‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿಕೆಶಿ’; ಕಾರಣ ತಿಳಿಸಿ ವಿವರಿಸಿದ ನಟ ಚೇತನ್  

Chetan Kumar: ಚೇತನ್ ಕುಮಾರ್ ಅವರು ಅವರು ಎಂದಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ನಿಲ್ಲಿಸಿಲ್ಲ. ಸಿಎಂ ಯಾರಾಗಬೇಕು ಎನ್ನುವ ವಿಚಾರದಲ್ಲೂ ಅವರು ಅಭಿಪ್ರಾಯ ತಿಳಿಸಿದ್ದಾರೆ.

‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿಕೆಶಿ’; ಕಾರಣ ತಿಳಿಸಿ ವಿವರಿಸಿದ ನಟ ಚೇತನ್  
Follow us
ರಾಜೇಶ್ ದುಗ್ಗುಮನೆ
|

Updated on:May 15, 2023 | 8:36 AM

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸುತ್ತಿದೆ. ರಾಜ್ಯದ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆ ಜನತೆಯಲ್ಲಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಸಿಎಂ ಸ್ಥಾನ ಸಿಗಲಿದೆ. ಇಬ್ಬರೂ ಪಕ್ಷದ ಏಳ್ಗೆಗಾಗಿ ಶ್ರಮಿಸಿದವರು. ಹೀಗಾಗಿ, ಯಾರು ಸಿಎಂ ಆಗಬೇಕು ಎಂದು ತೀರ್ಮಾನ ತೆಗೆದುಕೊಳ್ಳುವುದು ಕಷ್ಟವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಜನರು ಈ ವಿಚಾರದಲ್ಲಿ ಒಂದೊಂದು ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಮಧ್ಯೆ ನಟ ಚೇತನ್ ಕುಮಾರ್ ಅಹಿಂಸಾ (Chetan Kumar Ahimsa) ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಯಾರು ಸಿಎಂ ಆದರೆ ಉತ್ತಮ ಎಂಬುದನ್ನು ಅವರು ಹೇಳಿದ್ದಾರೆ.

ಚೇತನ್ ಕುಮಾರ್ ಅವರು ಅನೇಕ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಹಲವು ವಿಚಾರಗಳ ಬಗ್ಗೆ ಅವರು ನೇರ ಮಾತುಗಳಲ್ಲಿ ಹೇಳುತ್ತಾರೆ. ಕೆಲವೊಮ್ಮೆ ಅವರು ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದೂ ಇದೆ. ಆದರೆ, ಅವರು ಎಂದಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ನಿಲ್ಲಿಸಿಲ್ಲ. ಸಿಎಂ ಯಾರಾಗಬೇಕು ಎನ್ನುವ ವಿಚಾರದಲ್ಲೂ ಅವರು ಅಭಿಪ್ರಾಯ ತಿಳಿಸಿದ್ದಾರೆ.

‘ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಕರ್ನಾಟಕದ ಜನತೆಗೆ ಉತ್ತಮ ಸಿಎಂ ಯಾರು? ನಮ್ಮ ಜನರ ಜೀವನವನ್ನು ಸುಧಾರಿಸುವ ದೃಷ್ಟಿಯಿಂದ ಸಿದ್ದರಾಮಯ್ಯ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅವನತಿ ವಿಚಾರದಲ್ಲಿ ಡಿಕೆ ಶಿವಕುಮಾರ್. ಆದ್ದರಿಂದ, ಅಲ್ಪಾವಧಿಗೆ ಸಿದ್ದರಾಮಯ್ಯ ಕರ್ನಾಟಕಕ್ಕೆ ಉತ್ತಮ. ದೀರ್ಘಾವಧಿಗೆ ಡಿಕೆ ಶಿವಕುಮಾರ್ ಕರ್ನಾಟಕಕ್ಕೆ ಉತ್ತಮ’ ಎಂದು ಅವರು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗಬೇಕು: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬೇಡಿಕೆ

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಕಾಂಗ್ರೆಸ್​ ಪ್ರಾಬಲ್ಯ ಕಡಿಮೆ ಆಗಿತ್ತು. ಈಗ ನಿಧಾನವಾಗಿ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಹೀಗಾಗಿ, ಪಕ್ಷ ಕಟ್ಟಿ ಬೆಳೆಸಲು ಡಿಕೆಶಿ ಬೇಕು, ಜನರ ದೃಷ್ಟಿಯಿಂದ ಸಿದ್ದರಾಮಯ್ಯ ಬೇಕು ಎಂಬುದು ಅವರ ಟ್ವೀಟ್​ನ ಸಾರಾಂಶ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Mon, 15 May 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ