ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ.

ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ
ರಾಜಮೌಳಿ-ವಿಕ್ರಮ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 23, 2021 | 2:50 PM

ಎಸ್​.ಎಸ್​. ರಾಜಮೌಳಿ (SS Rajamouli) ಅವರ ಕಲೆಯೇ ಅಂತಹದ್ದು. ಅವರು ಒಮ್ಮೆ ಪಾತ್ರದ ಬಗ್ಗೆ ಆಲೋಚನೆ ಮಾಡಿದರು ಎಂದರೆ, ಅದಕ್ಕೆ ಸೂಕ್ತವಾದ ಕಲಾವಿದರನ್ನೂ ಕೂಡ ಆಯ್ಕೆ ಮಾಡುತ್ತಾರೆ. ಖ್ಯಾತ ನಟ ರಾನಾ ದಗ್ಗುಬಾಟಿ (Rana Daggubati) ಅವರಿಗೆ ‘ಬಾಹುಬಲಿ’ (Bahubali) ಚಿತ್ರದಲ್ಲಿ ವಿಲನ್​ ಪಾತ್ರ ನೀಡಿದ್ದರು ರಾಜಮೌಳಿ. ಈಗ ಅವರ ಮುಂದಿನ ಚಿತ್ರಕ್ಕಾಗಿ ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ. ಖ್ಯಾತ ನಟ ಈ ಚಿತ್ರದಲ್ಲಿ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಯಾಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ. ಈ ಸಿನಿಮಾ ರಿಲೀಸ್​ ಆದ ನಂತರ ರಾಜಮೌಳಿ ಒಂದು ಸಣ್ಣ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ. ಅದಾದ ಬಳಿ ಮಹೇಶ್​ ಬಾಬು ಜತೆ ಅವರು ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ಪಾತ್ರದ ಆಯ್ಕೆ ಪ್ರಕ್ರಿಯೆ ಸದ್ದಿಲ್ಲದೆ ನಡೆಯುತ್ತಿದೆಯಂತೆ! ಹಾಗಾದರೆ ಮಹೇಶ್​ ಬಾಬು-ರಾಜಮೌಳಿ ಸಿನಿಮಾಗೆ ವಿಲನ್​ ಯಾರು? ಚಿಯಾನ್​ ವಿಕ್ರಮ್​.

ತಮಿಳಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದವರು ವಿಕ್ರಮ್​. ಯಾವುದೇ ಪಾತ್ರ ಕೊಟ್ಟರೂ ನೀರು ಕುಡಿದಷ್ಟೇ ಸುಲಭವಾಗಿ ನಟನೆ ಮಾಡಿ ತೋರಿಸುವ ಕಲೆ ಅವರಿಗೆ ಕರಗತವಾಗಿದೆ. ಈಗ ರಾಜಮೌಳಿ ಸಿನಿಮಾಗೆ ವಿಕ್ರಮ್​ ಪ್ರಮುಖ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಭಿನ್ನ ಗೆಟಪ್​ ಇರಲಿದೆಯಂತೆ. ಈಗ ವಿಕ್ರಮ್ ಕೂಡ ಈ ತಂಡ ಸೇರಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಖುಷಿ ನೀಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ವಿಕ್ರಮ್​ ಅವರು ಸದ್ಯ ಪಾ. ರಂಜಿತ್ ಹಾಗೂ ರಜನಿಕಾಂತ್​ ನಿರ್ಮಾಣದ, ಮಹೇಶ್​ ನಾರಾಯಣ್​​ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಜಯ್​ ಸೇತುಪತಿ ಕೂಡ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: RRR ರಿಲೀಸ್​ಗೂ ಮುನ್ನವೇ ಸಲ್ಮಾನ್​ ಖಾನ್​ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್​ಡೇಟ್​

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ