AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

Ramu Death News ರಾಮು ಸ್ಯಾಂಡಲ್​ವುಡ್​ನ ನಿರ್ಮಾಪಕ ಕೂಡ ಹೌದು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.

Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ
ಪತ್ನಿ ಮಾಲಾಶ್ರೀ ಹಾಗೂ ಮಗಳೊಂದಿಗೆ ರಾಮು
ರಾಜೇಶ್ ದುಗ್ಗುಮನೆ
|

Updated on:Apr 26, 2021 | 9:21 PM

Share

ಬೆಂಗಳೂರು: ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದು ಒಂದು ಕಡೆಯಾದರೆ, ಕೊರೊನಾದಿಂದ ನಿರ್ದೇಶಕರು, ನಟರು ಮೃತಪಡುತ್ತಿರುವುದು ಮತ್ತೊಂದು ಕಡೆ. ಈಗ ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ.

ರಾಮು ಅವರಿಗೆ ಕಳೆದವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದರು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಹೀಗಾಗಿ, ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಮು ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಚಿತ್ರಗಳನ್ನು ರಾಮು ನಿರ್ಮಾಣ ಮಾಡುತ್ತಿದ್ದರು.  ಅವರು ಕೋಟಿ ರಾಮು ಎಂದೇ ಖ್ಯಾತರಾಗಿದ್ದರು.

ರಾಮು ನಿಧನಕ್ಕೆ ಸ್ಯಾಂಡಲ್​ವುಡ್​ ಶೋಕ ವ್ಯಕ್ತಪಡಿಸಿದೆ. ಅವರನ್ನು ನಾವು ಇಷ್ಟು ಬೇಗನೆ ಕಳೆದುಕೊಳ್ಳಬಾರದಿತ್ತು ಎಂದು ಸ್ಯಾಂಡಲ್​ವುಡ್​ ಮಂದಿ ಮರುಗಿದ್ದಾರೆ.

ಕೊರೊನಾ ಕಾರಣದಿಂದಲೂ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಕೊವಿಡ್ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ನಿಧನರಾದರು.

ಇದನ್ನೂ ಓದಿ: Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ

Published On - 8:38 pm, Mon, 26 April 21

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ