AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ

Chetan Ahimsa: ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ ಒತ್ತಾಯಿಸಿದ್ದರು. ಕೊನೆಗೆ ಅಣ್ಣಾವ್ರ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು ನಟ ಚೇತನ್ ಅಹಿಂಸ ಕ್ಷಮಾಪಣೆ ಕೇಳಿದ್ದಾರೆ.

ರಾಜ್​ಕುಮಾರ್ ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ, ಕ್ಷಮೆ ಯಾಚನೆ
Chetan Raj
ಮಂಜುನಾಥ ಸಿ.
|

Updated on: Apr 25, 2026 | 7:33 PM

Share

ಡಾ ರಾಜ್​ಕುಮಾರ್ (Rajkumar) ಅವರ ಸಮಾಧಿಗೆ 2.50 ಎಕರೆ ಸ್ಥಳ ನೀಡಿರುವ ಸರ್ಕಾರದ ನಿರ್ಧಾರವನ್ನು ಟೀಕೆ ಮಾಡಿ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಹಾಕಿದ್ದ ಪೋಸ್ಟ್​​ಗೆ ರಾಜ್​ಕುಮಾರ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು (ಏಪ್ರಿಲ್ 25) ಹಲವಾರು ಕಡೆ ರಾಜ್​ಕುಮಾರ್ ಅಭಿಮಾನಿಗಳು ನಟ ಚೇತನ್ ಅಹಿಂಸ ವಿರುದ್ಧ ದೂರುಗಳನ್ನು ದಾಖಲಿಸಿದ್ದರು. ಸಾರಾ ಗೋವಿಂದು ಸೇರಿದಂತೆ ಇನ್ನೂ ಕೆಲವು ಹಿರಿಯರು ಚೇತನ್ ಅಹಿಂಸ ವಿರುದ್ಧ ಕಟು ವಾಗ್ದಾಳಿ ಮಾಡಿದ್ದರ ಜೊತೆಗೆ ಚೇತನ್ ಅವರ ಗಡಿಪಾರಿಗೆ ಒತ್ತಾಯಿಸಿದ್ದರು. ಕೊನೆಗೆ ಅಣ್ಣಾವ್ರ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು ನಟ ಚೇತನ್ ಅಹಿಂಸ ಕ್ಷಮಾಪಣೆ ಕೇಳಿದ್ದಾರೆ.

ಇಂದು ಸಂಜೆ ವೇಳೆಗೆ ಸಾರಾ ಗೋವಿಂದು, ಕರವೇ ಕಾರ್ಯಕರ್ತರು, ಇನ್ನೂ ಕೆಲವು ಕನ್ನಡ ಪರ ಸಂಘಟನೆ ಕಾರ್ಯಕರ್ತರು, ರಾಜ್​ಕುಮಾರ್ ಅಭಿಮಾನಿ ಸಂಘದ ಸದಸ್ಯರು ರಾಜ್​ಕುಮಾರ್ ಅಭಿಮಾನಿಗಳು ಚೇತನ್ ಅಹಿಂಸ ಮನೆಗೆ ಮುತ್ತಿಗೆ ಹಾಕಿದರು. ಚೇತನ್ ಅಹಿಂಸ ಮನೆ ಎದುರು ಘೋಷಣೆಗಳನ್ನು ಕೂಗಿದರು. ಕೊನೆಗೆ ಚೇತನ್ ಅಹಿಂಸ ಜೊತೆಗೆ ಹಲವು ಸಂಘಟನೆಗಳ ಮುಖಂಡರು ಮಾತನಾಡಿ, ತಮ್ಮ ಆಕ್ರೋಶ, ಅಸಾಮಾಧಾನವನ್ನು ವ್ಯಕ್ತಪಡಿಸಿದರು. ಅಭಿಮಾನಿಗಳ ಆಕ್ರೋಶಕ್ಕೆ ಮಣಿದ ಚೇತನ್ ಅಹಿಂಸ ಬೇಷರತ್ ಕ್ಷಮೆ ಕೇಳಿದ್ದಾರೆ.

‘ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ, ಕ್ಷಮೆ ಯಾಚನೆಯನ್ನೂ ಮಾಡುತ್ತೇನೆ. ಯಾರ ಮನಸ್ಸನ್ನೂ ನೋಯಿಸುವುದು ನನ್ನ ಉದ್ದೇಶ ಅಲ್ಲ. ನಾನೂ ಸಹ ರಾಜ್​ಕುಮಾರ್ ಅವರ ಅಭಿಮಾನಿ. ಸಮಾಜದ ಜಾಗೃತಿ ಆಗಬೇಕು, ಒಂದು ಉತ್ತಮ ಪ್ರಜಾಪ್ರಭುತ್ವ ಕಟ್ಟಬೇಕು. ರಾಜ್​​ಕುಮಾರ್ ಅವರ ಕನಸಿನ ಚಿತ್ರರಂಗವನ್ನು ಕಟ್ಟಬೇಕು ಎಂಬುದು ನನ್ನ ಉದ್ದೇಶ ಕೂಡ’ ಎಂದಿದ್ದಾರೆ.

ನಿನ್ನೆ (ಏಪ್ರಿಲ್ 24) ಪೋಸ್ಟ್ ಹಂಚಿಕೊಂಡಿದ್ದ ನಟ ಚೇತನ್ ಅಹಿಂಸ, ‘ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ “ಸಮಾಧಿ ಕಾಂಪ್ಲೆಕ್ಸ್”ಕ್ಕಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳುವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರವು ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು; ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದಿದ್ದರು. ಅವರ ಈ ಪೋಸ್ಟ್​​ಗೆ ಭಾರಿ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ:ರಾಜ್​ಕುಮಾರ್ ಸಮಾಧಿ ಜಾಗ: ಚೇತನ್ ಪ್ರಶ್ನೆಗೆ ಅಭಿಮಾನಿಗಳ ಆಕ್ರೋಶ

ಕನ್ನಡಪರ ಸಂಘಟನೆಗಳವರು, ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ, ‘ಕರ್ನಾಟಕ ಸಾಂಸ್ಕೃತಿಕ ರಾಯಭಾರಿಗೆ, ಕಲಾ ಚೇತನ ರಾಜ್​ಕುಮಾರ್ ಅವರಿಗೆ ಸರ್ಕಾರ ಗೌರವ ನೀಡುವ ಉದ್ದೇಶದಿಂದ ಸ್ಮಾರಕಕ್ಕಾಗಿ ಜಾಗ ನೀಡಿದೆ. ಅದನ್ನು ರಾಜ್​ಕುಮಾರ್ ಆಗಲಿ, ಅವರ ಕುಟುಂಬದವರಾಗಲಿ ಕೇಳಿ ಪಡೆದಿದ್ದಲ್ಲ. ಅಲ್ಲದೆ, ಈ ಘಟನೆಗಳು ನಡೆದು 20 ವರ್ಷಗಳಾಗಿವೆ. ಆದರೆ ಈಗ ಕೇವಲ ಪ್ರಚಾರಕ್ಕಾಗಿ ಚೇತನ್, ರಾಜ್​ಕುಮಾರ್ ಅವರ ಸ್ಮಾರಕದ ವಿಷಯ ಎತ್ತಿದ್ದಾರೆ’ ಎಂದು ಆರೋಪಿಸಿದ್ದರು.

ಚೇತನ್ ಅವರ ಗಡಿಪಾರು ಮಾಡುವ ಬಗ್ಗೆ, ಚೇತನ್ ವಿರುದ್ಧ ಶಾಂತಿ ಕದಡುವ ಯತ್ನ ಆರೋಪದಡಿಯಲ್ಲಿ ಪ್ರಕರಣ ದಾಖಲಿಸುವ ಬಗ್ಗೆ ಒತ್ತಾಯಗಳು ಕೇಳಿ ಬಂದಿದ್ದವು. ಸಾರಾ ಗೋವಿಂದು ಹಾಗು ಕೆಲವರು ಚೇತನ್ ಈ ಬಾರಿ ಅಭಿಮಾನಿಗಳಿಂದ ಒದೆ ತಿನ್ನಲಿದ್ದಾನೆ ಎಂದು ಕಟುವಾಗಿ ಬೆದರಿಕೆ ಸಹ ಹಾಕಿದ್ದರು. ಆದರೆ ಕೊನೆಗೆ ಚೇತನ್ ಕ್ಷಮೆ ಕೇಳುವ ಮೂಲಕ ಪ್ರಕರಣವನ್ನು ಅಂತ್ಯಗೊಳಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?