ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ

ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ
ಸೆಲೆಬ್ರಿಟಿ ಬಾಲ್ಯದ ಫೋಟೋ
Follow us
ರಾಜೇಶ್ ದುಗ್ಗುಮನೆ
|

Updated on:Jun 07, 2023 | 9:07 AM

ಸೋಶಿಯಲ್ ಮೀಡಿಯಾದಲ್ಲಿ ಈಗ ಥ್ರೋಬ್ಯಾಕ್ ಟ್ರೆಂಡ್ ಜೋರಾಗಿದೆ. ಬಾಲ್ಯದ ಫೋಟೋ ಹಂಚಿಕೊಂಡು ಥ್ರೋಬ್ಯಾಕ್ (Throwback Photo) ಹ್ಯಾಶ್​ಟ್ಯಾಗ್  ಹಾಕಲಾಗುತ್ತದೆ. ಕೆಲವೊಮ್ಮೆ ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ. ಬೇಸರದ ವಿಚಾರ ಎಂದರೆ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಬೇರಾರು ಅಲ್ಲ ಚಿರಂಜೀವಿ ಸರ್ಜಾ(Chiranjeevi Sarja) . ಇಂದು (ಜೂನ್ 7) ಅವರ ಮೂರನೇ ವರ್ಷದ ಪುಣ್ಯತಿಥಿ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರು 2020ರ ಜೂನ್ 7ರಂದು ಹೃದಯಾಘಾತದಿಂದ ಮೃತಪಟ್ಟರು. ಅವರ ಸಾವು ಇಡೀ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ದುಃಖ ತಂದಿತ್ತು. ಇಂದು ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅದೇ ರೀತಿ ಚಿರಂಜೀವಿ ಅವರು ಅಂದು ಹಂಚಿಕೊಂಡ ಫೋಟೋ ಒಂದನ್ನು ಈಗ ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಸಾಯುವುದಕ್ಕೂ ಒಂದು ದಿನ ಮೊದಲು ಅಂದರೆ ಜೂನ್ 6ರಂದು (2020) ಚಿರಂಜೀವಿ ಒಂದು ಫೋಟೋ ಶೇರ್ ಮಾಡಿಕೊಂಡಿದ್ದರು. ಈ ಫೋಟೋದಲ್ಲಿ ಚಿರಂಜೀವಿ, ಧ್ರುವ ಸರ್ಜಾ ಹಾಗೂ ಮತ್ತೋರ್ವ ವ್ಯಕ್ತಿ ಇದ್ದಾರೆ. ಬಾಲ್ಯದ ಫೋಟೋ ಹಾಗೂ ಲೇಟೇಸ್ಟ್ ಫೋಟೋನ ಜೋಡಿಸಿ ಪೋಸ್ಟ್ ಮಾಡಿದ್ದರು ಚಿರು. ‘ಅಂದು ಮತ್ತು ಇಂದು. ನಾವು ಹಾಗೆಯೇ ಇದ್ದೇವೆ. ಏನು ಹೇಳುತ್ತೀರಿ’ ಎಂದು ಅವರು ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದರು.

ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಮತ್ತೆ ವೈರಲ್ ಆಗುತ್ತಿದೆ. ಚಿರಂಜೀವಿಯನ್ನು ಅನೇಕರು ಮಿಸ್ ಮಾಡಿಕೊಂಡಿದ್ದಾರೆ. ಈಗಲೂ ಈ ಪೋಸ್ಟ್​ಗೆ ಕಮೆಂಟ್​ಗಳು ಬರುತ್ತಿವೆ. ಅನೇಕರು ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ:  ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೊರವಲಯದಲ್ಲಿರುವ ಧ್ರುವ ಸರ್ಜಾ ಫಾರ್ಮ್​ಹೌಸ್​ನಲ್ಲಿ ಮಾಡಲಾಗಿತ್ತು. ಇಂದು ಚಿರು ಅವರ ಸಮಾಧಿಗೆ ಇಡೀ ಕುಟುಂಬ ಭೇಟಿ ನೀಡಲಿದೆ. ಅಲ್ಲಿಗೆ ತೆರಳಿ ಪೂಜೆ ಮಾಡಲಿದೆ. ಈ ಮೂಲಕ ಚಿರುನ ನೆನಪಿಸಿಕೊಳ್ಳುವ ಕೆಲಸ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Wed, 7 June 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ