AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಚಿತ್ರಮಂದಿರವನ್ನು ಶೇ.50 ಭರ್ತಿ ಮಾಡಲು ಮಾತ್ರ ಅವಕಾಶ ನೀಡಲಾಗಿದೆ.

ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ
ಸಿಎಂ ಬಳಿ ಮನವಿ ಇಟ್ಟ ಮಕ್ಕಳು
ರಾಜೇಶ್ ದುಗ್ಗುಮನೆ
| Edited By: |

Updated on: Apr 03, 2021 | 4:36 PM

Share

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗಷ್ಟೇ ಅವಕಾಶ ನೀಡಿದ ವಿಚಾರ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸರ್ಕಾರ ಏಕಾಏಕಿ ಈ ನಿಯಮ ಜಾರಿಗೆ ತಂದಿರುವ ಬಗ್ಗೆ ಚಿತ್ರರಂಗದಿಂದ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿದೆ. ಇತ್ತೀಚೆಗಷ್ಟೇ ತೆರೆಕಂಡಿರುವ ಯುವರತ್ನ ಸಿನಿಮಾ ಸರ್ಕಾರದ ಹೊಸ ನಿಯಮದಿಂದ ಸಾಕಷ್ಟು ತೊಂದರೆ ಅನುಭವಿಸಿದೆ. ಹೀಗಾಗಿ, ಅಪ್ಪು ಫ್ಯಾನ್ಸ್​ ಈ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಮಧ್ಯೆ, ಪುಟ್ಟ ಮಕ್ಕಳು ಸರ್ಕಾರಕ್ಕೆ ಮನವಿ ಒಂದನ್ನು ಮಾಡಿದ್ದಾರೆ. ಸದ್ಯ, ಈ ವಿಡಯೋ ಸಾಕಷ್ಟು ವೈರಲ್​ ಆಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಚಿತ್ರಮಂದಿರವನ್ನು ಶೇ.50 ಭರ್ತಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೊರೊನಾ ವೈರಸ್​ ಮಿತಿಮೀರಿ ಹೆಚ್ಚುತ್ತಿದ್ದು ಇದನ್ನು ನಿಯಂತ್ರಣ ಮಾಡಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಈಗ ಚಿತ್ರಮಂದಿರದಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡುವಂತೆ ಮಕ್ಕಳು ಬೇಡಿಕೆ ಇಟ್ಟಿದ್ದಾರೆ. ನಾವು ಭಾನುವಾರ ಯುವರತ್ನ ಸಿನಿಮಾ ನೋಡೋಕೆ ಹೋಗಬೇಕು. ಪ್ಲೀಸ್ ಸಿಎಂ ಸರ್ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಗೆ ಶೇಕಡಾ 100ರಷ್ಟು ಅವಕಾಶ ಕೊಡಿ. ನಾವು ಮಾಸ್ಕ್ ಧರಿಸಿ, ಸ್ಯಾನಿಟೈಸ್ ಮಾಡಿಕೊಂಡು ಹೋಗ್ತೇವೆ. ಅಪ್ಪು ಅಂದ್ರೆ ತುಂಬಾನೇ ಇಷ್ಟ, ನಾವು ಸಿನಿಮಾ ನೋಡಬೇಕು. ಯಾವುದೇ ಕಾರಣಕ್ಕೂ ಟಿಕೆಟ್ ಕ್ಯಾನ್ಸಲ್​ ಆಗಬಾರದು ಎಂದು ಮನವಿ ಮಾಡಿದ್ದಾರೆ.

ಕೊರೊನಾಗೆ ತತ್ತರಿಸಿದ್ದ ಕನ್ನಡ ಚಿತ್ರರಂಗ ಈಗತಾನೇ ಸುಧಾರಿಸಿಕೊಳ್ಳುತ್ತಿದೆ. ಸ್ಟಾರ್​ ನಟರ ಚಿತ್ರಗಳು ಒಂದಾದಮೇಲೆ ಒಂದರಂತೆ ತೆರೆಗೆ ಬರುತ್ತಿದ್ದು, ಪ್ರೇಕ್ಷಕರು ಕೂಡ ಥಿಯೇಟರ್​ನತ್ತ ಮುಖ ಮಾಡುತ್ತಿದ್ದಾರೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಸಿನಿ ಪ್ರಿಯರಿಗೆ ಶಾಕ್​ ನೀಡಿತ್ತು. ಸಿನಿಮಾ ಹಾಲ್​ಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶವನ್ನು ಸರ್ಕಾರ ಹೊರಡಿಸಿತ್ತು.

ಇದನ್ನೂ ಓದಿ: Lockdown: ಶೇ.50 ಆಸನ ಭರ್ತಿ ಆದೇಶಕ್ಕೆ ಸುದೀಪ್​ ಪ್ರತಿಕ್ರಿಯೆ! ಯುವರತ್ನ ಸಂಕಷ್ಟದ ಬಗ್ಗೆ ಕಿಚ್ಚ ಹೇಳಿದ್ದೇನು?

ಯುವರತ್ನ ವಿರುದ್ಧ ಸರ್ಕಾರದ ವ್ಯವಸ್ಥಿತ ಸಂಚು; ಪುನೀತ್ ಫ್ಯಾನ್ಸ್ ಆರೋಪ! ವಾಣಿಜ್ಯ ಮಂಡಳಿಗೆ ಮುತ್ತಿಗೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ