲಯಾಳಂ ಭಾಷೆಯಲ್ಲೂ ರಿಲೀಸ್ ಆಗಲಿದೆ. ಮೊದಲ ಸಿನಿಮಾದಲ್ಲಿ ಗಹನವಾದ ಕಥೆ ಹೇಳಿದ್ದ ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಮೂಲಕ ಕರಾವಳಿ ತೀರದಲ್ಲಿ ಘಟಿಸುವ ಹಾಸ್ಯಪ್ರಧಾನ ಕಥೆಯನ್ನು ಜನರಿಗೆ ತೋರಿಸಲಿದ್ದಾರೆ.

ಕಥೆಗೆ ತಕ್ಕಂತೆಯೇ ಕರಾವಳಿ ತೀರದ ಸುಂದರ ತಾಣಗಳಲ್ಲಿ ವೇಗವಾಗಿ ಚಿತ್ರೀಕರಣ ಮುಗಿಸಲಾಗಿದೆ. ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ 4ರಂದು ಸಿನಿಮಾವನ್ನು ಬಿಡುಗಡೆ ಮಾಡುವ ಬಗ್ಗೆ ಸುದ್ದಿ ಹಂಚಿಕೊಂಡಿರುವ ಚಿತ್ರತಂಡದವರು ದಸರಾ ಹಬ್ಬದ ಸಂದರ್ಭದಲ್ಲಿ ಮೊದಲ ಹಾಡನ್ನು ಬಿಡುಗಡೆ ಮಾಡಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: ಕರಾವಳಿ ಕಥೆಯ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡು

ಪ್ರಕಾಶ್ ತುಮಿನಾಡು, ದೀಪಕ್ ರೈ, ನವೀನ್ ಡಿ. ಪಡೀಲ್, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ರಘು ಪಾಂಡೇಶ್ವರ, ಜ್ಯೋತಿಷ್ ಶೆಟ್ಟಿ, ಪುಷ್ಪರಾಜ್ ಬೋಳಾರ್, ರಾಧಾಕೃಷ್ಣ, ಭೀಮ್ ರಾವ್, ಪಿಡಿ ಸತೀಶ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಪಕ್ಕಾ ಫ್ಯಾಮಿಲಿ ಪ್ಯಾಕೇಜ್ ಇರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಶ್ರೀಕಾಂತ್ ಅವರ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಅವರ ಸಂಗೀತ, ನಿತಿನ್ ಶೆಟ್ಟಿ ಅವರ ಸಂಕಲನ ಈ ಚಿತ್ರಕ್ಕಿದೆ. ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ಅವರು ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:14 pm, Fri, 25 September 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us