AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್

Meghana Raj: 2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು.

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್
ಚಿರಂಜೀವಿ ಸರ್ಜಾ-ಮೇಘನಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 07, 2021 | 7:29 AM

Share

ಸರಿಯಾಗಿ ಒಂದು ವರ್ಷದ ಹಿಂದಿನ ಮಾತು. ಹೀಗಾಗುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. 2020ರ ಜೂನ್​ 7ರ ಮಧ್ಯಾಹ್ನ ‘ಹೃದಯಾಘಾತದಿಂದ ಚಿರಂಜೀವಿ ಸರ್ಜಾ ನಿಧನ ಹೊಂದಿದ್ದಾರೆ’ ಎನ್ನುವ ವಿಚಾರ ಸಿಡಿಲಂತೆ ಬಂದಪ್ಪಳಿಸಿತ್ತು. ಈ ವಿಚಾರವನ್ನು ಅನೇಕರು ನಂಬಲೂ ಸಾಧ್ಯವಾಗಿರಲಿಲ್ಲ. ಅವರ ಕುಟುಂಬ ಹಾಗೂ ಅಭಿಮಾನಿಗಳು ಕಣ್ಣೀರಲ್ಲಿ ಮುಳುಗುವಂತಾಯಿತು. ಈ ಕಹಿ ನೆನಪಿಗೆ ಈಗ ಒಂದು ವರ್ಷ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಚಿರಂಜೀವಿ ಸರ್ಜಾ ನಿಧನರಾಗುವುದಕ್ಕೂ ಒಂದು ದಿನ ಮೊದಲು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತಂತ. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರ ವಯುಸ್ಸು ಚಿಕ್ಕದಾದ್ದರಿಂದ ಇದು ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂದು ಕುಟುಂಬದವರು ಭಾವಿಸಿರಲಿಲ್ಲ. ಮನೆಗೆ ಬಂದ ನಂತರ ಉಸಿರಾಟದ ತೊಂದರೆ ಜೊತೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಗಲೇ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿತ್ತು.

2009ರಲ್ಲಿ ತೆರೆಗೆ ಬಂದ ವಾಯುಪುತ್ರ ಸಿನಿಮಾ ಮೂಲಕ ಚಿರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದರು. ಅವರು ನಿಧನರಾಗುವುದಕ್ಕೂ ಕೆಲ ತಿಂಗಳ ಮೊದಲು ಅವರ ನಟನೆಯ ‘ಶಿವಾರ್ಜುನ’ ಸಿನಿಮಾ ರಿಲೀಸ್​ ಆಗಿತ್ತು. ಲಾಕ್​ಡೌನ್​ ಕಾರಣದಿಂದ ಸಿನಿಮಾ ಚಿತ್ರಮಂದಿರಗಳಿಂದ ತೆಗೆಯಬೇಕಾದ ಅನಿವಾರ್ಯತೆ ಬಂದಿತ್ತು.

ಮೊದಲ ವರ್ಷದ ಪುಣ್ಯತಿಥಿಗೂ ಮೊದಲು ಮೇಘನಾ ರಾಜ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ‘ನನ್ನವನು’ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್​ ಮಿತಿಮೀರಿದೆ. ಹೀಗಾಗಿ, ಇಂದು (ಜೂನ್​ 7) ಚಿರು ಅವರ ಒಂದು ವರ್ಷದ ಪುಣ್ಯಸ್ಮರಣೆ ಕಾರ್ಯವನ್ನ ಸರ್ಜಾ ಕುಟುಂಬ ಸಿಂಪಲ್ ಆಗಿ ಮಾಡಲಿದೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ಮೇಘನಾ ರಾಜ್ ​- ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರುಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ತೋರಿಸುತ್ತಿರುವ ಫ್ಯಾನ್ಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್