AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್

‘ಲಕ್ಷ್ಮಿಪುತ್ರ’ ಸಿನಿಮಾಗೆ ವಿಜಯ್ ಸ್ವಾಮಿ ನಿರ್ದೇಶನ ಮಾಡುತ್ತಿದ್ದಾರೆ. ಅನ್ನಪೂರ್ಣ ಅರ್ಜುನ್ ನಿರ್ಮಿಸುತ್ತಿದ್ದಾರೆ. ಕಾಶಿಯ ಹಲವು ಪ್ರಮುಖ ಸ್ಥಳಗಳಲ್ಲಿ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಮಾಡಲಾಗಿದೆ. ಆ ಬಗ್ಗೆ ಅಪ್​ಡೇಟ್ ಸಿಕ್ಕಿದೆ. ಚಿಕ್ಕಣ್ಣ ಜೊತೆ ತಾರಾ, ಧರ್ಮಣ್ಣ, ಕುರಿ ಪ್ರತಾಪ್, ವಂದಿತಾ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್
Lakshmiputra Movie TeamImage Credit source: Tv9 Kannada
ಮದನ್​ ಕುಮಾರ್​
|

Updated on: Feb 09, 2026 | 10:36 PM

Share

ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ‘ಲಕ್ಷ್ಮಿಪುತ್ರ’ (Lakshmiputra) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಎಪಿ ಅರ್ಜುನ್ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೇಕ ಹೊಸ ಹೀರೋಗಳ ಜೊತೆ ಕೆಲಸ ಮಾಡಿದ ಎ.ಪಿ. ಅರ್ಜುನ್ ಅವರು ಈಗ ಚಿಕ್ಕಣ್ಣ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಎಪಿ ಅರ್ಜುನ್ ಅವರೇ ಕಥೆ ಬರೆದಿದ್ದಾರೆ. ಅವರದ್ದೇ ಬ್ಯಾನರ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಚಿಕ್ಕಣ್ಣ (Chikkanna) ಜೊತೆ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ.

‘ಎಪಿ ಅರ್ಜುನ್ ಫಿಲ್ಮ್’ ಬ್ಯಾನರ್ ಮೂಲಕ ಎ.ಪಿ. ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಸಿನಿಮಾದ ಶೂಟಿಂಗ್ ಬಗ್ಗೆ ಹೊಸ ಅಪ್​ಡೇಟ್ ನೀಡಲಾಗಿದೆ. ‘ಲಕ್ಷ್ಮಿಪುತ್ರ’ ಸಿನಿಮಾಗೆ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣ ಕಾಶಿಯಲ್ಲಿ ಅದ್ದೂರಿಯಾಗಿ ನಡೆದಿದೆ.

ಮೂರು ದಿನಗಳ ಕಾಲ ನಡೆದ ಚಿತ್ರೀಕರಣದಲ್ಲಿ ನಾಯಕ ನಟ ಚಿಕ್ಕಣ್ಣ ಜೊತೆ ಹಿರಿಯ ನಟಿ ತಾರಾ ಕೂಡ ಭಾಗಿ ಆಗಿದ್ದಾರೆ. ಅವರ ಜೊತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಪಾಲ್ಗೊಂಡಿದ್ದಾರೆ. ಕಾಶಿಯ ಮಣಿಕರ್ಣಿಕಾ ಘಾಟ್, ಬನರಾಸ್, ಗಂಗಾ‌ನದಿ ತೀರ, ಕಾಶಿ ಪ್ರಮುಖ ಬೀದಿಗಳಲ್ಲಿ ಈ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ. ಆ ಮೂಲಕ ನಿರೀಕ್ಷೆ ಮೂಡಿಸಲಾಗಿದೆ.

ಇನ್ನು, ಈ ಸಿನಿಮಾಗೆ ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇದೆ. ಶೀಘ್ರದಲ್ಲೇ ಹಾಡುಗಳ ಚಿತ್ರೀಕರಣವನ್ನು ಚಿತ್ರತಂಡ ಕೈಗೆತ್ತಿಕೊಳ್ಳಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ‘ಲಕ್ಷ್ಮಿಪುತ್ರ’ ಸಿನಿಮಾವನ್ನು ಬಿಡುಗಡೆ ಮಾಡಬೇಕು ಎಂದು ಗುರಿ ಇಟ್ಟುಕೊಳ್ಳಲಾಗಿದೆ. ವಿಜಯ್ ಸ್ವಾಮಿ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಚಿಕ್ಕಣ್ಣ ಅವರಿಗೆ ವಂದಿತಾ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: ‘ಆ ಮಾತಿನಿಂದ ದರ್ಶನ್ ಮುಖಭಾವವೇ ಬದಲಾಗಿತ್ತು’; ಚಿಕ್ಕಣ್ಣ ಹೇಳಿಕೆಯಲ್ಲೇನಿದೆ?

‘ಲಕ್ಷ್ಮಿಪುತ್ರ’ ಸಿನಿಮಾಗೆ ಅರ್ಜುನ್ ಜನ್ಯ ಅವರು ಸಂಗೀತ ನೀಡಿದ್ದಾರೆ. ಎ.ಪಿ. ಅರ್ಜುನ್ ಅವರು ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಮಾಸ್ ಮಾದ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್. ಗೌಡ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ನೀಡುತ್ತಿದ್ದಾರೆ. ಧರ್ಮಣ್ಣ, ಕುರಿ ಪ್ರತಾಪ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ