ಕನ್ನಡ ಚಿತ್ರರಂಗದ ಮೇರು ನಟರ ಸ್ಮಾರಕಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಚರ್ಚೆ ನಡೆದಿದೆ. ಒಂದಷ್ಟು ವಿವಾದಗಳೂ ಆಗಿದ್ದುಂಟು. ವಿಷ್ಣುವರ್ಧನ್ ಅವರ ಸ್ಮಾರಕ (Vishnuvardhan Memorial) ಮೈಸೂರಿನಲ್ಲಿ ನಿರ್ಮಾಣ ಆಗಿದ್ದು, ನಿನ್ನೆಯಷ್ಟೇ (ಜ.29) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅದನ್ನು ಅನಾವರಣಗೊಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕ ಈಗ ಒಂದು ಆಕರ್ಷಕ ಸ್ಥಳವಾಗಿದೆ. ಅದರ ಬೆನ್ನಲ್ಲೇ ನಟ ‘ಆ ದಿನಗಳು’ ಚೇತನ್ (Chetan Ahimsa) ಅವರು ಹೊಸ ವಾದ ಮುಂದಿಟ್ಟಿದ್ದಾರೆ. ‘ಚಲನಚಿತ್ರ ಸ್ಟಾರ್ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು’ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
‘ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್ಗಳು ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತು ಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ’ ಎಂದು ಚೇತನ್ ಪೋಸ್ಟ್ ಮಾಡಿದ್ದಾರೆ.
Land, money & resources of KA public must not be used for film star memorials
Film stars—who work/earn like so many Kannadigas—already get undue hype in society & undue credit for success of films
Museums showcasing KA art/literature/culture wud be better use of #memorial lands
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) January 30, 2023
‘ಇಡೀ ಭಾರತ ದೇಶವು ಕೊವಿಡ್ ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿದ್ದಾಗ ಗೌತಮ್ ಅದಾನಿಯವರು ಏಷ್ಯಾದ ಅತೀ ಶ್ರೀಮಂತ ಪಟ್ಟಿಯಲ್ಲಿರುತ್ತಾರೆ. ಈಗ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಗೌತಮ್ ಅದಾನಿಯವರ ವಂಚನೆಯನ್ನು ಬಯಲಿಗೆಳೆದಿದೆ. ತನ್ನ ಮೇಲಿನ ಆರೋಪವನ್ನು ‘ಭಾರತದ ಮೇಲಿನ ದಾಳಿ’ ಎಂದು ಅವರು ದುರಹಂಕಾರದಿಂದ ಹೇಳಿಕೊಂಡು ವಂಚನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿಯವರು ಭಾರತವನ್ನು ಕೆಟ್ಟ ರೀತಿಯಲ್ಲಿ ಪ್ರತಿನಿಧಿಸುತ್ತಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಟ ಚೇತನ್ ಅವರು ತಮ್ಮ ಸಿದ್ಧಾಂತಗಳ ಕಾರಣದಿಂದ ಆಗಾಗ ಸುದ್ದಿ ಆಗುತ್ತಿದ್ದಾರೆ. ಅವರ ಮಾತುಗಳಿಗೆ ಪರ-ವಿರೋಧ ವ್ಯಕ್ತವಾಗುತ್ತದೆ. ಈ ಬಾರಿ ಕೂಡ ಅವರು ಮುಂದಿವರಿದಿದೆ. ಕಮೆಂಟ್ಗಳ ಮೂಲಕ ಕೆಲವರು ಚೇತನ್ ಅವರ ಮಾತನ್ನು ಬೆಂಬಲಿಸುತ್ತಿದಾರೆ. ಅದೇ ರೀತಿ ವಿರೋಧ ಕೂಡ ವ್ಯಕ್ತವಾಗುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:01 pm, Mon, 30 January 23