Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

Meghana Raj: ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರಂಜೀವಿ ಸರ್ಜಾ ಅವರ ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಿಸಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು
ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 07, 2021 | 3:00 PM

ನಟ ಚಿರಂಜೀವಿ ಸರ್ಜಾ ನಿಧನರಾಗಿ ಒಂದು ವರ್ಷ ಕಳೆದಿದೆ. 2020ರ ಜೂ.7ರಂದು ಚಿರು ಹೃದಯಾಘಾತದಿಂದ ನಿಧನರಾದ ಸುದ್ದಿ ಇಡೀ ಸ್ಯಾಂಡಲ್​ವುಡ್​ಗೆ ಶೋಕ ಉಂಟುಮಾಡಿತ್ತು. ಇಂದು ಅವರ ಮೊದಲ ವರ್ಷದ ಪುಣ್ಯತಿಥಿ. ಈ ಪ್ರಯುಕ್ತ ಸರ್ಜಾ ಕುಟುಂಬದವರು ಚಿರು ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮೇಘನಾ ರಾಜ್​ ಅವರು ಪುತ್ರ ಜ್ಯೂ. ಚಿರುನನ್ನೂ ಕರೆದುಕೊಂಡು ಹೋಗಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಸೋಮವಾರ ಬೆಳಗ್ಗೆ ಮೇಘನಾ ರಾಜ್​, ಜ್ಯೂ. ಚಿರು, ಪ್ರಮೀಳಾ ಜೋಷಾಯ್​, ಸುಂದರ್​ ರಾಜ್​ ಅವರು ಒಂದೇ ಕಾರಿನಲ್ಲಿ ಬೃಂದಾವನ ಫಾರ್ಮ್​ಹೌಸ್​ಗೆ ಆಗಮಿಸಿದರು. ಲಾಕ್​ಡೌನ್​ ಇರುವ ಕಾರಣ ಅಭಿಮಾನಿಗಳಿಗೆ ಸಮಾಧಿ ಬಳಿ ತೆರಳಲು ಅವಕಾಶ ನೀಡಿಲ್ಲ. ಕುಟುಂಬದವರು ಮಾತ್ರ ನಮನ ಸಲ್ಲಿಸಿದ್ದಾರೆ. ಇನ್ನು, ಚಿರುಗೆ ಸರ್ಜಾ ಕುಟುಂಬದವರು ಪತ್ರ ಬರೆದಿದ್ದು, ಅದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಇಡೀ ಸರ್ಜಾ ಕುಟುಂಬದ ಪರವಾಗಿ ಈ ಪತ್ರವನ್ನು ಬರೆಯಲಾಗಿದೆ. ‘ನಮ್ಮ ಹೃದಯದ ಚಿರಂಜೀವಿ, ನೀನು ದೇವರ ಮನೆಗೆ ಹೋಗಿ ಒಂದು ವರ್ಷ ಆಯಿತು. ಎಷ್ಟು ಬೇಗ ಒಂದು ವರ್ಷ. ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಉದಾರ ಗುಣ ಮತ್ತು ಅಜಾತಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದೂ ನಿನ್ನ ನೆನಪಲ್ಲೇ.. ನಿನ್ನ ಪ್ರೀತಿಯ ನಿನ್ನ ಕುಟುಂಬ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಧ್ರುವ ಸರ್ಜಾ ಮಾತ್ರವಲ್ಲದೇ, ಮೇಘನಾ ರಾಜ್​ ಕೂಡ ಈ ಪತ್ರವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಪುಣ್ಯತಿಥಿಗೂ ಮೊದಲು ಮೇಘನಾ ರಾಜ್​ ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದು, ‘ನನ್ನವನು’ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ಕಾರಣದಿಂದ ಚಿರು ಪುಣ್ಯತಿಥಿಯನ್ನು ಅಭಿಮಾನಿಗಳು ಸಾರ್ವಜನಿಕವಾಗಿ ಮಾಡಲು ಸಾಧ್ಯವಾಗಿಲ್ಲ. ಸೋಶಿಯಲ್​ ಮೀಡಿಯಾ ಮೂಲಕ ಎಲ್ಲರೂ ನಮನ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ:

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಬದುಕಲ್ಲಿ ನಗು ಅರಳಿಸಿದ ಜ್ಯೂ. ಚಿರು ಕಲರ್​ಫುಲ್​ ಫೋಟೋಗಳು

Published On - 1:41 pm, Mon, 7 June 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ