ಫೆ.5ರಿಂದ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ; ಸ್ಯಾಂಡಲ್​ವುಡ್​ನಲ್ಲಿ ಹಬ್ಬದ ವಾತಾವರಣ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಸಭೆ ನಡೆಸಿ ಬಂದಿದ್ದರು. ಈಗ ಶೇ. 100 ಆಸನ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಶನಿವಾರದಿಂದಲೇ (ಫೆಬ್ರವರಿ 5) ಹೊಸ ನಿಯಮ ಜಾರಿಗೆ ಬರಲಿದೆ.

ಫೆ.5ರಿಂದ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ; ಸ್ಯಾಂಡಲ್​ವುಡ್​ನಲ್ಲಿ ಹಬ್ಬದ ವಾತಾವರಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 04, 2022 | 2:59 PM

ಕೊವಿಡ್​ ಮೂರನೇ ಅಲೆ (Covid 3rd Wave) ಕಾರಣದಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕೊವಿಡ್​ ಪ್ರಭಾವ ಕಡಿಮೆ ಆಗಿದೆ. ಹೀಗಾಗಿ, ಬಹುತೇಕ ಎಲ್ಲಾ ಉದ್ಯಮಗಳಿಗೆ ರಿಲೀಫ್​ ನೀಡಲಾಗಿದೆ. ಆದರೆ, ಚಿತ್ರಮಂದಿರಗಳ ಮೇಲೆ ಹೇರಿದ್ದ ಕೆಲ ನಿರ್ಬಂಧಗಳಿಗೆ ರಿಲೀಫ್​ ಸಿಕ್ಕಿರಲಿಲ್ಲ. ಈ ಬಗ್ಗೆ ಅನೇಕ ಸ್ಟಾರ್​ ನಟರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಜತೆ ಸಭೆ ನಡೆಸಿ ಬಂದಿದ್ದರು. ಈಗ ಶೇ. 100 ಆಸನ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಶನಿವಾರದಿಂದಲೇ (ಫೆಬ್ರವರಿ 5) ಹೊಸ ನಿಯಮ ಜಾರಿಗೆ ಬರಲಿದೆ. ಈ ಘೋಷಣೆಯಿಂದ ಚಿತ್ರಮಂದಿರದಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ವಿಚಾರಕ್ಕೆ ಸಂಬಂಧಿಸಿ 4-5 ದಿನಗಳಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಪೂರ್ಣ ಮಾಹಿತಿ ನೀಡುವಂತೆ ಸಿಎಂ ಕೇಳಿದರು. ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಕೆಲದಿನಗಳ ಹಿಂದೆ ಹೇಳಿದ್ದರು. ಈಗ ಸರ್ಕಾರ ಶೇ.100ಕ್ಕೆ ಅವಕಾಶ ಮಾಡಿದೆ.

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಯೋಗಕೇಂದ್ರ, ಜಿಮ್​, ಈಜುಕೊಳಗಳಲ್ಲಿ ಶೇ.100ರಷ್ಟು ಅವಕಾಶ ಇದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಎರಡು ಡೋಸ್​ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಎಲ್ಲ ನಿರ್ಬಂಧ, ಕ್ರಮಗಳನ್ನು ಹಿಂಪಡೆಯಲಾಗುತ್ತಿದೆ’ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಫಿಲ್ಮ್ ಚೇಂಬರ್​ ಆಕ್ರೋಶ ಹೊರಹಾಕಿತ್ತು. ‘ಚಿತ್ರೋದ್ಯಮದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬೇರೆ ಎಲ್ಲಾ ಉದ್ಯಮಗಳಿಗೂ ಸರ್ಕಾರ ಅವಕಾಶ ನೀಡಿದೆ.  ಚಿತ್ರೋದ್ಯಮಕ್ಕೆ ಯಾಕೆ ಸಂಪೂರ್ಣ ಅವಕಾಶ ನೀಡುತ್ತಿಲ್ಲ? ಈಗಾಗಲೇ ನಿರ್ಮಾಪಕರು, ಕಲಾವಿದರು ಬೀದಿಗೆ ಬಂದಿದ್ದಾರೆ. ಥಿಯೇಟರ್​ಗಳಿಗೆ ಶೇ.100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ನೀಡಲಿ’ ಎಂದು ಫಿಲ್ಮ್ ಚೇಂಬರ್ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿಕೆ ನೀಡಿದ್ದರು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರಮಂದಿರದ ಮೇಲೆ ಹೇರಿರುವ ನಿರ್ಬಂಧ ತೆಗೆಯಬೇಕು ಎಂದು ಒತ್ತಾಯ ಮಾಡಿದ್ದರು. ಈಗ ಸರ್ಕಾರದಿಂದ ಇದಕ್ಕೆ ಅವಕಾಶ ಸಿಕ್ಕಿದ್ದು, ಮುಂದೆ ಬರುವ ಸಿನಿಮಾಗಳಿಗೆ ಸಹಕಾರಿಯಾಗಲಿದೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿ: ಹರ್ಷ-ಭುವಿ ಮದುವೆ ಮುರಿಯಲು ಸಾನಿಯಾ ಮಾಡಿದ ಹೊಸ ಪ್ಲ್ಯಾನ್​ ಯಶಸ್ವಿ ಆಗೋದು ಪಕ್ಕಾ? 

Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

Published On - 2:46 pm, Fri, 4 February 22

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ