AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ; ನೈಜ ಘಟನೆ ಆಧಾರಿತ ಕಾಲ್ಪನಿಕ ಕಥೆ ಹೇಳ ಹೊರಟ ಹರ್ಷಿಕಾ

ಹರ್ಷಿಕಾ ಪೂಣಚ್ಚ ಅವರು ನಿರ್ದೇಶಿಸುತ್ತಿರುವ ಹೊಸ ಚಿತ್ರ 'ಚಿ: ಸೌಜನ್ಯ' ದ ಘೋಷಣೆಯು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಈ ಕಾಲ್ಪನಿಕ ಕಥೆಯು ಒಂದು ಹೆಣ್ಣಿನ ಕಷ್ಟದ ಕಥೆಯನ್ನು ಹೇಳಲಿದೆ. ಪೋಸ್ಟರ್‌ನಲ್ಲಿರುವ ಚಿತ್ರವು ಈ ಕಥೆಯ ತೀವ್ರತೆಯನ್ನು ಚಿತ್ರಿಸುತ್ತದೆ.

ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ; ನೈಜ ಘಟನೆ ಆಧಾರಿತ  ಕಾಲ್ಪನಿಕ ಕಥೆ ಹೇಳ ಹೊರಟ ಹರ್ಷಿಕಾ
ಹರ್ಷಿಕಾ
ರಾಜೇಶ್ ದುಗ್ಗುಮನೆ
|

Updated on:Mar 20, 2025 | 2:31 PM

Share

ಸಿನಿಮಾ ರಂಗದಲ್ಲಿ ನಾಯಕಿ ಆಗಿ ಮಿಂಚಿರೋ ಹರ್ಷಿಕಾ ಪೂಣಚ್ಚ (Harshika Poonacha) ಅವರು ಈಗ ನಿರ್ದೇಶನಕ್ಕೆ ಇಳಿದಿದ್ದಾರೆ. ಹೌದು, ಅವರು ಈಗ ಹೊಸ ಸಿನಿಮಾ ಒಂದನ್ನು ಘೋಷಣೆ ಮಾಡಿದ್ದಾರೆ. ಅದಕ್ಕೆ ‘ಚಿ: ಸೌಜನ್ಯ’ ಎನ್ನುವ ಟೈಟಲ್ ಇಟ್ಟಿದ್ದಾರೆ. ಟೈಟಲ್ ಪೋಸ್ಟರ್ ರಿಲೀಸ್ ಆಗಿದ್ದು, ‘ಒಂದು ಹೆಣ್ಣಿನ ಕಥೆ’ ಎನ್ನುವ ಟ್ಯಾಗ್​ಲೈನ್ ಕೊಡಲಾಗಿದೆ. ಸದ್ಯ ಈ ಪೋಸ್ಟರ್ ಸಾಕಷ್ಟು ಸಂಚಲನ ಮೂಡಿಸಿದೆ. ಸ್ಯಾಂಡಲ್​ವುಡ್ ಅಂಗಳದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿವೆ. ಹರ್ಷಿಕಾ ಹೊಸ ಪ್ರಯತ್ನಕ್ಕೆ ಎಲ್ಲರೂ ಆಲ್​ ದಿ ಬೆಸ್ಟ್ ಹೇಳಿದ್ದಾರೆ.

ಸೌಜನ್ಯ ಪ್ರಕರಣದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಹೀಗಿರುವಾಗಲೇ ಹರ್ಷಿಕಾ ಅವರು ‘ಚಿ: ಸೌಜನ್ಯ’ ಸಿನಿಮಾ ಟೈಟಲ್ ಅನೌನ್ಸ್ ಮಾಡಿರೋದು ಕುತೂಹಲ ಮೂಡಿಸಿದೆ. ಇದು ನೈಜ ಘಟನೆ ಆಧಾರಿತ ಕಾಲ್ಪನಿಕ ಕಥೆ ಎಂದು ಹರ್ಷಿಕಾ ಸ್ಪಷ್ಟವಾಗಿ ಹೇಳಿದ್ದಾರೆ.

ಇದನ್ನೂ ಓದಿ
Image
ಗುರು ಕಿರಣ್ ದುಡ್ಡು ಕೊಟ್ಟರೂ ಸಿನಿಮಾ ಮಾಡಲ್ಲಾ; ಕಾರಣವೇನು?
Image
ಶಾರುಖ್ ಖಾನ್-ಸುಕುಮಾರ್ ಸಿನಿಮಾ ಮಾಡೋ ಸುದ್ದಿ ಶುದ್ಧ ಸುಳ್ಳು
Image
ಪ್ರಶಾಂತ್ ನೀಲ್ ನಿರ್ದೇಶನದ ಹಿಟ್ ಚಿತ್ರ ರೀ-ರಿಲೀಸ್; ದಾಖಲೆ ಗಳಿಕೆ
Image
ತನ್ನದೇ ಹೆಸರನ್ನು ತಪ್ಪಾಗಿ ಕರೆದುಕೊಂಡು ರಣಬೀರ್; ಆಮಿರ್ ರಿಯಾಕ್ಷನ್ ನೋಡಿ

‘ಚಿ: ಸೌಜನ್ಯ’ ಸಿನಿಮಾದ ಪೋಸ್ಟರ್ ಗಮನ ಸೆಳೆದಿದೆ. ಇದರಲ್ಲಿ ಬಾಲಕಿಯೊಬ್ಬಳು ಭಯದಿಂದ ಕೂಗುತ್ತಾ ನಿಂತಿದ್ದಾಳೆ. ಆಕೆಯ ಮುಖದ ಮೇಲೆ ಉಗುರಿನಿಂದ ಆದ ಗಾಯಗಳು ಇವೆ. ಅವಳ ಹಿಂದೆ ಒಂದಷ್ಟು ಪುರುಷರು ದಾಳಿಗೆ ರೆಡಿ ಆದವರಂತೆ ನಿಂತಿದ್ದಾರೆ. ದೇವಸ್ಥಾನದ ಕಳಶ ಇದೆ. ಒಂದಷ್ಟು ಮಂದಿ ತುಟಿಯ ಮೇಲೆ ಕೈ ಬೆರಳು ಇಟ್ಟು ಸುಮ್ಮನಿರುವಂತೆ ತೋರಿಸುತ್ತಿದ್ದಾರೆ.

‘ಚಿ: ಸೌಜನ್ಯ’ ಸಿನಿಮಾ ಟೈಟಲ್ ಕೆಳಭಾಗದಲ್ಲಿ ‘ಒಂದು ಹೆಣ್ಣಿನ ಕಥೆ’ ಟ್ಯಾಗ್ ಲೈನ್ ನೀಡಲಾಗಿದೆ. ‘ದೇಶದಲ್ಲಿ ನಡೆದ ಎಲ್ಲಾ ಘಟನೆಗಳನ್ನು ಸ್ಫೂರ್ತಿಯಾಗಿಟ್ಟುಕೊಂಡು ಮಾಡಲಾಗುತ್ತಿರುವ ಕಾಲ್ಪನಿಕ ಕಥೆ’ ಎಂದು ಪೋಸ್ಟರ್​ನಲ್ಲಿ ಹೇಳಲಾಗಿದೆ. ಸದ್ಯ ಸ್ಕ್ರಿಪ್ಟ್ ಕೆಲಸ ಪೂರ್ಣಗೊಂಡಿದ್ದು, ಮುಂದಿನ ತಿಂಗಳಿಂದ ಶೂಟಿಂಗ್ ನಡೆಯಲಿದೆ. ಪ್ರಮುಖ ಪಾತ್ರದಲ್ಲಿ ಕಿಶೋರ್ ಕಾಣಿಸಿಕೊಳ್ಳಲಿದ್ದಾರೆ. ವಿಲನ್ ಪಾತ್ರಗಳಲ್ಲಿ ಉಗ್ರಂ ಮಂಜು, ಕಾಕ್ರೊಚ್ ಸುದೀ ಮತ್ತಿತರರು ಕಾಣಿಸಿಕೊಳ್ಳಲಿದ್ದಾರೆ. ಭುವನ್ ಪೊನ್ನಣ್ಣ , ಮಧು ಕಂಸಾಳೆ ಫಿಲಂಸ್ ಬ್ಯಾನರ್ ಹಾಗು ಗಣೇಶ್ ಮಹಾದೇವ್ ಅವರ ನೇತೃತ್ವದಲ್ಲಿ ನಿರ್ಮಿಸಲ್ಪಡುತ್ತಿದೆ. ಸ

ಇದನ್ನೂ ಓದಿ: ಕುಟುಂಬದೊಟ್ಟಿಗೆ ಕೊಲ್ಲೂರಿಗೆ ಬಂದು ಹರಕೆ ತೀರಿಸಿದ ನಟಿ ಹರ್ಷಿಕಾ ಪೂಣಚ್ಚ-ಭುವನ್

ಹರ್ಷಿಕಾ ಬಾಳಲ್ಲಿ ಇತ್ತೀಚೆಗೆ ಸಾಕಷ್ಟು ಖುಷಿಯ ವಿಚಾರಗಳು ನಡೆದಿವೆ. 2023ರಲ್ಲಿ ಇವರು ಭುವನ್ ಪೊನ್ನಣ್ಣ ಅವರನ್ನು ಮದುವೆ ಆದರು. ಆ ಬಳಿಕ ಅವರಿಗೆ ಮಗು ಜನಿಸಿದೆ. ಈಗ ಅವರು ನಿರ್ದೇಶನಕ್ಕೆ ಇಳಿಯುವ ಘೋಷಣೆ ಮಾಡಿದ್ದಾರೆ. ಈ ಮೂಲಕ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:37 pm, Thu, 20 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ