AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಯದ ಜೊತೆ ಆ್ಯಕ್ಷನ್ ಅವತಾರದಲ್ಲಿ ಬಂದ ‘ಲಕ್ಷ್ಮೀಪುತ್ರ’ ಚಿಕ್ಕಣ್ಣ

‘ಉಪಾಧ್ಯಕ್ಷ’ ಸಿನಿಮಾದ ಯಶಸ್ಸಿನ ಬಳಿಕ ನಟ ಚಿಕ್ಕಣ್ಣ ಈಗ ‘ಲಕ್ಷ್ಮೀ ಪುತ್ರ’ ಚಿತ್ರದ ಮೂಲಕ ನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ. ಎ.ಪಿ. ಅರ್ಜುನ್ ಕಥೆ, ವಿಜಯ್ ಎಸ್. ಸ್ವಾಮಿ ನಿರ್ದೇಶನದ ಈ ಹಳ್ಳಿ ಸೊಗಡಿನ ಕಾಮಿಡಿ ಹಾಗೂ ಆ್ಯಕ್ಷನ್ ಚಿತ್ರವು ಇದೇ ಡಿಸೆಂಬರ್ 27ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

ಹಾಸ್ಯದ ಜೊತೆ ಆ್ಯಕ್ಷನ್ ಅವತಾರದಲ್ಲಿ ಬಂದ ‘ಲಕ್ಷ್ಮೀಪುತ್ರ’ ಚಿಕ್ಕಣ್ಣ
ಲಕ್ಷ್ಮೀಪುತ್ರ
ರಾಜೇಶ್ ದುಗ್ಗುಮನೆ
|

Updated on: Nov 17, 2026 | 3:10 PM

Share

ನಟ ಚಿಕ್ಕಣ್ಣ ಅವರು ಕಾಮಿಡಿಯನ್ ಪಾತ್ರದ ಮೂಲಕ ಮಿಂಚಿದವರು. ಈಗ ಅವರು ಹೀರೋ ಆಗಿ ಗಮನ ಸೆಳೆಯುವ ಪ್ರಯತ್ನದಲ್ಲಿದ್ದಾರೆ. ‘ಉಪಾಧ್ಯಕ್ಷ’ ಹೆಸರಿನ ಸಿನಿಮಾ ಮೂಲಕ ಮಿಂಚಿದ ಚಿಕ್ಕಣ್ಣ, ಈಗ ‘ಲಕ್ಷ್ಮೀಪುತ್ರ’ನಾಗಿ ಗಮನ ಸೆಳೆಯಲು ರೆಡಿ ಆಗಿದ್ದಾರೆ. ಈ ಚಿತ್ರದಲ್ಲಿ ಹಾಸ್ಯದ ಹೊಳೆಯ ಜೊತೆಗೆ ಆ್ಯಕ್ಷನ್ ಕೂಡ ಇದೆ. ಚಿಕ್ಕಣ್ಣ ಅವರು ಹಳ್ಳಿ ಹುಡುಗನ ಗೆಟಪ್​​ನಲ್ಲಿ ಗಮನ ಸೆಳೆದಿದ್ದಾರೆ.

‘ಲಕ್ಷ್ಮೀಪುತ್ರ’ ಚಿತ್ರದ ಟ್ರೇಲರ್​​ನಲ್ಲಿ ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ ಅನ್ನೋದು ಸ್ಪಷ್ಟವಾಗುತ್ತದೆ. ಕೃಷ್ಣ (ಚಿಕ್ಕಣ್ಣ) ಹಳ್ಳಿಯಲ್ಲಿರುವ ಹುಡುಗಿಯರಿಗೆಲ್ಲ ಕಾಳು ಹಾಕುತ್ತಾ ಜೀವನ ನಡೆಸುತ್ತಿರುತ್ತಾನೆ. 10 ಜನರಿಗೆ ಕಾಳು ಹಾಕಿ ರಿಜೆಕ್ಟ್ ಆಗೋದಕ್ಕಿಂತ ಒಂದೇ ಹುಡುಗಿಗೆ 10 ಬಾರಿ ಐ ಲವ್​​ ಯೂ ಎಂದರೆ ಬೀಳುತ್ತಾಳೆ ಎಂಬ ಬಲವಾದ ನಂಬಿಕೆಯಮೇಲೆ ಕಥಾ ನಾಯಕಿ (ವಂದಿತಾ ಗೌಡ) ಹಿಂದೆ ಬೀಳುತ್ತಾನೆ. ಈ ಚಿತ್ರದಲ್ಲಿ ಹಿರಿಯ ನಟಿ ತಾರಾ ಅವರು ಚಿಕ್ಕಣ್ಣನ ತಾಯಿ ಪಾತ್ರ ಮಾಡುತ್ತಿದ್ದಾರೆ.

‘ಲಕ್ಷ್ಮೀ ಪುತ್ರ’ ಸಿನಿಮಾದ ವಿಶೇಷತೆ ಎಂದರೆ ಚಿಕ್ಕಣ್ಣ ಅವರ ಆ್ಯಕ್ಷನ್. ಅವರು ಈ ಚಿತ್ರದಲ್ಲಿ ಜನರಿಗೆ ನಗುವಿನ ಜೊತೆ ಥ್ರಿಲ್ ಕೂಡ ಕೊಡುತ್ತಾರೆ ಎನ್ನಲಾಗಿದೆ. ಈ ವಿಷಯ ಅವರ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಸಿನಿಮಾನ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್: ಸಾಕ್ಷಿ ಹೇಳುವಾಗ ತಡಬಡಿಸಿದ ಚಿಕ್ಕಣ್ಣ; ಯಶಸ್ ಹೇಳಿದ್ದೇನು?

‘ಲಕ್ಷ್ಮೀಪುತ್ರ’ ಚಿತ್ರವನ್ನು ಎ.ಪಿ. ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಿಸುತ್ತಿದ್ದಾರೆ. ರವಿಕಿರಣ್ ಎಂ. ಗೌಡ ನಿರ್ಮಾಣದಲ್ಲಿ ಸಾತ್ ಕೊಟ್ಟಿದ್ದಾರೆ. ಚಿತ್ರಕ್ಕೆ ಎ.ಪಿ. ಅರ್ಜುನ್ ಅವರ ಕಥೆ ಮತ್ತು ಸಾಹಿತ್ಯವಿದ್ದು, ವಿಜಯ್ ಎಸ್. ಸ್ವಾಮಿ ನಿರ್ದೇಶನ ಮಾಡಿದ್ದಾರೆ. ಚಿಕ್ಕಣ್ಣ, ತಾರಾ ಅನುರಾಧಾ, ವಂದಿತಾ ಗೌಡ, ಕುರಿ ಪ್ರತಾಪ್, ಧರ್ಮಣ್ಣ ಹಾಗೂ ಮಿತ್ರ ಪ್ರಮುಖ ತಾರಾಗಣದಲ್ಲಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಗಿರೀಶ್ ಆರ್. ಗೌಡ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಹಾಗೂ ಮಾಸ್ ಮಾದ ಅವರ ಸಾಹಸ ನಿರ್ದೇಶನವಿದ್ದು, ‘ಡಿ ಬೀಟ್ಸ್’ ಆಡಿಯೋ ಹಕ್ಕುಗಳನ್ನು ಪಡೆದುಕೊಂಡಿದೆ. ಡಿಸೆಂಬರ್ 27ರಂದು ಈ ಚಿತ್ರ ವಿಶ್ವಾದ್ಯಂತ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
RDPR ಪರೀಕ್ಷೆಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆ ಮೇಲಿನ ಆರೋಪ ಕೆದಕಿದ ಇಡಿ
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಬಿಎಂಟಿಸಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧಕ್ಕೆ ಕ್ರಮ: ಖಾದರ್
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಮೀನು ರಪ್ತು ವಾಹನದಲ್ಲಿ ಸಾಗಿಸುತ್ತಿದ್ದ 35 ಲಕ್ಷ ಮೌಲ್ಯದ ಲಿಕ್ಕರ್​ ಜಪ್ತಿ
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಕಾಂಗ್ರೆಸ್ ನಾಯಕರ ವೈಯಕ್ತಿಕ ಟೀಕೆಗೆ ಯದುವೀರ್ ಒಡೆಯರ್ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು