Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ

‘ಡಬ್ಬಲ್ ಇಂಜಿನ್’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶಿಸಿದ ಚಂದ್ರ ಮೋಹನ್ ಹೊಸ ಸಿನಿಮಾ ನಿರ್ದೇಶಿಸುತ್ತಿದ್ದು, ‘ಫಾರೆಸ್ಟ್’ ಟೈಟಲ್ ಇಡಲಾಗಿದೆ. ಅಡ್ವೆಂಚರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ
ಫಾರೆಸ್ಟ್ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Apr 18, 2024 | 10:57 AM

‘ಡಬ್ಬಲ್ ಇಂಜಿನ್’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶಿಸಿದ ಚಂದ್ರ ಮೋಹನ್ ಅವರು ಈಗ ‘ಫಾರೆಸ್ಟ್’ (Forest Movie) ಹೆಸರಿನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಪ್ರಮುಖ ನಾಲ್ಕು ಕಲಾವಿದರು ಬಣ್ಣ ಹಚ್ಚುತ್ತಿದ್ದಾರೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆದಿದೆ.

ಚಂದ್ರ ಮೋಹನ್ ಅವರ ಈ ಚಿತ್ರಕ್ಕೆ ‘ಫಾರೆಸ್ಟ್’ ಎಂದು ಟೈಟಲ್ ಇಡೋಕೂ ಒಂದು ಕಾರಣ ಇದೆ. ಈ ಚಿತ್ರದ ಶೇ.80ರಷ್ಟು ಕಥೆ ಕಾಡಿನಲ್ಲೇ ಸಾಗಲಿದೆ. ಅಡ್ವೆಂಚರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಪೋಸ್ಟರ್​ನಲ್ಲಿ ಇವರು ದೊಡ್ಡ ಚೀಲದ ಗಂಟನ್ನು ಹಿಡಿದು ನಿಂತಿದ್ದಾರೆ. ಈ ಸಿನಿಮಾ ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡಲಿದೆ. ‘ಫಾರೆಸ್ಟ್’ ಸಿನಿಮಾಗೆ ಎನ್​ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಇದು ಅವರ ಮೊದಲ ನಿರ್ಮಾಣದ ಅನುಭವ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ‘ಫಾರೆಸ್ಟ್’ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ.

ರಂಗಾಯಣ ರಘು, ಚಿಕ್ಕಣ್ಣ ತೆರೆಮೇಲೆ ಇದ್ದರೆ ನಗು ಗ್ಯಾರಂಟಿ. ಇವರನ್ನು ಒಟ್ಟಿಗೆ ತೆರೆಮೇಲೆ ನೋಡೊಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ರಾಮನವಮಿ ಪ್ರಯುಕ್ತ ಫೋಟೋ ಹಂಚಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

ಇದನ್ನೂ ಓದಿ: ನಟ ಯಶ್​ ನೀಡಿದ ಬೆಂಬಲವನ್ನು ನೆನೆದ ‘ಉಪಾಧ್ಯಕ್ಷ’ ಚಿಕ್ಕಣ್ಣ

‘ಫಾರೆಸ್ಟ್’ ಚಿತ್ರಕ್ಕೆ ವಿ. ರವಿಶಂಕರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ ಇದೆ. ಧರ್ಮವೀರ್-ವೀರ್ ಸಮರ್ಥ್ ಸಂಗೀತ ಸಂಯೋಜನೆ ಇರಲಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ