Jayanthi Death: ‘ನನ್ನಿಷ್ಟದ ನಟಿಯ ನಿಧನ ಅತೀವ ದುಃಖ ತಂದಿದೆ’-ಸಂತಾಪ ಸೂಚಿಸಿ ಟ್ವೀಟ್ ಮಾಡಿದ ಸಿದ್ದರಾಮಯ್ಯ
Jayanti Obituary: ಶಾಸಕ ರೇಣುಕಾಚಾರ್ಯ ನೋವು ವ್ಯಕ್ತಪಡಿಸಿದ್ದು, ಜಯಂತಿಯವರ ಅಗಲಿಕೆಯಿಂದ ಕೇವಲ ಚಿತ್ರರಂಗಕ್ಕೆ ಅಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದಿದ್ದಾರೆ.
ಹಿರಿಯ ನಟಿ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ನಟಿ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಬಿ.ಎಸ್.ಯಡಿಯೂರಪ್ಪ, ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce
— B.S. Yediyurappa (@BSYBJP) July 26, 2021
ಹಾಗೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವೂ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ನನ್ನ ಇಷ್ಟದ ನಟಿ ಮತ್ತು ಅಭಿಜಾತ ಪ್ರತಿಭೆ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು ಎಂದಿದ್ದಾರೆ.
ಹಾಗೇ ಶಾಸಕ ರೇಣುಕಾಚಾರ್ಯ ನೋವು ವ್ಯಕ್ತಪಡಿಸಿದ್ದು, ಜಯಂತಿಯವರ ಅಗಲಿಕೆಯಿಂದ ಕೇವಲ ಚಿತ್ರರಂಗಕ್ಕೆ ಅಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅನ್ಯಾಯವಾಗಿದೆ. ಅವರು ಕಿರಿಯ ನಟಿಯರಿಗೆ ಮಾರ್ಗದರ್ಶಕರಾಗಿದ್ದರು. ಜಯಂತಿ ಸಾವಿನ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ಕೊಡಲಿ ಎಂದಿದ್ದಾರೆ.
ಇದನ್ನೂ ಓದಿ: Jayanthi Death: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ
Published On - 9:55 am, Mon, 26 July 21