ಉತ್ತರ ಭಾರತದಲ್ಲಿ ಲ್ಯಾಂಡ್ ಮಾಫಿಯಾಗಳು ಭೂ ಕಬಳಿಕೆ ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಇದನ್ನು ನಿಯಂತ್ರಣ ಮಾಡಲು ಪೊಲೀಸರಿಂದಲೂ ಸಾಧ್ಯವಾಗಿರಲಿಲ್ಲ. ಈ ವೇಳೆ ನಡೆದ ಘಟನೆ ಇಟ್ಟುಕೊಂಡು ‘ದಬಂಗ್ 3’ ಚಿತ್ರ ಸಿದ್ಧಗೊಂಡಿದೆ. ಅಚ್ಚರಿಯ ವಿಚಾರ ಏನೆಂದರೆ, ಸುದೀಪ್ ಲ್ಯಾಂಡ್ ಮಾಫಿಯಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ತೆಲುಗಿನ ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದಲ್ಲಿ ಸುದೀಪ್ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಜನರು ತುಂಬಾನೇ ಮೆಚ್ಚಿಕೊಂಡಿದ್ದರು. ಈಗ ಅವರು ಮತ್ತೊಮ್ಮೆ ಇಂಥದ್ದೇ ಪಾತ್ರ ನಿರ್ವಹಿಸುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಹಾಗೂ ಸುದೀಪ್ ನಡುವೆ ಜಿದ್ದಾ ಜಿದ್ದಿ ಏರ್ಪಡಲಿದೆಯಂತೆ.
Published On - 11:35 am, Thu, 28 March 19