ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ

‘ಫಾರೆಸ್ಟ್​’ ಸಿನಿಮಾದಲ್ಲಿ ಚಿಕ್ಕಣ್ಣ, ಶರಣ್ಯ ಶೆಟ್ಟಿ, ಅನೀಶ್ ತೇಜೇಶ್ವರ್, ಗುರುನಂದನ್, ಅವಿನಾಶ್, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸುನೀಲ್ ಕುಮಾರ್ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ ಹೊಸ ಹಾಡು ಮಿಲಿಯನ್​ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ
ಅನೀಶ್ ತೇಜೇಶ್ವರ್, ಚಿಕ್ಕಣ್ಣ, ಗುರುನಂದನ್
Follow us
ಮದನ್​ ಕುಮಾರ್​
|

Updated on: Jul 21, 2024 | 10:42 PM

ಸ್ಯಾಂಡಲ್​ವುಡ್​ನಲ್ಲೀಗ ವಿವಿಧ ಕಾನ್ಸೆಪ್ಟ್​ಗಳ ಸಿನಿಮಾ ಮೂಡಿಬರುತ್ತಿವೆ. ಈಗ ಶೂಟಿಂಗ್​ ಮುಗಿಸಿಕೊಂಡಿರುವ ‘ಫಾರೆಸ್ಟ್​’ ಚಿತ್ರದಲ್ಲೂ ಅಂಥ ಡಿಫರೆಂಟ್​ ಕಾನ್ಸೆಪ್ಟ್​ ಇದೆ ಎಂದು ತಂಡ ಹೇಳಿಕೊಂಡಿದೆ. ‘ಎನ್.ಎಂ.ಕೆ. ಸಿನಿಮಾಸ್’ ಬ್ಯಾನರ್​ನಲ್ಲಿ ಎನ್.ಎಂ. ಕಾಂತರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಂದ್ರ ಮೋಹನ್ ಅವರು ನಿರ್ದೇಶನ ಮಾಡಿದ್ದಾರೆ. ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ‘ಫಾರೆಸ್ಟ್’ ಸಿನಿಮಾದ ಹೊಸ ಸಾಂಗ್​ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.

‘ಫಾರೆಸ್ಟ್​’ ಸಿನಿಮಾ ಶುರುವಿನಿಂದಲೂ ಸದ್ದು ಮಾಡುತ್ತಾ ಬರುತ್ತಿದೆ. ಈಗ ‘ಓಡೋ ಓಡೋ..’ ಎಂಬ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ. ಈ ಹಾಡನ್ನು ಪುನೀತ್ ಆರ್ಯ ಅವರು ಬರೆದಿದ್ದಾರೆ. ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ‘ಎನ್.ಎಂ.ಕೆ ಸಿನಿಮಾಸ್’ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಖ್ಯಾತ ಸಿಂಗರ್​ ಕೈಲಾಶ್ ಖೇರ್ ಅವರು ಈ ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ಯೂಟ್ಯೂಬ್​ನಲ್ಲಿ ಈ ಹಾಡನ್ನು ಜನರು ಮೆಚ್ಚಿಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆದ ಈ ಸಾಂಗ್​ ಈಗಾಗಲೇ 1 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಪಾಸಿಟಿವ್​ ಕಮೆಂಟ್​ಗಳು ಹರಿದು ಬರುತ್ತಿದೆ. ಬಹುತಾರಾಗಣ ಇರುವ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಎಂ.ಎಂ. ಹಿಲ್ಸ್, ಮಡಿಕೇರಿ, ಸಂಪಾಜೆ ಫಾರೆಸ್ಟ್ ಮತ್ತು ಬೆಂಗಳೂರಿನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

‘ಫಾರೆಸ್ಟ್​’ ಚಿತ್ರದ ನಿರ್ದೇಶಕ ಚಂದ್ರಮೋಹನ್ ಹಾಗೂ ಸತ್ಯಶೌರ್ಯ ಸಾಗರ್ ಅವರ ಜಂಟಿಯಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಸತ್ಯಶೌರ್ಯ ಸಾಗರ್ ಅವರ ಸಂಭಾಷಣೆ ಈ ಸಿನಿಮಾದಲ್ಲಿದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ಆನಂದ್ ರಾಜವಿಕ್ರಮ್ ಅವರು ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ, ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು