ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ
ಚಿಕ್ಕಣ್ಣ
Follow us
ರಾಜೇಶ್ ದುಗ್ಗುಮನೆ
|

Updated on: May 05, 2021 | 7:50 PM

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಮಿತಿಮೀರಿದೆ. ದೇಶದಲ್ಲಿ ನಿತ್ಯ ಮೂರುವರೆ ಲಕ್ಷಕ್ಕೂ  ಅಧಿಕ ಕೊವಿಡ್​ ಕೇಸ್​ಗಳು ವರದಿ ಆಗುತ್ತಿವೆ. ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾದಿಂದ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು, ಮನೆಯಲ್ಲೇ ಉಳಿದುಕೊಂಡಿದ್ದಾರೆ. ಈಗ ಚಿಕ್ಕಣ್ಣ ತಮ್ಮ ಫಾರ್ಮ್​ಹೌಸ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ, ಹೋಂ ಐಸೋಲೇಷನ್ನಲ್ಲಿರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ.

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ. ಕನ್ನಡದ ಬೇಡಿಕೆಯ ಹಾಸ್ಯ ನಟರಾಗಿ ಚಿಕ್ಕಣ್ಣ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆದರೆ, ಅವರು ತಮ್ಮ ಕೆಲಸವನ್ನು ಮರೆತಿಲ್ಲ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದೆ. ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿವೆ. ಈ ಕಾರಣಕ್ಕೆ ಚಿಕ್ಕಣ್ಣ ಫಾರ್ಮ್ ಹೌಸ್ ಸೇರಿದ್ದಾರೆ. ಅಲ್ಲದೆ, ಅಲ್ಲಿ ನಿರ್ಮಾಣ ಆಗುತ್ತಿರುವ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಹೋಂ ಐಸೋಲೇಷನ್​ ಆದರೆ ಅಂಥವರಿಗೆ ಹೊರಗೆ ಹೋಗುವ ಅವಕಾಶ ಇರುವುದಿಲ್ಲ. ಕೆಲವರು ಊಟಕ್ಕೂ ಪರದಾಡಿದ್ದಿದೆ. ಹೀಗಾಗಿ, ಸ್ಥಳೀಯವಾಗಿ ಹೋಂ ಐಸೋಲೇಷನ್‌ನಲ್ಲಿ ಇರೋ ಕೊರೊನಾ ಸೋಂಕಿತರಿಗೆ ತಾವೇ ಖುದ್ದು ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಚಿಕ್ಕಣ್ಣ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಊಟ ಹಂಚಿದರೆ ಇನ್ನೂ ಕೆಲವರು ಕೊರೊನಾ ರೋಗಿಗಳಿಗೆ ಬೆಡ್​ ಹಾಗೂ ಆಮ್ಲಜನಕ ಒದಗಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ