ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ. ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ […]

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ
ಸಾಧು ಶ್ರೀನಾಥ್​ Edited By:

Updated on: Jun 07, 2020 | 6:45 PM

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ.

ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು ಇದೀಗ 4 ತಿಂಗಳ ಗರ್ಭಿಣಿಯಾಗಿದ್ದಾರೆ. ಆದರೆ ಮಗುವಿನ ಮುಖ ನೋಡದೆ ತಂದೆಯೇ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿನಿಂದ ಸರ್ಜಾ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us