ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ. ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು […]

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್
Follow us
ಸಾಧು ಶ್ರೀನಾಥ್​
|

Updated on: Dec 15, 2019 | 4:31 PM

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ.

ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು ಹಣ ಮತ್ತು ಒಡವೆ ಕೊಟ್ಟಿದ್ದಾರೆ. ಅದನ್ನ ನಾನು ವಾಪಸ್ ಸಹ ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ದಾಖಲೆ ಸಹ ಇದೆ ಎಂದಿದ್ದಾರೆ.

ಅಲ್ಲದೆ, ಅಭಿಲಾಷ್ ವಿರುದ್ಧ ಕಿಡ್ನಾಪ್, ಕೊಲೆಗೆ ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ರೆ ಈಗ ನನ್ನ ವಿರುದ್ಧ ಯಾಕೆ ಸುಳ್ಳು ದೂರು ದಾಖಲಿಸಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಖಾಸಗಿ ವಿಚಾರದ ಪ್ರಯುಕ್ತ ಬೇರೆ ಕಡೆ ಇದ್ದೇನೆ, ಬಂದ ಕೂಡಲೇ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಾತ್ಮಕವಾಗಿ ನನಗೆ ಶಿಕ್ಷೆಯಾಗಲಿ ಎಂದು ನಿರ್ದೇಶಕ ಪ್ರಶಾಂತ್ ರಾಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್