Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ

Raayan Raj Sarja: ಮೇಘನಾ ರಾಜ್​ ಅವರು ತಮ್ಮ ಪುತ್ರ ರಾಯನ್​ ರಾಜ್​ ಸರ್ಜಾನ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದೆ.

Meghana Raj: ಅಮ್ಮ ಅಂತ ಹೇಳಿಕೊಟ್ರೂ ಅಪ್ಪ ಎನ್ನುತ್ತಾನೆ ರಾಯನ್​ ರಾಜ್​ ಸರ್ಜಾ; ಇಲ್ಲಿದೆ ಮೇಘನಾ ರಾಜ್​ ಮಗನ ಕ್ಯೂಟ್​ ವಿಡಿಯೋ
ಚಿರಂಜೀವಿ ಸರ್ಜಾ, ರಾಯನ್ ರಾಜ್ ಸರ್ಜಾ, ಮೇಘನಾ ರಾಜ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 15, 2022 | 12:44 PM

ನಟಿ ಮೇಘನಾ ರಾಜ್ (Meghana Raj)​ ಅವರು ಸಿನಿಮಾ ಕೆಲಸಗಳ ಜೊತೆಯಲ್ಲೇ ಮಗನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಪುತ್ರ ರಾಯನ್​ ರಾಜ್​ ಸರ್ಜಾ (Raayan Raj Sarja) ಫೋಟೋ ಮತ್ತು ವಿಡಿಯೋಗಳನ್ನು ಮೇಘನಾ ಅವರು ಆಗಾಗ ಹಂಚಿಕೊಳ್ಳುತ್ತಾರೆ. ಈಗ ಅವರೊಂದು ಹೊಸ ವಿಡಿಯೋ ಶೇರ್​ ಮಾಡಿಕೊಂಡಿದ್ದು, ಚಿರಂಜೀವಿ ಸರ್ಜಾ (Chiranjeevi Sarja) ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬಂತೆ ರಾಯನ್​ ರಾಜ್​ ಸರ್ಜಾಗೆ ಮೇಘನಾ ರಾಜ್ ಅವರು ಅನೇಕ ವಿಚಾರಗಳನ್ನು ಕಲಿಸುತ್ತಿದ್ದಾರೆ. ‘ಅಮ್ಮ’ ಎಂದು ಕರೆಯುವುದನ್ನು ಅವರು ಹೇಳಿಕೊಟ್ಟಿದ್ದಾರೆ. ಆದರೆ ಒಂದೆರಡು ಬಾರಿ ಅಮ್ಮ ಎಂದು ಕರೆದ ಬಳಿಕ ಮತ್ತೆ ‘ಅಪ್ಪ’ ಎಂದು ಕೂಗಿದ್ದಾನೆ ರಾಯನ್​. ಈ ವಿಡಿಯೋ ಈಗ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

ಪತಿಯ ನಿಧನ, ಮಗುವಿನ ಆಗಮನ, ಕೊವಿಡ್​ ಕಿರಿಕಿರಿ ಸೇರಿದಂತೆ ಹಲವು ಕಾರಣಗಳಿಂದಾಗಿ ಚಿತ್ರರಂಗದಿಂದ ಬ್ರೇಕ್​ ಪಡೆದುಕೊಂಡಿದ್ದ ಮೇಘನಾ ರಾಜ್​ ಅವರು ಈಗಾಗಲೇ ನಟನೆಗೆ ಮರಳಿದ್ದಾರೆ. ಕಿರುತೆರೆಯ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಪಾಲ್ಗೊಳ್ಳುವ ಮೂಲಕವೂ ಅವರು ಗಮನ ಸೆಳೆದಿದ್ದಾರೆ. ಸದ್ಯ ಬ್ಯುಸಿ ಆಗಿರುವ ಅವರು ಮಗನ ಆರೈಕೆಗೂ ಹೆಚ್ಚು ಸಮಯ ನೀಡುತ್ತಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಆಗಾಗ ಅಪ್​ಡೇಟ್​ ನೀಡುತ್ತಿರುತ್ತಾರೆ.

ಇದನ್ನೂ ಓದಿ
Image
‘ಡಾನ್ಸಿಂಗ್​ ಚಾಂಪಿಯನ್​’ ಶೋ​ ನಡುವೆ ಮೇಘನಾ ರಾಜ್​ ಫೋಟೋಶೂಟ್​; ಇಲ್ಲಿವೆ ಚೆಂದದ ಫೋಟೋಗಳು
Image
ರಾಯನ್​ ಸರ್ಜಾಗೆ ಮಾತು ಕಲಿಸಿದ ಮೇಘನಾ ರಾಜ್​; ಇಲ್ಲಿದೆ ವಿಡಿಯೋ
Image
‘ಇಂಥ ಸಿನಿಮಾ ಮಾಡೋದಕ್ಕೆ ಹೆಮ್ಮೆ ಇದೆ’ ಹೊಸ ಚಿತ್ರದ ಬಗ್ಗೆ ಮಾಹಿತಿ ಬಿಟ್ಟುಕೊಟ್ಟ ಮೇಘನಾ ರಾಜ್​
Image
‘ರಾಯನ್ ಸರ್ಜಾ​ ತಂದೆ ತರಹ ಆಗಬೇಕು ಎಂದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು’; ಮೇಘನಾ ರಾಜ್​ ಭಾವುಕ ನುಡಿ
View this post on Instagram

A post shared by Meghana Raj Sarja (@megsraj)

ಚಿರಂಜೀವಿ ಸರ್ಜಾ ನಟಿಸಿರುವ ‘ರಾಜಮಾರ್ತಾಂಡ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇದರ ಟೀಸರ್​ ಅನ್ನು ರಾಯನ್​ ರಾಜ್​ ಸರ್ಜಾ ಕೈಯಿಂದ ರಿಲೀಸ್​ ಮಾಡಿಸುವ ಮೂಲಕ ನಿರ್ದೇಶಕ ರಾಮ್​ ನಾರಾಯಣ್​ ಅವರು ಅಭಿಮಾನ ಮೆರೆದಿದ್ದರು. ಅಷ್ಟೇ ಅಲ್ಲ, ಈ ಚಿತ್ರದ ಒಂದು ದೃಶ್ಯದಲ್ಲಿ ರಾಯನ್​ ರಾಜ್​ ಸರ್ಜಾ ಕಾಣಿಸಿಕೊಳ್ಳಲಿರುವುದು ವಿಶೇಷ. ಹಾಗಾಗಿ ‘ರಾಜಮಾರ್ತಾಂಡ’ ಬಿಡುಗಡೆ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಕಟೌಟ್​ ಜೊತೆಗೆ ರಾಯನ್​ನ ಕಟೌಟ್​ ಕೂಡ ನಿಲ್ಲಿಸಬೇಕು ಎಂದು ಅವರು ಆಸೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:20 pm, Wed, 15 June 22

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು