ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸುತ್ತಿದೆ. ರಾಜ್ಯದ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆ ಜನತೆಯಲ್ಲಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಸಿಎಂ ಸ್ಥಾನ ಸಿಗಲಿದೆ. ಇಬ್ಬರೂ ಪಕ್ಷದ ಏಳ್ಗೆಗಾಗಿ ಶ್ರಮಿಸಿದವರು. ಹೀಗಾಗಿ, ಯಾರು ಸಿಎಂ ಆಗಬೇಕು ಎಂದು ತೀರ್ಮಾನ ತೆಗೆದುಕೊಳ್ಳುವುದು ಕಷ್ಟವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಜನರು ಈ ವಿಚಾರದಲ್ಲಿ ಒಂದೊಂದು ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಮಧ್ಯೆ ನಟ ಚೇತನ್ ಕುಮಾರ್ ಅಹಿಂಸಾ (Chetan Kumar Ahimsa) ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಯಾರು ಸಿಎಂ ಆದರೆ ಉತ್ತಮ ಎಂಬುದನ್ನು ಅವರು ಹೇಳಿದ್ದಾರೆ.
ಚೇತನ್ ಕುಮಾರ್ ಅವರು ಅನೇಕ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಹಲವು ವಿಚಾರಗಳ ಬಗ್ಗೆ ಅವರು ನೇರ ಮಾತುಗಳಲ್ಲಿ ಹೇಳುತ್ತಾರೆ. ಕೆಲವೊಮ್ಮೆ ಅವರು ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದೂ ಇದೆ. ಆದರೆ, ಅವರು ಎಂದಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ನಿಲ್ಲಿಸಿಲ್ಲ. ಸಿಎಂ ಯಾರಾಗಬೇಕು ಎನ್ನುವ ವಿಚಾರದಲ್ಲೂ ಅವರು ಅಭಿಪ್ರಾಯ ತಿಳಿಸಿದ್ದಾರೆ.
‘ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಕರ್ನಾಟಕದ ಜನತೆಗೆ ಉತ್ತಮ ಸಿಎಂ ಯಾರು? ನಮ್ಮ ಜನರ ಜೀವನವನ್ನು ಸುಧಾರಿಸುವ ದೃಷ್ಟಿಯಿಂದ ಸಿದ್ದರಾಮಯ್ಯ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅವನತಿ ವಿಚಾರದಲ್ಲಿ ಡಿಕೆ ಶಿವಕುಮಾರ್. ಆದ್ದರಿಂದ, ಅಲ್ಪಾವಧಿಗೆ ಸಿದ್ದರಾಮಯ್ಯ ಕರ್ನಾಟಕಕ್ಕೆ ಉತ್ತಮ. ದೀರ್ಘಾವಧಿಗೆ ಡಿಕೆ ಶಿವಕುಮಾರ್ ಕರ್ನಾಟಕಕ್ಕೆ ಉತ್ತಮ’ ಎಂದು ಅವರು ಅಭಿಪ್ರಾಯ ತಿಳಿಸಿದ್ದಾರೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗಬೇಕು: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬೇಡಿಕೆ
Who is a better CM for Karnataka between Siddaramaiah & DK Shivakumar?
In terms of improving the lives of our people: Siddaramaiah
In terms of digging the grave of the Congress party: DKS
Hence:
Siddaramaiah is better for KA short-term
DKS is better for KA long-term
🙂
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) May 15, 2023
ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಕಾಂಗ್ರೆಸ್ ಪ್ರಾಬಲ್ಯ ಕಡಿಮೆ ಆಗಿತ್ತು. ಈಗ ನಿಧಾನವಾಗಿ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಹೀಗಾಗಿ, ಪಕ್ಷ ಕಟ್ಟಿ ಬೆಳೆಸಲು ಡಿಕೆಶಿ ಬೇಕು, ಜನರ ದೃಷ್ಟಿಯಿಂದ ಸಿದ್ದರಾಮಯ್ಯ ಬೇಕು ಎಂಬುದು ಅವರ ಟ್ವೀಟ್ನ ಸಾರಾಂಶ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:25 am, Mon, 15 May 23